ಕನ್ನಡ ಕೇವಲ ಭಾಷೆಯಲ್ಲ, ಕನ್ನಡ ಭಾಷೆ ಅನ್ನ ನೀಡುವ ಅಕ್ಷಯ ಪಾತ್ರೆಯಾಗಿದೆ ಎಂದು ಅಂಜುಮನ್ ಇಸ್ಲಾಂ ಕಮಿಟಿಯ ಮಾಜಿ ಅಧ್ಯಕ್ಷ ಎಂ ಎಚ್ ಕೋಲಕಾರ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಅಂಜುಮನ್ ಇಸ್ಲಾಂ ಕಮಿಟಿಯ ಕಾನ್ವೆಂಟ್ ಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.
“ಪ್ರಾಚೀನ ಕಾಲದಿಂದಲೂ ಕನ್ನಡವನ್ನು ಉಳಿಸಿ, ಬೆಳೆಸಲು ಕವಿಗಳು, ಸಂತರು, ಶರಣರು, ಕನ್ನಡ ಪರ ಸಂಘಟನೆಯವರು, ಸರ್ಕಾರ ಎಲ್ಲರೂ ಶ್ರಮಿಸಿದ್ದಾರೆ. ಕನ್ನಡದ ಬಗೆಗೆ ಅಪಾರ ಅಭಿಮಾನ, ಪ್ರೀತಿ, ಕಾಳಜಿಯಿಂದ ಕನ್ನಡವನ್ನು ಎಲ್ಲೆಡೆ ಬೆಳೆಸಬೇಕು. ಯುವಜನಾಂಗ, ವಿದ್ಯಾರ್ಥಿ ಸಮೂಹ ಸೇರಿದಂತೆ ಪ್ರತಿಯೊಬ್ಬರೂ ಕನ್ನಡ ಬೆಳೆಸುವ ಕಾರ್ಯದಲ್ಲಿ ಮುಂಚೂಣಿಯಲ್ಲಿರಬೇಕು” ಎಂದು ಕರೆ ನೀಡಿದರು.
ಈ ಸುದಸ್ದಿ ಓದಿದ್ದೀರಾ? ಹಾಸನ | ಐದು ವರ್ಷವೂ ಶಕ್ತಿ ಯೋಜನೆ ಅನುಷ್ಠಾನದಲ್ಲಿ ಇರಲಿದೆ: ಗೃಹ ಸಚಿವ ಜಿ ಪರಮೇಶ್ವರ್
ಅಂಜುಮನ್ ಇಸ್ಲಾಂ ಕಮಿಟಿ ನಿರ್ದೇಶಕ ದಾವಲಸಾಬ ತಾಳಿಕೋಟಿ ಮಾತನಾಡಿ, “ಸುಮಾರು 2,500 ವರ್ಷಗಳ ಇತಿಹಾಸ ಹೊಂದಿರುವ ಕನ್ನಡವು ಎಲ್ಲ ಭಾಷೆಗಳ ತಾಯಿಬೇರು. ವಿದ್ಯಾರ್ಥಿಗಳು ತಾಯಿ ನುಡಿ, ಕನ್ನಡ ಭಾಷೆಯನ್ನು ಎಂದಿಗೂ ಮರೆಯಬಾರದು. ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಹೆಚ್ಚಿಸುವತ್ತ ಕನ್ನಡಿಗರಾದ ನಾವೆಲ್ಲರೂ ಶ್ರಮಿಸಬೇಕು” ಎಂದರು.
ಈ ವೇಳೆ ಅಂಜುಮನ್ ಇಸ್ಲಾಂ ಕಮಿಟಿ ಕಾರ್ಯದರ್ಶಿ ಫಯಾಜ್ ತೋಟದ, ನಿರ್ದೇಶಕ ನಾಸೀರ ಸುರಪುರ, ಮಾಸುಮಲಿ ಮದಗಾರ ಮುಖ್ಯ ಶಿಕ್ಷಕಿ ಮಾಜನಬಿ ಹಣಗಿ, ಫಾತೀಮ ಕಡ್ಲಿಮಟ್ಟಿ ಇದ್ದರು.