ಗದಗ | ಮುಂಡರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಕಚೇರಿ ಸ್ವಚ್ಛತೆ ಮರೀಚಿಕೆ; ಅಧಿಕಾರಿಗಳ ನಿರ್ಲಕ್ಷ್ಯ

Date:

ರೈತರ ಹಿತಾಸಕ್ತಿಯನ್ನು ಕಾಪಾಡಬೇಕಿದ್ದ ಕೃಷಿ ಉತ್ಪನ್ನ ಮಾರುಕಟ್ಟೆ ಆಡಳಿತ ಕಟ್ಟಡ ನಿರ್ವಹಣೆ ಇಲ್ಲದೆ ಬಿಕೋ ಎನ್ನುತ್ತಿದೆ. ಆವರಣದ ತುಂಬೆಲ್ಲ ಸಾರಾಯಿ ಬಾಟಲಿಗಳು, ಪ್ಯಾಕೆಟ್‌ಗಳು, ನೀರಿನ ಪೌಚುಗಳ ರಾಶಿ ಬಿದ್ದಿದ್ದು, ರಾತ್ರಿಯಾದರೆ ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಡುತ್ತದೆ. ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಎಪಿಎಂಸಿ ಮಾರುಕಟ್ಟೆ ಹಾಳುಕೊಂಪೆಯಂತಾಗಿದೆ.

- Advertisement -

ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ವಹಣೆ ಇಲ್ಲದೆ ಹಾಳಾಗುತ್ತಿದೆ. ಸುಮಾರು ಮೂವತ್ತು ವರ್ಷಗಳಿಂದ  ಇದ್ದ ಎಪಿಎಂಸಿಯ ಕಟ್ಟಡ, ಹಳೆಯ ಕಟ್ಟಡವಾಗಿದ್ದರೂ ಉತ್ತಮ ಸ್ಥಿತಿಯಲ್ಲಿದೆ. ಹೊಸ ಎಪಿಎಂಸಿ ಆದ ನಂತರ ಈ ಹಳೆಯ ಎಪಿಎಂಸಿ ಆಡಳಿತ ಕಟ್ಟಡ ಮೂರ್ನಾಲ್ಕು ವರ್ಷಗಳಿಂದ ನಿರ್ವಹಣೆಯಿಲ್ಲದೆ ಹಾಳುಕೊಂಪೆಯಾಗಿದ್ದು, ಅಕ್ರಮ ಚಟುವಟಿಕೆಗಳ ತಾಣವಾಗಿ, ಕುಡುಕರ ಅಡ್ಡವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
ಕೃಷಿ ಉತ್ಪನ್ನ ಮಾರುಕಟ್ಟೆ

ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಈ ಎಪಿಎಂಸಿ ಹತ್ತಿರದಲ್ಲಿ ಕೆಸಿಸಿ ಬ್ಯಾಂಕ್, ನ್ಯಾಯಬೆಲೆ ಅಂಗಡಿ ಹಾಗೂ ತರಕಾರಿ ಮಾರುಕಟ್ಟೆಯೂ ಇದೆ. ಸಾರ್ವಜನಿಕರು, ರೈತರು, ಮಹಿಳೆಯರು ಓಡಾಡುವುದಕ್ಕೂ ಮುಜುಗರ ತರುವಂತಹ ಸ್ಥಿತಿ ನಿರ್ಮಾಣವಾಗಿದೆ.

ಬಳಕೆಯಾಗದ ಕೃಷಿ ಉತ್ಪನ್ನ ಮಾರುಕಟ್ಟೆ ಆಡಳಿತ ಕಚೇರಿ

ಕೃಷಿ ಉತ್ಪನ್ನ ಮಾರುಕಟ್ಟೆ ಆಡಳಿತ ಕಚೇರಿ ಕಟ್ಟಡ ಹಳೆಯದಾಗಿದ್ದರೂ ಉತ್ತಮವಾಗಿದೆ. ನಾಲ್ಕೈದು ಕೊಠಡಿಗಳಿವೆ. ಪಕ್ಕದಲ್ಲಿಯೇ ಇನ್ನೊಂದು ಕಟ್ಟಡವಿಡೆ. ರೈತರು ಮಾರಾಟಕ್ಕೆ ತಂದ ಉತ್ಪನ್ನಗಳನ್ನು ಇಡಲು ವಿಶಾಲವಾದ ತೆರೆದ ಗೋದಾಮು ಇದ್ದೂ ಇಲ್ಲದಂತಾಗಿದೆ. ಈ ಎಲ್ಲ ಕಟ್ಟಡಗಳು ಉತ್ತಮ ಸ್ಥಿತಿಯಲ್ಲಿದ್ದರೂ ಬಳಕೆಯಾಗದೆ ಕುಡುಕರ ಅಡ್ಡವಾಗಿ ಮಾರ್ಪಟ್ಟಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ 1

ಅವರಣದ ತುಂಬೆಲ್ಲ ಸಾರಾಯಿ ಪ್ಯಾಕೆಟ್, ಬಾಟಲಿಗಳ ದರ್ಬಾರು

ಕೃಷಿ ಉತ್ಪನ್ನ ಮಾರುಕಟ್ಟೆ ಆಡಳಿತ ಕಚೇರಿ ರೈತರಿಗೆ ಮುಕ್ತವಾಗಿ ಓಡಾಟ ಮಾಡಲು ಅವಕಾಶ ಮಾಡಿಕೊಡಬೇಕಿತ್ತು. ಆದರೆ ರೈತರು ಆಡಳಿತ ಕಚೇರಿ ಆವರಣದಲ್ಲಿ ಹೊರಟರೆ ಮೂಗು ಮುಚ್ಚಿಕೊಂಡು ಹೋಗುವಂಥ ಪರಿಸ್ಥಿತಿ ಉಂಟಾಗಿದೆ. ವಿಶಾಲವಾದ ಆವರಣದ ತುಂಬೆಲ್ಲ ಸಾರಾಯಿ ಪ್ಯಾಕೆಟ್‌ಗಳು, ಬಾಟಲಿಗಳೇ ರಾರಾಜಿಸುತ್ತಿವೆ. ಇದರಿಂದ ವಿಶಾಲವಾದ ಆವರಣ ಗಬ್ಬು ನಾರುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ಹೋಗುವಂಥ ದಃಸ್ಥಿತಿ ಎದುರಾಗಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ 2

ಶೌಚಾಲಯವಾಗಿ ಬಳಕೆ

ಕೃಷಿ ಉತ್ಪನ್ನ ಮಾರುಕಟ್ಟೆ ಆವರಣ ಶೌಚಾಲಯವಾಗಿ ಮಾರ್ಪಟ್ಟಿದೆ. ಮುಖ್ಯ ರಸ್ತೆಗೆ ಹೊಂದಿಕೊಂಡಂತೆ ಎರಡ್ಮೂರು ಕಿಲೋಮೀಟರ್ ಅಂತರದಲ್ಲಿ ಯಾವುದೇ ಸಾರ್ವಜನಿಕ ಶೌಚಾಲಯ ಇಲ್ಲದಿರುವುದಕ್ಕೆ ಪುರಸಭೆಯ ನಿರ್ಲಕ್ಷವೇ ಕಾರಣವಾಗಿದೆ. ಇದರಿಂದ ನಿತ್ಯ ಆವರಣವನ್ನು ಜನರು ಶೌಚಾಲಯವನ್ನಾಗಿ ಮಾಡಿಕೊಂಡಿದ್ದಾರೆ. ಇದರಿಂದ ಇಡೀ ಆವರಣವೇ ಗಬ್ಬುನಾತ ಬೀರುತ್ತದೆ.

ಕೃಷಿ ಉತ್ಪನ್ನ ಮಾರುಕಟ್ಟೆ 3

ರೈತ ನಾಗಪ್ಪ ಮೇಟಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಹೊಸ ಎಪಿಎಂಸಿ ಆಗಿದ್ದರಿಂದ ಇದನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇಲ್ಲಿ ಆಡಳಿತ ಮಾಡುವ ಎಂಎಲ್‌ಎ ಸರಿಯಿಲ್ಲ. ಇಲ್ಲಿರುವ ಸುಮಾರು ಮಳಿಗೆಗಳಿಗೆ ಬಾಡಿಗೆಯನ್ನು ಕಟ್ಟಿಸಿಕೊಳ್ಳುತ್ತಿದ್ದಾರೆ. ಇದನ್ನು ಸರಿಯಾಗಿ ವ್ಯವಸ್ಥೆ ಮಾಡುತ್ತಿಲ್ಲ. ಗಿಡಗಂಟಿ, ಸಾರಾಯಿ ಬಾಟಲಿ ಎಲ್ಲವನ್ನೂ ಸ್ವಚ್ಛ ಮಾಡಬೇಕಿತ್ತು. ಯಾರೂ ಮಾಡುತ್ತಿಲ್ಲ. ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಬರೀ ತಮ್ಮದಷ್ಟೇ ನೋಡಿಕೊಳ್ಳುತ್ತಾರೆಯೇ ಹೊರತು, ರೈತರ ಬಗ್ಗೆ ಕಾಳಜಿ ಇಲ್ಲ. ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳು ಹಾಗೂ ಪುರಸಭೆ ಬೇಜವಾಬ್ದಾರಿಯಿಂದ ಹೀಗೆಲ್ಲಾ ಆಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಕೃಷಿ ಉತ್ಪನ್ನ ಮಾರುಕಟ್ಟೆ 4

ಈ ಸುದ್ದಿ ಓದಿದ್ದೀರಾ? ಮಳವಳ್ಳಿ | ಕನ್ನಡ ನಾಡು, ನುಡಿ ಉಳಿಸಲು ಜಯ ಕರ್ನಾಟಕ ಸಂಘ ಸದಾ ಸಕ್ರಿಯ: ಯೋಗಣ್ಣ

ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಚಂದ್ರು ಪೂಜಾರ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಇಲ್ಲಿ ಕುಡಿಯೋದು ಇಸ್ಪೀಟ್ ಆಡುವುದು ಸೇರಿದಂತೆ ಎಲ್ಲ ರೀತಿಯ ಅನೈತಿಕ ಚಟುವಟಿಕೆಗಳು ಇಲ್ಲಿ ನಡೆಯುತ್ತವೆ. ಎಲ್ಲೆಂದರಲ್ಲಿ ಸಾರಾಯಿ ಪ್ಯಾಕೆಟ್, ಬಾಟಲಿಗಳು ಕಾಣುತ್ತವೆ. ಅಲ್ಲದೆ ಇದನ್ನು ಶೌಚಾಲಯ ಮಾಡಿಕೊಂಡಿದ್ದಾರೆ. ಸ್ವಚ್ಛತೆಯೇ ಇಲ್ಲ. ಇದರಿಂದ ಸಾಂಕ್ರಾಮಿಕ ರೋಗಗಳು ಬರುವ ಸಂಭವವಿದೆ. ಕೃಷಿ ಆಡಳಿತ ಅಧಿಕಾರಿಗಳು ಹಾಗೂ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನ ಎದ್ದುಕಾಣುತ್ತಿದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತು ಸ್ವಚ್ಛತೆ ಮಾಡಬೇಕು” ಎಂದು ಆಗ್ರಹಿಸಿದರು.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...