ಗದಗ | ನೀಟ್ ರದ್ದು ಸೇರಿ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಎಸ್‌ಎಫ್‌ಐಯಿಂದ ಪ್ರತಿಭಟನೆ

Date:

ನೀಟ್ ರದ್ದುಪಡಿಸಬೇಕು, ಹಾಸ್ಟೆಲ್ ಪ್ರಾರಂಭಿಸಿ ಹಾಗೂ ವಿದ್ಯಾರ್ಥಿಗಳಿಗೆ ಉಂಟಾಗಿರುವ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

- Advertisement -

ಜಿಲ್ಲೆಯ ಗಜೇಂದ್ರಗಡದ ಪುರಸಭೆಯಿಂದ ಹೊರಟ ವಿದ್ಯಾರ್ಥಿಗಳ ಮೆರವಣಿಗೆಯು ಮೈಸೂರು ಮಠ, ದುರ್ಗಾ ಸರ್ಕಲ್, ಮಾರ್ಗವಾಗಿ ಕೆ ಕೆ ಸರ್ಕಲ್ ನಲ್ಲಿ ಮಾನವ ಸರಪಳಿ ಮಾಡಿ, ಸಮಸ್ಯೆ ಬಗೆಹರಿಸಲು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಎಸ್ಎಫ್ಐನ ರಾಜ್ಯ ಮುಖಂಡ ಗಣೇಶ ರಾಠೋಡ್ ಮಾತನಾಡಿ, “ನೀಟ್ ಪರೀಕ್ಷೆ ರದ್ದುಪಡಿಸಬೇಕು. ನೆಟ್  ಪರೀಕ್ಷೆಯಲ್ಲಿ ನಡೆದ ಹಗರಣವನ್ನು ನಿಪಕ್ಷಪಾತ ತನಿಖೆ ಮಾಡಬೇಕು. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿದೆ. ‘ಒಂದು ರಾಷ್ಟ್ರ, ಒಂದು ಪರೀಕ್ಷೆ’ ಎಂಬ ಘೋಷಣೆಯ ಅಡಿಯಲ್ಲಿ, ಇಡೀ ಪರೀಕ್ಷಾ ವ್ಯವಸ್ಥೆಯು ಕುಸಿದಿದೆ ಮತ್ತು ಅನಿರ್ದಿಷ್ಟಾವಧಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಅಪಾಯಕ್ಕೆ ಸಿಲುಕಿಸಿದೆ” ಎಂದು ತಿಳಿಸಿದರು.

sfi 2

ಎಸ್ಎಫ್ಐನ ಜಿಲ್ಲಾ ಮುಖಂಡರಾದ ಚಂದ್ರು ರಾಠೋಡ್ ಮಾತನಾಡಿ, “ಗಜೇಂದ್ರಗಡ ನಗರವು ಶಿಕ್ಷಣ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಬೆಳೆಯುತ್ತಿರುವ ನಗರವಾಗಿದೆ. ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ನಗರಕ್ಕೆ ಬರುತ್ತಿರುವ ಕಾರಣ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಪ್ರಾರಂಭಿಸಬೇಕು. ಗ್ರಾಮೀಣ ಪ್ರದೇಶಗಳಿಂದ ಶಿಕ್ಷಣಕ್ಕಾಗಿ ನಗರಕ್ಕೆ ಬರುವ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು. ಗಜೇಂದ್ರಗಡದಲ್ಲಿ ಸ್ನಾತಕೋತ್ತರ ಪದವಿ ಕೇಂದ್ರ ಪ್ರಾರಂಭಿಸಬೇಕು. ಗಜೇಂದ್ರಗಡ ತಾಲೂಕು ಘೋಷಣೆ ಆಗಿ 5-6 ವರ್ಷಗಳಾದರೂ ಕೂಡ, ಸರಿಯಾಗಿ ಎಲ್ಲ ತಾಲೂಕು ಕಚೇರಿಗಳನ್ನು ಪ್ರಾರಂಭಿಸಿಲ್ಲ. ಹಾಗಾಗಿ, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಪ್ರಾರಂಭಿಸಬೇಕು” ಎಂದು ಆಗ್ರಹಿಸಿದರು.

“ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭಗೊಂಡಿದ್ದು, ಶಾಲಾ ಕಾಲೇಜಿನಲ್ಲಿ ಶೈಕ್ಷಣಿಕ ವಾತಾವರಣವೇ ಇಲ್ಲದಂತಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದ ಶಾಲಾ ಕಾಲೇಜುಗಳಲ್ಲಿ ಇರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮುಂದಾಗಬೇಕೆಂದು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್‌ ಸಂಘಟನೆಯು ಒತ್ತಾಯಿಸುತ್ತದೆ” ಎಂದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಗಜೇಂದ್ರಗಡ ತಹಶೀಲ್ದಾರ್ ಪ್ರತಿಭಟನಾಕಾರರ ಮನವಿ ಸ್ವೀಕರಿಸಿದರು. ಬಳಿಕ ಭರವಸೆ ನೀಡಿದ ಅವರು, “ಸ್ಥಳೀಯ ಸಮಸ್ಯೆಗಳ ಕುರಿತು ಎಲ್ಲ ಇಲಾಖೆಯ ಅಧಿಕಾರಿಗಳನ್ನು ಮತ್ತು ಡಿಪೋ ಮ್ಯಾನೇಜರ್ ಅವರನ್ನು ಒಳಗೊಂಡು ಸಭೆ ಕರೆಯುತ್ತೇನೆ. ವಿದ್ಯಾರ್ಥಿ ಮುಖಂಡರ ಜೊತೆ ಕೂಡ ಸಭೆ ಮಾಡಿ ಬಗೆಹರಿಸಲು ತಕ್ಷಣವೇ ಕ್ರಮ ಕೈಗೊಳ್ಳುತ್ತೇವೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐನ ತಾಲೂಕು ಕಾರ್ಯದರ್ಶಿ ಶರಣು ಎಂ, ಮುಖಂಡರಾದ ಮಾಂತೇಶ್, ಬಸವರಾಜ, ಅನಿಲ್, ಸುನೀಲ್, ಗುರು, ಭೀಮ, ನಂದಿನಿ, ಲಕ್ಷ್ಮೀ, ವಿಜಯಕುಮಾರ್, ಬಸು ಪಾಟೀಲ್, ಅಕ್ಷತಾ, ಬಾನು, ಉಮೇಶ್, ದ್ಯಾಮಣ್ಣ, ಕಿರಣ ರಾಠೋಡ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...