ಗದಗ | ಮುಂಗಾರು ಹಂಗಾಮು ಪ್ರಾರಂಭ; ಕೃಷಿಕರಿಗೆ ಅಧಿಕಾರಿಗಳಿಂದ ಸಲಹೆ-ಸೂಚನೆ

Date:

  • ಜಿಲ್ಲೆಯಲ್ಲಿ 3,02,690 ಹೆಕ್ಟೆರ್‌ ಪ್ರದೇಶದಲ್ಲಿ ಬಿತ್ತನೆ ಸಾಧ್ಯತೆ
  • ಜಿಲ್ಲೆಯಲ್ಲಿ 18,496 ಮೆಟ್ರಿಕ್‌ ಟನ್ ರಸಗೊಬ್ಬರ ದಾಸ್ತಾನು

ಮುಂಗಾರು ಹಂಗಾಮು ಪ್ರಾರಂಭವಾಗುತ್ತಿರುವ ಹಿನ್ನೆಲೆ ಗದಗ ಜಿಲ್ಲೆಯ ಪ್ರಗತಿಪರ ಕೃಷಿಕರು ಹಾಗೂ ರೈತ ಮುಖಂಡರೊಂದಿಗೆ ಜಂಟಿ ಕೃಷಿ ನಿರ್ದೇಶಕರು ಸಭೆ ನಡೆಸಿದ್ದಾರೆ. ರೈತರಿಗೆ ಮುಂಗಾರು ಬಿತ್ತನೆ ಕುರಿತಂತೆ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಬಿತ್ತನೆ ಕಾರ್ಯ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಅಂದಾಜು 3,02,690 ಹೆಕ್ಟೆರ್‌ ಪ್ರದೇಶದಲ್ಲಿ ಬಿತ್ತನೆ ಆಗುವ ಸಾಧ್ಯತೆ ಇದೆ. ಹೈಬ್ರಿಡ್‌ ಜೋಳ, ಮುಸುಕಿನ ಜೋಳ, ಸಜ್ಜೆ, ಹೆಸರು, ಶೇಂಗಾ, ಸೂರ್ಯಕಾಂತಿ, ಹೈಬ್ರಿಡ್ ಹತ್ತಿ ಬಿತ್ತನೆಗಾಗಿ ಒಟ್ಟಾರೆ 85,989 ಕ್ವಿಂಟಲ್‌ ಬಿತ್ತನೆ ಬೀಜ ಬೇಕಾಗಬಹುದು. ಈಗಾಗಲೇ ಜಿಲ್ಲೆಯಲ್ಲಿ 8,685 ಕ್ವಿಂಟಲ್ ಬಿತ್ತನೆ ಬೀಜ ದಾಸ್ತಾನಿದ್ದು, ಬಿತ್ತನೆಗೆ ಅನುಸಾರವಾಗಿ ಬಿತ್ತನೆ ಬೀಜಗಳ ಸರಬರಾಜು ಆಗಲಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ತಿಳಿಸಿದರು.

ರಸಗೊಬ್ಬರ ದಾಸ್ತಾನು: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಅಗತ್ಯವಿರುವ ಬೀಜ, ರಸಗೊಬ್ಬರಗಳ ದಾಸ್ತಾನು ಮಾಡಿಕೊಳ್ಳಲಾಗಿದ್ದು, ಒಟ್ಟಾರೆ ಯೂರಿಯಾ 7,885 ಮೆಟ್ರಿಕ್‌ ಟನ್, ಡಿ.ಎ.ಪಿ 5,406, ಎಂ.ಓ.ಪಿ. 208, ಎನ್.ಪಿ.ಕೆ.ಎಸ್ 4,861, ಎಸ್.ಎಸ್.ಪಿ. 134 ಸೇರಿದಂತೆ ಒಟ್ಟಾರೆ 18,496 ಮೆಟ್ರಿಕ್‌ ಟನ್ ರಸಗೊಬ್ಬರ ದಾಸ್ತಾನು ಮಾಡಿಟ್ಟುಕೊಳ್ಳಲಾಗಿದೆ. ಬಿತ್ತನ ಪ್ರಮಾಣ ಹಾಗೂ ಅಗತ್ಯಕ್ಕನುಸಾರ ಪೂರೈಕೆಗೆ ಕ್ರಮ ವಹಿಸಲಾಗುವದು. ರೈತರು ಬೆಳೆಯುವ ಬೆಳೆಗೆ ಅನುಸಾರವಾಗಿ ಬಿತ್ತನೆ ಪ್ರಮಾಣಕ್ಕೆ ಅಗತ್ಯವಿರುವ ರಸಗೊಬ್ಬರಗಳನ್ನು ಮಾತ್ರ ಖರೀದಿಸಿ ಬಳಸಬೇಕು ಅನಗತ್ಯ ರಸಗೊಬ್ಬರ ದಾಸ್ತಾನು ಬೇಡ ಎಂದು ಸಲಹೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಗದಗ 01

ರಸಗೊಬ್ಬರಗಳನ್ನು ನಿಗದಿತ ಬೆಲೆಗೆ ಮಾರಾಟ ಮಾಡಬೇಕು ಹೆಚ್ಚಿನ ದರದಲ್ಲಿ ರಸಗೊಬ್ಬರರ ಮಾರಾಟ ಮಾಡುತ್ತಿರುವದು ಕಂಡುಬಂದಲ್ಲಿ ದೂರು ನೀಡಲು ತಿಳಿಸಿದರು.

ಜಿಲ್ಲೆಯಲ್ಲಿ ಇನ್ನು 37,900 ರೈತರು ಈ ಕೆವೈಸಿ ಮಾಡಿಸಲು ಬಾಕಿ ಇದ್ದು, ಗ್ರಾಮಗಳಲ್ಲಿನ ನಾಗರಿಕ ಸೇವಾ ಕೇಂದ್ರ ಮತ್ತು ಗ್ರಾಮ ಓನ್ ಕೇಂದ್ರದ ಮುಖಾಂತರ ತುರ್ತಾಗಿ ಈಕೆವೈಸಿ ಮಾಡಿಸಿಕೊಳ್ಳಬೇಕು. ಮುಂದಿನ 14 ನೇ ಕಂತಿನ ಅನುದಾನ ಬಾಕಿ ಇರುವ ರೈತರು ಈಕೆವೈಸಿ ಮಾಡಿಸಿಕೊಳ್ಳಲು ಸುಚಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಶಾಸಕಿ ಕರೆಮ್ಮಗೆ ನಿಂದನೆ ಆರೋಪ; ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

ಮುಂಗಾರು ಮಳೆ ಆರಂಭವಾಗಲಿದ್ದು ರೈತರು ಬಿತ್ತನೆಗೆ ಅಗತ್ಯ ಸಿದ್ಧತೆಗಳನ್ನು, ಬೀಜೊಪಚಾರ ಮಾಡಿಟ್ಟುಕೊಳ್ಳಬೇಕು. ಮಳೆ ಹಾಗೂ ವಾತಾವರಣಕ್ಕೆ ಅನುಗುಣವಾಗಿ ಯಾವ ಬೆಳೆ ಬೆಳೆಯಬೇಕು ಹಾಗೂ ಬೀಜೊಪಚಾರ ಯಾವ ಹಂತದಲ್ಲಿ ಮಾಡಬೇಕು ಎನ್ನುವದರ ಬಗ್ಗೆ ರೈತರು ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆದು ಬಿತ್ತನೆ ಕಾರ್ಯ ಕೈಗೊಳ್ಳಬೇಕು. ಬಿತ್ತನೆ ಕಾರ್ಯದ ನಂತರ ತಾವು ಬೆಳೆದ ಬೆಳೆಗೆ ರೈತರೆಲ್ಲರೂ ಬೆಳೆ ವಿಮೆ ಮಾಡಿಸಬೇಕು. ಇದರಿಂದ ಒಂದು ವೇಳೆ ಬೆಳೆ ಹಾನಿಯಾದಲ್ಲಿ ಬೆಳೆ ವಿಮೆ ಆಸರೆಯಾಗಲಿದೆ ಎಂದರು.

ಸಭೆಯಲ್ಲಿ ಪ್ರಗತಿಪರ ರೈತರು, ರೈತ ಮುಖಂಡರು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ʼಜೈಶ್ರೀರಾಮ್‌ʼ ಹಾಡು ಹಾಕಿದಕ್ಕೆ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳ ನಡುವೆ ಗಲಾಟೆ

ಧರ್ಮವೊಂದಕ್ಕೆ ಸಂಬಂಧಿಸಿದ ಗೀತೆಗೆ ನೃತ್ಯ ಮಾಡುತ್ತಿರುವಾಗ ಎರಡು ಸಮುದಾಯದ ವಿದ್ಯಾರ್ಥಿಗಳು ಪರಸ್ಪರ...

ಪ್ರಜ್ವಲ್‌ ರೇವಣ್ಣ ಪ್ರಕರಣ ಯಾವುದೇ ಡಿಟರ್ಜೆಂಟ್‌ನಿಂದ ಹೋಗುವ ಕಲೆಯಲ್ಲ: ಮಾಜಿ ರಾಜ್ಯಸಭಾ ಸದಸ್ಯ ಜವರೇಗೌಡ

ದೇವೇಗೌಡ ಅವರ ಕುಟುಂಬದಿಂದ ಸಮಾಜದ ಮೇಲಾಗಿರುವ ಅತ್ಯಾಚಾರ, ದುರ್ನಡತೆಯನ್ನು ಯಾವುದೇ ನಾಗರಿಕರೂ...

ಎಂ.ಉಷಾ ಅವರ‌ ‘ಬಾಳ‌ ಬಟ್ಟೆ’ ಕಾದಂಬರಿಗೆ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ

ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು 2024ನೇ ಸಾಲಿನ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಡಾ.ಎಂ.ಉಷಾ...

ತುಮಕೂರು | ಬಿಯರ್‌ ಬಾಟಲಿ ಹಿಡಿದು ಹೊಡೆದಾಡಿದ ಕೆಪಿಟಿಸಿಎಲ್‌ ಎಂಜಿನಿಯರ್‌ಗಳು

ತುಮಕೂರು ಜಿಲ್ಲೆಯ ಪಾವಗಡದ ಕೆಪಿಟಿಸಿಎಲ್‌ನ ಇಬ್ಬರು ಜೂನಿಯರ್‌ ಎಂಜಿನಿಯರ್‌ಗಳು ಹಾಗೂ ಇಬ್ಬರು...