ಗದಗ | ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ವ್ಯವಸ್ಥಿತವಾಗಿ ನಿರ್ವಹಿಸಿ: ಅಪರ ಜಿಲ್ಲಾಧಿಕಾರಿ

Date:

“ಜಿಲ್ಲಾ ಮಟ್ಟದಲ್ಲಿ ಅಗಸ್ಟ 15 ರಂದು ಜರುಗುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಜಿಲ್ಲಾ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾಗಿ ಜರುಗುವಂತೆ ಸಂಬಂಧಿತ ಇಲಾಖಾಧಿಕಾರಿಗಳು ಕಾರ್ಯನಿರ್ವಹಿಸಬೇಕು” ಎಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರು ತಿಳಿಸಿದರು.

- Advertisement -

ಗದಗ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ವೇದಿಕೆ ಹಾಗೂ ಇತರೆ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿ ಸಂಬಂಧಿತ ಅಧಿಕಾರಿಗಳಿಗೆ ಕಾರ್ಯಕ್ರಮದ ಯಶಸ್ವಿ ಕುರಿತಂತೆ ಸೂಕ್ತ ನಿರ್ದೇಶನಗಳನ್ನು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ.ಎಚ್.ಕೆ.ಪಾಟೀಲ ಅವರು ಅಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಕ್ರೀಡಾಂಗಣದಲ್ಲಿ ನೆರೆದ ಸಾರ್ವಜನಿಕರಿಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡುವರು. ಬೆಳಿಗ್ಗೆ 8.30 ರೊಳಗಾಗಿ ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಕ್ರೀಡಾಂಗಣದಲ್ಲಿ ತಮ್ಮ ಇಲಾಖಾ ಸಿಬ್ಬಂದಿಗಳೊಂದಿಗೆ ಹಾಜರಿರಬೇಕು. ಅಲ್ಲದೇ ಶಾಲಾ ಕಾಲೇಜುಗಳಲ್ಲಿಯೂ ಮಕ್ಕಳು ಧ್ವಜಾರೋಹಣ ನೆರವೇರಿಸಿ 8.30 ರೊಳಗಾಗಿ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ನಿಗದಿಪಡಿಸಿದ ಸ್ಥಳದಲ್ಲಿ ಆಸೀನರಾಗಬೇಕು. ಈ ಕುರಿತು ಶಾಲಾ ಶಿಕ್ಷಕರು ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು” ಎಂದರು.

“ಅಗಸ್ಟ 15 ಕ್ಕೂ ಮೊದಲು ಮೂರು ದಿನ ಮುಂಚಿತವಾಗಿಯೇ ನಗರಸಭೆಯ ಅಧಿಕಾರಿಗಳು ನಗರದ ಪ್ರಮುಖ ವೃತ್ತಗಳ ಸ್ವಚ್ಛತೆಗೆ ಹಾಗೂ ಜಿಲ್ಲಾ ಕ್ರೀಡಾಂಗಣದ ಸ್ವಚ್ಛತೆಗೆ ಆದ್ಯತೆ ವಹಿಸಿ ಶುಚಿಗೊಳಿಸಬೇಕು. ಅಲ್ಲದೇ ಪ್ರಮುಖ ವೃತ್ತಗಳಲ್ಲಿ ಮುಂಚಿತಾಗಿಯೇ ದೀಪಾಲಂಕಾರ ಮಾಡಬೇಕು” ಎಂದು ಸೂಚಿಸಿದರು.

“ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ನಗರ ವ್ಯಾಪ್ತಿಯ ಶಾಲಾ ಕಾಲೇಜು ವಿದ್ಯಾರ್ಥಿಗಳು ನಿಗದಿತ ಸಮಯದೊಳಗೆ ಕರೆತರುವ ವ್ಯವಸ್ಥೆ ಮಾಡಬೇಕು. ಈ ಕುರಿತಂತೆ ತಮ್ಮ ಇಲಾಖಾ ವ್ಯಾಪ್ತಿಯ ಅಧಿಕಾರಿ ಹಾಗೂ ಶಿಕ್ಷಕರುಗಳಿಗೆ ಹೊಣೆಗಾರಿಕೆ ನೀಡಬೇಕು. ಕಾರ್ಯಕ್ರಮ ಪೂರ್ಣಗೊಳ್ಳುವವರೆಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು ತೆರಳದಂತೆ ನಿಗಾ ವಹಿಸಬೇಕು ಎಂದು” ತಿಳಿಸಿದರು.

“ವೇದಿಕೆಯಲ್ಲಿ ಶಿಷ್ಟಾಚಾರದಂತೆ ಕಾರ್ಯಕ್ರಮ ನಿರ್ವಹಣೆಯಾಗಬೇಕು. ನೆರೆದ ಸಾರ್ವಜನಿಕರೆಲ್ಲರಿಗೂ ಸಚಿವರ ಸಂದೇಶ ಕೇಳಿಸುವಂತೆ ಧ್ವನಿವರ್ಧಕದ ವ್ಯವಸ್ಥೆ ಮಾಡಬೇಕು. ಮತ್ತು ಮಕ್ಕಳಿಗೆ ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪ್ರತಿ ಕಾರ್ಯಕ್ರಮಕ್ಕೂ ನಿಗದಿಪಡಿಸಿದ ಸಮಯಕ್ಕೆ ಜರುಗುವಂತೆ ನಿಗಾ ವಹಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ವಿವಿಧ ಇಲಾಖಾಧಿಕಾರಿಗಳಿಗೆ ನೀಡಲಾದ ಹೊಣೆಗಾರಿಕೆಯನ್ನು ಚಾಚೂ ತಪ್ಪದೇ ಎಲ್ಲರೂ ಜಿಲ್ಲಾ ಕ್ರೀಡಾಂಗಣದಲ್ಲಿಯೇ ಇದ್ದು ಪೂರ್ಣಗೊಳಿಸುವುದರೊಂದಿಗೆ ಕಾರ್ಯಕ್ರಮ ಅಚ್ಚುಕಟ್ಟಾಗಿ ಹಾಗೂ ವಿಜೃಂಭಣೆಯಿಂದ ನೆರವೇರಲು ಸಮನ್ವಯದೊಂದಿಗೆ ಕಾರ್ಯ ನಿರ್ವಹಣೆ ಮಾಡಬೇಕು” ಎಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ತಿಳಿಸಿದರು.

ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ, ಜಿಲ್ಲಾ ಉಪಸಮನ್ವಯಾಧಿಕಾರಿ ಎಮ್.ಎಚ್.ಕಂಬ್ಳಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿ.ವಿ.ನಡುವಿನಮನಿ, ಶೆಟ್ಟೆಪ್ಪನವರ, ತಹಶೀಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಶರಣು ಗೋಗೇರಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಜಕುಮಾರ್ ಸೋಪಡ್ಲಾ, ಕಂದಾಯ ನಿರೀಕ್ಷಕರ ಭಜಂತ್ರಿ ಸೇರಿದಂತೆ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...