ಗದಗ | ಅತಿವೃಷ್ಠಿ ನಿರ್ವಹಣೆ; ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

Date:

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿ ಹಾಗೂ ಹಳ್ಳಗಳ ಪಾತ್ರದಲ್ಲಿ ವಾಸಿಸುವ ಜನರು ಸುರಕ್ಷಿತ ತಾಣಗಳಿಗೆ ತೆರಳಬೇಕು. ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿಯೇ ಇದ್ದು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌ ಸೂಚನೆ ನೀಡಿದ್ದಾರೆ.

“ಜನ-ಜಾನುವಾರುಗಳಿಗೆ ಜೀವ ಹಾನಿ ಆಗದಂತೆ ಮುಂಜಾಗೃತೆ ಕ್ರಮಗಳನ್ನು ವಹಿಸಬೇಕು. ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮಳೆ ಹಾಗೂ ಪ್ರವಾಹದಿಂದ ಜನ-ಜಾನುವಾರು ಜೀವಹಾನಿ ಆಗದಂತೆ ನಿಗಾವಹಿಸಬೇಕು” ಎಂದು ತಿಳಿಸಿದ್ದಾರೆ.

“ಶಿಥಿಲಾವಸ್ಥೆಯಲ್ಲಿರುವ ಮಣ್ಣಿನ ಮನೆಯಲ್ಲಿ ವಾಸಿಸುವ ಕುಟುಂಬಗಳನ್ನು ಗುರುತಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕಾರ್ಯ ನಡೆಯಬೇಕು. ವಿದ್ಯುತ್ ಕಂಬಗಳಿಗೆ ಜಾನುವಾರುಗಳನ್ನು ಕಟ್ಟದಂತೆ ಹಾಗೂ ಜನರು ಸ್ಪರ್ಶಿಸದಂತೆ ಜಾಗೃತಿ ಮೂಡಿಸಬೇಕು. ಅಗತ್ಯ ಬಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಜನ ಜಾನುವಾರುಗಳನ್ನು ಸ್ಥಳಾಂತರಿಸಿ ಸಂಭವನೀಯ ಜೀವಹಾನಿ ತಡೆಗಟ್ಟಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಎಲ್ಲ ಚರಂಡಿ ಹಾಗೂ ರಾಜ ಕಾಲುವೆಗಳನ್ನು ಸ್ವಚ್ಛಗೊಳಿಸಲು ಸ್ಥಳಿಯ ಆಡಳಿತಕ್ಕೆ ಸೂಚಿಸಬೇಕು. ಒಟ್ಟಾರೆಯಾಗಿ ಎಲ್ಲ ಅಧಿಕಾರಿ ಸಿಬ್ಬಂದಿಗಳೆಲ್ಲರೂ ನಿರಂತರವಾಗಿ ಸಮನ್ವಯ ಸಾಧಿಸುವುದರ ಮೂಲಕ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಬಹುದು” ಎಂದು ಮುಂಜಾಗೃತ ಸೂಚನೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅತಿವೃಷ್ಠಿ ನಿರ್ವಹಣೆಗಾಗಿ ಸಿದ್ಧತೆ: ಜಿಲ್ಲೆಯಲ್ಲಿ ಪ್ರವಾಹ ಸಂಭವಿಸಬಹುದಾದ 25 ಗ್ರಾಮ ಪಂಚಾಯತಗಳಲ್ಲಿ ವಿಪತ್ತು ನಿರ್ವಹಣಾ ಯೋಜನೆ ತಯಾರಿಸಲಾಗಿದೆ. ಪ್ರವಾಹ ಪರಿಸ್ಥಿತಿ ನಿರ್ವಹಣೆಗಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ 56 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು ಪ್ರತಿ ಕೇಂದ್ರಕ್ಕೂ ಪ್ರತ್ಯೇಕ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಬೆಳೆ ಹಾಗೂ ಮನೆಹಾನಿ ಸಂಭವಿಸಿದ್ದಲ್ಲಿ ಸಮೀಕ್ಷೆಗಾಗಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ.

ಮಳೆ ವಿವರ: ಜುಲೈ 1 ರಿಂದ ಈವರೆಗೆ ಜಿಲ್ಲೆಯಲ್ಲಿ 91 ಮಿಮೀ ಮಳೆಯಾಗಿದ್ದು ವಾಡಿಕೆ ಮಳೆ 51 ಮಿಮೀ ಇದ್ದು, ಶೇ.79ರಷ್ಟು ಹೆಚ್ಚಿಗೆ ಮಳೆಯಾಗಿದೆ. ಮಳೆಯಿಂದಾಗಿ ಜಿಲ್ಲೆಯಲ್ಲಿ 24 ಮನೆಗಳು ಭಾಗಶ: ಹಾನಿಗೀಡಾಗಿವೆ.

ಈ ಸುದ್ದಿ ಓದಿದ್ದೀರಾ? ವಿಪರೀತ ಮಳೆ ಹಿನ್ನೆಲೆ | ಕೊನೆಗೂ ಪದವಿ ಪರೀಕ್ಷೆ ಮುಂದೂಡಿದ ಮಂಗಳೂರು ವಿವಿ

ಜಲಾಶಯ ಮಟ್ಟ: ನವೀಲು ತೀರ್ಥ ಜಲಾಶಯ 37.785 ಟಿಎಂಸಿ ಸಾಮರ್ಥ್ಯ ಹೊಂದಿದ್ದು ಈವರೆಗೆ 9.314 ಟಿ.ಎಂ.ಸಿ. ನೀರು ಸಂಗ್ರವಾಗಿದೆ. ನೀರಿನ ಒಳ ಹರಿವು 21247 ಕ್ಯೂಸೆಕ್ಸ ಇದ್ದು ಹೊರ ಹರಿವು 194 ಕ್ಯೂಸೆಕ್ಸ ಇದೆ. ಭದ್ರಾ ಜಲಾಶಯ 71.535 ಟಿ.ಎಂ.ಸಿ. ಸಾಮಥ್ರ್ಯ ಹೊಂದಿದ್ದು ಈ ವರೆಗೆ 29.653 ಟಿ.ಎಂ.ಸಿ. ನೀರು ಸಂಗ್ರಹವಾಗಿದ್ದು ನೀರಿನ ಒಳ ಹರಿವು 39348 ಕ್ಯೂಸೆಕ್ಸ ಇದ್ದು ಹೊರ ಹರಿವು 167 ಕ್ಯೂಸೆಕ್ಸ ಇದೆ.

ಬಿತ್ತನೆ ಪ್ರದೇಶದ ವಿವರ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 3,09,810 ಎಕರೆ ಪ್ರದೇಶದಲ್ಲಿ ಬಿತ್ತನೆಯ ಗುರಿ ಹೊಂದಲಾಗಿದ್ದು, ಈ ಪೈಕಿ 1,01,905 ಎಕರೆ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಶೇ.32.89ರಷ್ಟು ಬಿತ್ತನೆಯಾಗಿದೆ. ಅದೇ ರೀತಿ 60,575 ಎಕರೆ ತೋಟಗಾರಿಕೆ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಈ ಪೈಕಿ 14,294 ಎಕರೆ ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಶೇ. 23.60 ರಷ್ಟು ಗುರಿ ಸಾಧನೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ರಾಯಚೂರು | ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ: ಬಿ.ವಿ ನಾಯಕ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ರಾಯಚೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದೇನೆ....

ತುಮಕೂರು | ಕಲೆಯ ಗ್ರಹಿಕೆ ಮೇಲೆ ನಿರ್ಬಂಧ ಹೇರುವುದು ಅಪಾಯಕಾರಿ: ವಿಮರ್ಶಕ ರಾಘವೇಂದ್ರರಾವ್

ಕಲೆಯ ಗ್ರಹಿಕೆ ಮೇಲೆ ನಿರ್ಬಂಧಗಳನ್ನು ಹೇರುವುದು ಅಪಾಯಕಾರಿಯಾಗಿದೆ. ಗ್ರಹಿಕೆಯು ನಿಯಮಬದ್ಧವಾಗಿದ್ದರೂ ನಿರ್ಬಂಧ...

ಗದಗ | ಪ್ರತಿಯೊಬ್ಬರಿಗೂ ಮುಖ್ಯವಾದ ಸಂಪತ್ತು ಆರೋಗ್ಯ; ಎಂಎಲ್‌ಸಿ ಸಂಕನೂರ

ಪ್ರತಿಯೊಬ್ಬರಿಗೂ ಆರೋಗ್ಯ ಸಂಪತ್ತು ಮುಖ್ಯವಾದ ಸಂಪತ್ತಾಗಿದೆ. ನೌಕರರು ತಮ್ಮ ಆರೋಗ್ಯ ಸಂರಕ್ಷಣೆಗೆ...

ತುಮಕೂರಿನಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಸ್ವಾಮೀಜಿಗಳ ಒತ್ತಾಯ

ಮುಂದಿನ ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ಕೊಡುವಂತೆ...