ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಘಟನೆಯ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸಾಮಾಜಿಕ ಕಾರ್ಯಕರ್ತರು ಹಾಗೂ ದಲಿತ ಮುಖಂಡರು ಫಕ್ಕೀರೇಶ ಮ್ಯಾಟನ್ನವರ ಅವರು ಆಗ್ರಹಿಸಿದರು.
ಈ ಕುರಿತು ಗದಗನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಫಯಾಜ್ ಎಂಬ ಯುವಕ ಬಿವಿಬಿ ಕಾಲೇಜಿನ ಆವರಣದಲ್ಲಿ ಅದೇ ಕಾಲೇಜಿನ ವಿದ್ಯಾರ್ಥಿನಿ ನೇಹಾಳನ್ನು ಪ್ರೀತಿಯ ನೆಪದದಲ್ಲಿ 9 ಬಾರಿ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗೆ ಕಾನೂನು ಶಿಕ್ಷೆ ಆಗಬೇಕೆಂದು ಆಗ್ರಹಿಸಿದರು.
ಏಕೆಂದರೆ, ಸಮಾಜದಲ್ಲಿ ಇಂತಹ ಘಟನೆಗಳಿಂದ ಸುವ್ಯವಸ್ಥೆ ಹಾಳಾಗುತ್ತವೆ. ಪಾಲಕರು ತಮ್ಮ ಹೆಣ್ಣುಮಕ್ಕಳನ್ನು ಕಾಲೇಜುಗಳಿಗೆ ಕಳಿಸಲು ಹೆದರುವ ಪರಿಸ್ಥಿತಿ ಎದುರಾಗಿದೆ. ಸಮಾಜದಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು. ಹಾಗಾಗಿ ಇಂತಹವರಿಗೆ ಗುಂಡು ಹಾರಿಸಿರಿ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದರು.
ವರದಿ : ಮಲ್ಲೇಶ ಮಣ್ಣಮ್ಮನವರ, ಲಕ್ಷ್ಮೇಶ್ವರ ಸಿಟಿಜನ್ ಜರ್ನಲಿಸ್ಟ್
