ಗದಗ | ದಲಿತರ ಅನುದಾನ ದುರ್ಬಳಕೆ; ಸರ್ಕಾರದ ನಡೆ ಖಂಡನೀಯ: ಸುರೇಶ ಚಲವಾದಿ

Date:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯವೆಂದು ಗದಗ ಜಿಲ್ಲಾ ಎಸ್‌ಸಿ/ಎಸ್‌ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಸುರೇಶ ವಾಯ್ ಚಲವಾದಿ ಕಿಡಿಕಾರಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ರಾಜ್ಯ ಕಾಂಗ್ರೆಸ್ ಸರ್ಕಾರ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಜನತೆಗೆ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸಲು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ 11,000 ಕೋಟಿ ಮೊತ್ತವನ್ನು ಬಳಸಿಕೊಳ್ಳಲು ಮುಂದಾಗಿರುವುದು ದುರಂತ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

“ಲಳೆದ ತಿಂಗಳಲ್ಲಿ ಸರ್ಕಾರವೇ ಎಲ್ಲ ಸಚಿವರ ಸಭೆ ಕರೆದು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನ ಕೇವಲ ದಲಿತ ಜನಾಂಗದ ಅಭಿವ್ರದ್ದಿಗೆ ಮಾತ್ರ ಮೀಸಲಾಗಬೇಕು. ಬೇರೆ ಯೋಜನೆಗಳಿಗೆ ಬಳಕೆಯಾಗಬಾರದೆಂದು 7ಡಿ ಕಾಯ್ದೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿಸಡ. ಆದರೆ, ಆದೇಶ ಹೊರಡಿಸಿದ ತಿಂಗಳಲ್ಲಿಯೇ ತನ್ನದೇ ಆದೇಶವನ್ನು ಗಾಳಿಗೆ ತೂರಿ ದಲಿತರ ಹಣವನ್ನು ದುರುಪಯೋಗಕ್ಕೆ ಸರ್ಕಾರ ಮುಂದಾಗಿರುವುದು ಸರಿಯಲ್ಲ” ಎಂದು ಕಿಡಿಕಾರಿದ್ದಾರೆ.

“ಕಳೆದ 2018ರಲ್ಲಿಯೂ ಕೂಡಾ ಕಾಂಗ್ರೆಸ್ ರೈತರ ಸಾಲ ಮನ್ನಾ ಮಾಡಲು ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ ಒಟ್ಟು 929.41 ಕೋಟಿ ರೂ. ಬಳಕೆ ಮಾಡಿಕೊಂಡಿದೆ. ಅದಲ್ಲದೇ, ಅದೇ 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ರಾಜ್ಯಕೀಯ ಪರಸ್ಥಿತಿಗಳ ಬಗ್ಗೆ ಮಾಹಿತಿ ಕಲೆ ಹಾಕಲು ಪೂರಕ ಅಂದಾಜಿನಲ್ಲಿ 10 ಕೋಟಿ ಅನುದಾನವನ್ನು ಪೋಲೀಸ್ ಇಲಾಖೆಗೆ ವರ್ಗಾಯಿಸಿ ದಲಿತರ ಮೀಸಲು ಹಣವನ್ನ ದುರ್ಬಳಕೆ ಮಾಡಿಕೊಂಡಿದೆ. ಚುನಾವಣಾ ಕರ್ತವ್ಯಕ್ಕೆ ಪೋಲೀಸರನ್ನು ನಿಯೋಜಿಸುವದಕ್ಕಾಗಿ 10 ಕೋಟಿ ದಲಿತರ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ವಂಚಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೂಡಲೇ ರಾಜ್ಯ ಸರ್ಕಾರ ದಲಿತರ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸುವದನ್ನು ನಿಲ್ಲಿಸಬೇಕು. ದಲಿತರ ಅಭಿವ್ರದ್ದಿಗೆ ಆಧ್ಯತೆ ನೀಡಬೇಕು. ಇಲ್ಲದೇ ಹೋದಲ್ಲಿ ಸರ್ಕಾರದ ವಿರುದ್ದ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...

ವಿಜಯಪುರ | ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಭಾರತೀಯ ತತ್ವಶಾಸ್ತ್ರಕ್ಕೆ ಮಹತ್ವದ ಕೊಡುಗೆ: ಪ್ರೊ. ಪಿ.ಜಿ. ತಡಸ

ಮಧ್ವಾಚಾರ್ಯರು ದ್ವೈತ ತತ್ವವನ್ನು ದೇಶಾದ್ಯಂತ ಪಸರಿಸುವ ಮೂಲಕ ಭಾರತೀಯ ತತ್ವಶಾಸ್ತ್ರ ಹಾಗೂ...

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...