ಗದಗ ತಾಲೂಕಿನ ಲಕ್ಕುಂಡಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನವದೆಹಲಿ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಮತ್ತು ಜಿಲ್ಲಾ ಪಂಚಾಯತ್ ಗದಗ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಜರುಗಿತು.
ನೋಬೆಲ್‍ಪುರಸ್ಕೃತ ವಿಜ್ಞಾನಿ ಸರ್ ಸಿ ವಿ ರಾಮನ್ ಅವರು ಆವಿಷ್ಕರಿಸಿದ ರಾಮನ್ ಪರಿಣಾಮದ ಕುರಿತು ವಿದ್ಶಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿದರು.
ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಪ್ಪ ದಂಡಿನ್ ಕಾರ್ಯಕ್ರಮ ಉದ್ಘಾಟಿಸಿದರು, ಮುಖ್ಯೋಪಾಧ್ಯಾಯ ಯಮನೂರಸಾಬ್ ತಕ್ಕಲಕೊಟೆ ಅಧ್ಯಕ್ಷತೆ ವಹಿಸಿಕೊಂಡಿದ್ದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ನಾಲ್ಕು ವರ್ಷದ ಪದವಿ ಕೋರ್ಸ್‌ನ ನಿರ್ಧಾರ ಘೋಷಣೆ ವಿಳಂಬ; ಎನ್‌ಇಪಿ ಹಿಂಪಡೆಗೆ ಆಗ್ರಹ
ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ ವಿ ನಡುವಿನಮನಿ, ಜಿಲ್ಲಾ ಪಂಚಾಯತ್ ಯೋಜನಾ ಸಂಯೋಜಕ ಮಂಜುನಾಥ ತೋಟದ ಸೇರಿದಂತೆ
ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
