ಗದಗ | ಮುಂಡರಗಿ ತಾಲೂಕು ಪಂಚಾಯತ್ ವಿಶಿಷ್ಟ ನಡೆ; ಮದುವೆ ಮನೆಯಲ್ಲಿ ಮತದಾನ ಜಾಗೃತಿ

Date:

Advertisements

ಮುಂಡರಗಿ ಪಟ್ಟಣದ ಶಾದಿಮಹಲ್‌ನಲ್ಲಿ ಶುಕ್ರವಾರ ಏರ್ಪಡಿಸಿದ್ದ ನದಾಫ- ಹರ್ಲಾಪೂರ ಕುಟುಂಬದ ಮದುವೆ ಸಮಾರಂಭದಲ್ಲಿ ತಾಲೂಕು ಪಂಚಾಯಿತಿಯ ಸರ್ವ ಸಿಬ್ಬಂದಿಗಳು ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ನೇತೃತ್ವದಲ್ಲಿ ಭಾಗವಹಿಸಿ ಮದುವೆ ಮಂಟಪದಲ್ಲಿಯೇ ಕಡ್ಡಾಯ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.

ಕಲಕೇರಿ ಗ್ರಾಮದ ಯಮನೂರಸಾಬ ಅವರ ಜೊತೆ ಜಹೀದಾಬೇಗಂ ನವಜೀವನಕ್ಕೆ ಕಾಲಿಟ್ಟರು. ಈ ವೇಳೆ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಮದುವೆಗೆ ಬಂದ ಬಂಧುಗಳಲ್ಲಿ ವಧು ವರರ ಜೊತೆ ವೇದಿಕೆಯ ಮೇಲಿನಿಂದಲೇ ಮತದಾನದ ಕುರಿತು ಜಾಗೃತಿ ಮೂಡಿಸಿದರು.

ತಾಪಂ ಇಓ ವಿಶ್ವನಾಥ ಹೊಸಮನಿ ಮಾತನಾಡಿ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಉತ್ತಮ ನಾಯಕರನ್ನು ಆಯ್ಕೆ ಮಾಡುವ ಅವಕಾಶ ನಿಮ್ಮದಾಗಿದೆ. ಪ್ರತಿಯೊಬ್ಬರೂ ಹಕ್ಕು ಚಲಾಯಿಸಿ, ಸಂವಿಧಾನದ ಆಶಯ ಮತ್ತು ಪ್ರಜಾಪ್ರಭುತ್ವ ಯಶಸ್ವಿಗೊಳಿಸಬೇಕು. ಯಾವುದೇ ರೀತಿ ಮತದಾನದಿಂದ ದೂರ ಉಳಿಯಬಾರದು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಗದಗ | ಮತದಾನದ ಮಹತ್ವ ಕುರಿತು ಯುವ ಮತದಾರರಿಂದ ಮಾನವ ಸರಪಳಿ

ವಧು-ವರರಿಗೆ ಹಾಗೂ ಮದುವೆಗೆ ಹಾಜರಾದವರಿಗೆ ಚುನಾವಣೆಯಲ್ಲಿ ಮತದಾನ ನಮ್ಮ ಹಕ್ಕು ಪ್ರತಿಯೊಬ್ಬರೂ ತಪ್ಪದೆ ಮತದಾನ ಮಾಡಬೇಕೆಂದು ಪ್ರತಿಜ್ಞಾ ವಿಧಿ ಬೋಧಿಸಿದರು.

ಪಿಡಿಒ ಫಕ್ರುದ್ದೀನ್ ನಧಾಪ, ಸಂತೋಷ ಮೇಟಿ, ಅಕ್ಕಮಹಾದೇವಿ ರುದ್ರೇಶ್ವರಮಠ, ತಾಪಂ ಸಿಬ್ಬಂದಿಗಳಾದ ಎಚ್ ಎಂ ಕಾತರಕಿ, ಸಿ ಬಿ ಪಾಟೀಲ, ಅಶೋಕ ಅಣ್ಣಿಗೇರಿ, ಸಿದ್ದು ಮಡಿವಾಳರ, ಮೋಹನ ಹೊಂಬಳ ಹಾಗೂ ವಿವಿಧ ಗ್ರಾಮ ಪಂಚಾಯತ್ ಸಿಬ್ಬಂದಿ ಸೇರಿದಂತೆ ಇತರ‌ರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X