ಗದಗ | ರಾಮ ಮನಗೂಳಿ ನಿಧನಕ್ಕೆ ಸಚಿವ ಎಚ್.ಕೆ ಪಾಟೀಲ ಸಂತಾಪ

Date:

ಹಿರಿಯ ಪತ್ರಕರ್ತ ರಾಮ ಮನಗೂಳಿ ಅವರ ನಿಧನಕ್ಕೆ ಗದಗ ಜಿಲ್ಲಾ ಉಸ್ತುವಾರಿ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ ಪಾಟೀಲ ಹಾಗೂ ಲೋಕ ಶಿಕ್ಷಣ ಧರ್ಮದರ್ಶಿ ಮಂಡಳಿಯ ಟ್ರಸ್ಟಿಗಳು, ಮಾಜಿ‌ ಶಾಸಕ ಡಿ.ಆರ್ ಪಾಟೀಲ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

- Advertisement -

ನಾಡಿನ ಹಿರಿಯ ಪತ್ರಕರ್ತರಾದ ಬಾಗಲಕೋಟೆಯ ರಾಮ ಮನಗೂಳಿ ಅವರು ಶುಕ್ರವಾರ(ಮಾ.1) ಅನಾರೋಗ್ಯದಿಂದ ಕೆರೂಡಿ ಆಸ್ಪತ್ರೆಯಲ್ಲಿ ನಿಧನರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇವರು ಸಂಯುಕ್ತ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕರು ಹಾಗೂ ನಾಡನುಡಿ‌‌ ದಿ‌ನ ಪತ್ರಿಕೆಯ ಸಂಪಾದಕರಾಗಿದ್ದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿದ್ದರು, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹತ್ತು ಹಲವಾರು ಪ್ರಶಸ್ತಿಗೆ ಇವರು ಭಾಜನರಾಗಿದ್ದರು.

2002ರಲ್ಲಿ ಬಾಗಲಕೋಟೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ‌ಸಂಘದ ಅಧ್ಯಕ್ಷರಾಗಿ ಕೆಲಸ‌ ಮಾಡುವ ಸಂದರ್ಭದಲ್ಲಿ ಬಾಗಲಕೋಟೆ ಯಲ್ಲಿ ಅವರ ನೇತೃತ್ವದಲ್ಲಿ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಯಶಸ್ವಿಯಾಗಿ ನಡೆಸಿಕೊಟ್ಟರು.

ಬಾಗಲಕೋಟೆ ಜಿಲ್ಲೆಯಲ್ಲಿ ಪ್ರೆಸ್ ಕ್ಲಬ್ ವತಿಯಿಂದ ಅವರ ನೇತೃತ್ವದಲ್ಲಿ ಬೆಳಗಾವಿ ವಿಭಾಗ ಮಟ್ಟದ ಪತ್ರಕರ್ತರ ಕಾರ್ಯಾಗಾರ ಯಶಸ್ವಿಯಾಗಿ ನಡೆಸಿದ್ದು ವಿಶೇಷವಾಗಿತ್ತು.

ನಾಡಿನ ಹಿರಿಯ ಪತ್ರಕರ್ತರಾಗಿದ್ದ ರಾಮ ಮನಗೂಳಿ ಅವರು ಪತ್ರಕರ್ತರಿಗೆ ಸದಾ ಮಾರ್ಗದರ್ಶನ ನೀಡುವ ಜತೆಗೆ , ಕಾರ್ಯನಿರತ ಪತ್ರಕರ್ತರ ಸಂಘಟನೆಗೂ ಹೆಚ್ಚು ಒತ್ತು ನೀಡುತ್ತಿದ್ದರು, ಸಂಘಟನೆಗೆ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆಯ ಸಂದರ್ಭದಲ್ಲಿ ಯಾವುದೇ ಚುನಾವಣೆ ನಡೆಸದಂತೆ ಎಲ್ಲರೊಂದಿಗೆ ಮಾತನಾಡಿ ಅವಿರೋಧ ಆಯ್ಕೆ ಆಗುವಂತೆ ನೋಡಿಕೊಳ್ಳುತ್ತಿದ ಅವರ ಕೆಲಸ ಎಲ್ಲರಿಗೂ ಮೆಚ್ಚುವಂತದ್ದಾಗಿದೆ ಎಂದು ಸಂತಾಪ ಸೂಚಿಸುವಾಗ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...