ಮಾರ್ಚ್ 3ರಂದು ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ನೀಟ್-UG 2026 ಪರೀಕ್ಷೆಯನ್ನು ರದ್ದುಗೊಳಿಸಿ ಮರುಪರೀಕ್ಷೆಗೆ ಆದೇಶಿಸಿ , ವಿದ್ಯಾರ್ಥಿಗಳ ಜೀವನದ ಜೊತೆಗೆ ಚೆಲ್ಲಾಟ ಆಡುತ್ತಿರುವ ಎನ್.ಟಿ.ಎ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗದಗ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಮನವಿ ಸಲ್ಲಿಸಿ ಎಸ್ಎಫ್ಐ ಜಿಲ್ಲಾಧ್ಯಕ್ಷರು ಚಂದ್ರು ರಾಠೋಡ ಮಾತನಾಡಿ, “ಮೇ 3ರಂದು ಪರೀಕ್ಷೆಯನ್ನು ರದ್ದುಗೊಳಿಸಲು ಕಾರಣವಾದ ನೀಟ್ ಯುಜಿ 2026 ಪರೀಕ್ಷೆಯ ಪ್ರಮುಖ ಪ್ರಶ್ನೆಪತ್ರಿಕೆ ಸೋರಿಕೆಗೆ ಭಾರತ ವಿದ್ಯಾರ್ಥಿ ಫೆಡರೇಷನ್ ಗದಗ ಜಿಲ್ಲಾ ಸಮಿತಿ ಖಂಡಿಸಿತ್ತದೆ. ಆರಂಭದಿಂದಲೂ ಪರೀಕ್ಷೆಗಳ ದುರುಪಯೋಗಕ್ಕೆ ಕುಖ್ಯಾತವಾಗಿರುವ ಎನ್‌ಟಿಎ, ಪರೀಕ್ಷೆಗಳ ನಿರ್ವಹಣೆಯಲ್ಲಿ ತನ್ನ ಅಸಮರ್ಥತೆಯನ್ನು ಮತ್ತೊಮ್ಮೆ ಸಾಬೀತುಪಡಿಸುತ್ತಿದೆ. ಈ ಹಿಂದೆ ಹಲವಾರು ಅಕ್ರಮ ಮಾಡಿರುವುದು ಬೆಳಕಿಗೆ ಬಂದಿದೆ ಇಂತಹ ಅಸಮರ್ಥ ಎನ್‌ಟಿಎ, ಸಂಸ್ಥೆಯನ್ನು ರದ್ದುಗೊಳಿಸಬೇಕು” ಎಂದರು.
“ವರದಿಗಳ ಪ್ರಕಾರ, ಒಟ್ಟು 720 ಅಂಕಗಳಲ್ಲಿ ಸುಮಾರು 600 ಅಂಕಗಳ ಪ್ರಶ್ನೆಗಳು ಸೋರಿಕೆಯಾಗಿದೆ. ಪರೀಕ್ಷೆಯಲ್ಲಿನ 180 ಪ್ರಶ್ನೆಗಳಲ್ಲಿ ಸುಮಾರು 15 ಪ್ರಶ್ನೆಗಳನ್ನು ಸಂಭಾವ್ಯ ಪ್ರಶ್ನೆಪತ್ರಿಕೆಯ ಮೂಲಕ ಮುಂಚಿತವಾಗಿ ಪ್ರಸಾರ ಮಾಡಲಾಗಿದೆ ಮತ್ತು ರಸಾಯನಶಾಸ್ತ್ರ ವಿಭಾಗದಿಂದ ಸುಮಾರು 120 ಪ್ರಶ್ನೆಗಳನ್ನು ಅಕ್ಷರಶಃ ಸೋರಿಕೆ ಮಾಡಲಾಗಿದೆ ಎಂದು ವರದಿಯಾಗಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವುದಕ್ಕೆ ಕೇಂದ್ರದ ಮೋದಿ ಸರ್ಕಾರ ನೇರ ಹೊಣೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಸ್ ಎಫ್ ಐ ರಾಜ್ಯ ಉಪಾಧ್ಯಕ್ಷರು ಗಣೇಶ ರಾಠೋಡ ಮಾತನಾಡಿ, “ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮೇ.3ರಂದು ನಡೆಸಲಾದ NEET UG 2026 ಪರೀಕ್ಷೆಯನ್ನು ಸುಮಾರು 22ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು. ಆದರೆ, ಈ ಪರೀಕ್ಷೆಯ ಪ್ರಶ್ನೆಪತ್ರಿಕೆ ರಾಜಸ್ಥಾನದಲ್ಲಿ ಸೋರಿಕೆಯಾಗಿದ್ದು, ಆದ ಕಾರಣ ಇದನ್ನು ಸಿಬಿಐ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣವಾದ ಶಿಕ್ಷೆ ವಿಧಿಸಬೇಕು” ಎಂದು ಒತ್ತಾಯಿಸಿತ್ತದೆ.
“ನಿನ್ನೆ ಪರಿಕ್ಷೆ ಸೋರಿಕೆ ಹಿನ್ನಲೆಯಲ್ಲಿ ದೆಹಲಿ ಹಾಗೂ ಕೇರಳದಲ್ಲಿ ಎಸ್ ಎಫ್ ಐ ಸಂಘಟನೆ ಮುಖಂಡರು ಹೋರಾಟಕ್ಕೆ ಮುಂದಾಗಿದ್ದಾರೆ ಅವರನ್ನು ಕೇಂದ್ರದ ಮೋದಿ ಸರ್ಕಾರ ಬಂಧಿಸಿದೆ ಅವರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.
ಮನವಿ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯ ಸಮಿತಿ ಸದಸ್ಯರು ಶರಣು ಮಾಟರಂಗಿ ಉಪಸ್ಥಿತರಿದ್ದರು.




