ಗದಗ | ಸೆ.1ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಿಲ್ಲಾ ಪ್ರವಾಸ

Date:

ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 1ರಂದು ಗದಗ ಜಿಲ್ಲೆಗೆ ಭೇಟಿ ನೀಡಿ, ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಲಿದ್ದಾರೆ.

- Advertisement -

ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮದನ್ವಯ ಸೆ.1ರಂದು ಬೆಳಿಗ್ಗೆ 9.30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು, 10.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ 11.15ಕ್ಕೆ ಗದಗ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸುವ ಮುಖ್ಯಮಂತ್ರಿಗಳು, ಬಳಿಕ ಗದಗ ಜಿಲ್ಲೆಯ ವಿವಿಧ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಧ್ಯಾಹ್ನ 1.15ಕ್ಕೆ ಹುಲಕೋಟಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಜ್ಞಾನಿಗಳೊಂದಿಗೆ ಸಭೆ ನಡೆಸುವರು. ನಂತರ 2.30ಕ್ಕೆ ಗದಗ ಜಿಲ್ಲಾ ಬರ ಪರಿಸ್ಥಿತಿ ಕುರಿತಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ/ಚರ್ಚೆ ನಡೆಸಲಿದ್ದಾರೆ.

ಮಧ್ಯಾಹ್ನ  3.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಹೆಲಿಕಾಪ್ಟರ್ ಮೂಲಕ ಲಕ್ಷ್ಮೇಶ್ವರದ ಉಮಾ ಪಿಯು ಕಾಲೇಜು ಆವರಣಕ್ಕೆ ತೆರಳಿ, 3.50ಕ್ಕೆ ಅಲ್ಲಿಂದ ಶ್ರೀ ಮುಕ್ತಿ ಮಂದಿರಕ್ಕೆ ಭೇಟಿ ನೀಡುವರು. ನಂತರ ಅಲ್ಲಿಂದ ಲಕ್ಷ್ಮೇಶ್ವರಕ್ಕೆ ಆಗಮಿಸಿ, ಹೆಲಿಕಾಪ್ಟರ್ ಮೂಲಕ 4.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿ, ಸಂಜೆ 5.05ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸಿಸುವರು ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...