ಗದಗ | ಮೇ 7ರಂದು ಮತದಾನದ ಹಬ್ಬದಲ್ಲಿ ಭಾಗಿಯಾಗಿ ಮತ ಚಲಾಯಿಸಿ; ಎಸ್ ಕೆ ಇನಾಮದಾರ

Date:

Advertisements

ಎಲ್ಲ ಮತದಾರರು ತಮ್ಮ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೇ 7 ರಂದು ನಡೆಯುವ ಮತದಾನದ ದಿನ ತಪ್ಪದೆ ನಿಮ್ಮ ಹಕ್ಕು ಚಲಾಯಿಸಿ ಎಂದು ರೋಣ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿ ಎಸ್ ಕೆ ಇನಾಮದಾರ ಹೇಳಿದರು.

ಗದಗ ಜಿಲ್ಲೆಯ ರೋಣ ಲೋಕಸಭಾ ಚುನಾವಣೆ 2024ರ  ಅಂಗವಾಗಿ ಸೋಮವಾರ (ಏ.15) ರೋಣ ಪಟ್ಟಣದ ಸಿದ್ದಾರೋಡ ಮಠದಿಂದ ತಾಲೂಕು ಆಸ್ಪತ್ರೆವರೆಗೂ ಬೃಹತ್ ಮತದಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಸೂಡಿ ಕ್ರಾಸ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಮತದಾನದ ಜಾಗೃತಿ ಘೋಷಣೆಗಳನ್ನು ಕೂಗುತ್ತಾ ಪೋತರಾಜನ ಕಟ್ಟೆ ಮೂಲಕ, ತಾಲೂಕ ಆಸ್ಪತ್ರೆ ಕಚೇರಿಯನ್ನು ಜಾಗೃತಿ ಜಾಥಾ ತಲುಪಿತು.

Advertisements

ಈ ವೇಳೆ ಮಾತನಾಡಿದ ಎಸ್ ಕೆ ಇನಾಮದಾರ, ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದ ದೂರುಗಳನ್ನು ನೀಡಬೇಕು ಹಾಗೂ ಸುಲಲಿತ ಹಾಗೂ ನ್ಯಾಯಬದ್ಧ ಚುನಾವಣೆಗಾಗಿ ಚುನಾವಣಾ ಆಯೋಗ ನೀಡಿರುವ ಮತದಾನದ ಸಹಾಯವಾಣಿ, ಸಕ್ಷಾಮ್ ಆ್ಯಪ್, ಸಿವಿಜಿಲ್ ಆ್ಯಪ್‌ಗಳನ್ನು ಬಳಸಿ  ನೈತಿಕ ಮತದಾನಕ್ಕೆ ಸಹಕರಿಸಬೇಕು ಎಂದರು.

ಮೇ 7ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆ ದಾಕ್ಷಿಣ್ಯಗಳಿಗೆ ಪ್ರಭಾವಿತರಾಗದೆ ವಿವೇಚನೆಯಿಂದ ಮತ ಚಲಾಯಿಸಿ ಎಂದರು. ಆ ಮುಖಾಂತರ ಪ್ರಜಾಪ್ರಭುತ್ವವನ್ನು ಗೆಲ್ಲಿಸೋಣ. ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಕಡ್ಡಾಯವಾಗಿ ಮತದಾನ ಮಾಡಿ ಎಂದರು.

ಇನ್ನು 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ವಿಶೇಷಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮತದಾನದ ಪ್ರಮಾಣವನ್ನು ಹೆಚ್ಚಿಸಲು ಮತದಾನ‌ ಜಾಗೃತಿ ಜಾಥಾದಂತಹ ಅನೇಕ ಕಾರ್ಯಕ್ರಮಗಳನ್ನು ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲರೂ ಕಡ್ಡಾಯವಾಗಿ ನಿರ್ಭೀತಿಯಿಂದ ಮತ ಚಲಾಯಿಸಿ ಎಂದರು.

ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು, ರೋಣ ತಾಲೂಕಿನ 11 ಪ್ರಾಥಮಿಕ ಅರೋಗ್ಯ ಕೇಂದ್ರದ ಸಿಬ್ಬಂದಿ, ತಾಲೂಕು ಪಂಚಾಯತಿ ಸಿಬ್ಬಂದಿ ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X