ಗದಗ | ನವಿಲುತೀರ್ಥ ಜಲಾಶಯ ಭರ್ತಿಗೆ ಏಳು ಅಡಿಯಷ್ಟೇ ಬಾಕಿ: ಮುನ್ನೆಚ್ಚರಿಕೆಗೆ ಸೂಚನೆ

Date:

ನವಿಲುತೀರ್ಥ ಜಲಾಶಯ ಭರ್ತಿಗೆ ಏಳು ಅಡಿಯಷ್ಟೇ ಬಾಕಿಯಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

- Advertisement -

ಒಂದು ವಾರದಿಂದ ಮಲಪ್ರಭಾ ನದಿ ಮೇಲ್ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಕಳೆದ ಮೂರು ದಿನಗಳಿಂದ ಸವದತ್ತಿ ಬಳಿಯ ನವಿಲುತೀರ್ಥ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ನವಿಲುತೀರ್ಥ ಡ್ಯಾಂ ಭರ್ತಿಯಾಗಲು ಇನ್ನು ಏಳು ಅಡಿ ಮಾತ್ರ ಬಾಕಿಯಿದ್ದು, ನರಗುಂದ ತಾಲೂಕಿನ ಹಲವು ಹಳ್ಳಿಗಳಿಗೆ ನೆರೆ ಆತಂಕ ಉಂಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಶನಿವಾರ ಸಂಜೆ ವೇಳೆಗೆ ನವಿಲುತೀರ್ಥ ಡ್ಯಾಂ 2,072 ಅಡಿಯಷ್ಟು ಭರ್ತಿಯಾಗಿದೆ. 18 ಸಾವಿರ ಕ್ಯೂಸೆಕ್‌ ಒಳಹರಿವು ಇದ್ದು, ಇದೇ ವೇಗದಲ್ಲಿ ನೀರು ಬಂದರೆ ಮುಂದಿನ ಎರಡೇ ದಿನಗಳಲ್ಲಿ ಜಲಾಶಯ ಭರ್ತಿಯಾಗಲಿದೆ. ಡ್ಯಾಂ ಭರ್ತಿಯಾದ ನಂತರ ಏಕಾಏಕಿ ನೀರು ಹರಿಸಿದರೆ ಪ್ರವಾಹ ಉಂಟಾಗುತ್ತದೆ. ಹಾಗಾಗಿ ಇದನ್ನು ತಡೆಗಟ್ಟಲು ಈಗಿನಿಂದಲೇ ಸಣ್ಣ ಪ್ರಮಾಣದಲ್ಲಿ ನೀರನ್ನು ಹೊರಬಿಡಲು ನೀರಾವರಿ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

“ನವಿಲುತೀರ್ಥ ಜಲಾಶಯದಿಂದ ಶನಿವಾರ ಸಂಜೆ ಐದು ಗಂಟೆಯಿಂದ 1000 ಕ್ಯೂಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ. ಅದೇರೀತಿ, 500 ಕ್ಯೂಸೆಕ್‌ ನೀರನ್ನು ಮಲಪ್ರಭಾ ಕಾಲುವೆಗೆ ಹರಿಸಲಾಗುತ್ತಿದೆ. ಒಟ್ಟಾರೆ, ಒಂದು ಸಾವಿರ ಕ್ಯೂಸೆಕ್‌ನಿಂದ ಐದು ಸಾವಿರ ಕ್ಯೂಸೆಕ್‌ ನೀರನ್ನು ನಿಧಾನವಾಗಿ ಹೊಳೆ, ಕಾಲುವೆಗಳಿಗೆ ಹರಿಸಲಾಗುವುದು” ಎಂದು ನೀರಾವರಿ ಇಲಾಖೆ ಎಂಜಿನಿಯರ್‌ ಜಗದೀಶ ಕುರಿ ಹೇಳಿದ್ದಾರೆ.

“ನವಿಲುತೀರ್ಥ ಡ್ಯಾಂನಿಂದ ನೀರು ಹರಿಸುತ್ತಿರುವ ಪರಿಣಾಮ ಮಲಪ್ರಭಾ ಹೊಳೆಯ ತಟದಲ್ಲಿರುವ ಎಂಟಕ್ಕೂ ಹೆಚ್ಚು ಗ್ರಾಮಗಳು ಸುರಕ್ಷತೆಯತ್ತ ಗಮನ ಹರಿಸಬೇಕಿದೆ. ಹೊಳೆ ಸಮೀಪ ಪಂಪ್‌ಸೆಟ್ ಇರುವ ರೈತರು ಪಂಪ್‌ಸೆಟ್, ಕೃಷಿ ಸಾಮಗ್ರಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು. ಅದೇರೀತಿ ಬೆಣ್ಣೆ ಹಳ್ಳದ ದಡದಲ್ಲಿರುವ ಗ್ರಾಮಗಳ ಜನರೂ ಕೂಡ ಸುರಕ್ಷತೆಯತ್ತ ಗಮನಹರಿಸಬೇಕು” ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ನರಗುಂದ ತಾಲೂಕಿನ ಕೊಣ್ಣೂರ, ಲಕಮಾಪುರ, ವಾಸನ, ಬೆಳ್ಳೇರಿ, ಕಪಲಿ, ಕಲ್ಲಾಪುರ, ಶಿರೋಳ, ಸುರಕೋಡ, ಕುರ್ಲಗೇರಿ, ಹದ್ಲಿ, ರಡ್ಡೇರನಾಗನೂರ, ಗಂಗಾಪುರ ಗ್ರಾಮಗಳು ಮಲಪ್ರಭಾ ಹಾಗೂ ಬೆಣ್ಣೆಹಳ್ಳದ ಪ್ರವಾಹದ ಆತಂಕದಲ್ಲಿವೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿರುವುದು ನಮ್ಮ ಕಾಲೇಜಿನ ಹೆಮ್ಮೆ: ಪ್ರಾಂಶುಪಾಲ ಎ ಆರ್ ಹಂಡೆ

“ಮಳೆ ಹೆಚ್ಚಾಗಿರುವ ಕಾರಣ ನವೀಲುತೀರ್ಥ ಡ್ಯಾಂನ ನೀರಿನ ಪ್ರಮಾಣ ಗಣನೀಯವಾಗಿ ಹೆಚ್ಚುತ್ತಲಿದೆ. ಶನಿವಾರ ಸಂಜೆಯಿಂದ ನದಿಗೆ ಅಂದಾಜು 1 ಸಾವಿರದಿಂದ 5 ಸಾವಿರ ಕ್ಯೂಸೆಕ್‌ ನೀರು ಹರಿಬಿಡಲಾಗಿದ್ದು, ಮಲಪ್ರಭಾ ನದಿಯ ತೀರದ ಜನರು ನದಿತಟದಿಂದ ಅಂತರ ಕಾಯ್ದುಕೊಳ್ಳಬೇಕು” ಎಂದು ಶಾಸಕ ಸಿ ಸಿ ಪಾಟೀಲ ಮನವಿ ಮಾಡಿದ್ದಾರೆ.

“ಒಳಹರಿವು ಹೆಚ್ಚಾದ ಪರಿಣಾಮ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹೊಳೆ, ಕಾಲುವೆಗೆ 1,500 ಕ್ಯೂಸೆಕ್‌ ನೀರು ಹರಿಸಲಾಗಿದೆ. ಪ್ರವಾಹ ಎದುರಿಸಲು ಎಲ್ಲ ವ್ಯವಸ್ಥೆ ಆಗಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ” ಎಂದು ತಹಶೀಲ್ದಾರ್ ಶ್ರೀಶೈಲ ತಳವಾರ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಚನ್ನಕೇಶವ ದೇಗುಲದ ಸುತ್ತ ತಳ್ಳುಗಾಡಿ ತೆರವಿಗೆ ಸಾರ್ವಜನಿಕರ ಒತ್ತಾಯ 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ...

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100...

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...