ಗದಗ | ಸೌಲಭ್ಯಗಳ ಕೊರತೆಯಿಂದ ಬೇಸತ್ತ ಜನ; ಗ್ರಾಮಸ್ಥರ ಗೋಳು ಕೇಳುವವರಿಲ್ಲ

Date:

Advertisements

ಗದಗಜಿಲ್ಲೆ ಶಿರಹಟ್ಟಿ ತಾಲೂಕಿನ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆ, ಬಸ್ ಸಂಚಾರ ಇಲ್ಲ, ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲ, ನರೇಗಾ ಕೂಲಿ ಕೆಲಸ ಇಲ್ಲ ಈ ಕಾರಣಕ್ಕೆ ತಾಲೂಕಿನ ಗ್ರಾಮಸ್ಥರು ಪಟ್ಟಣಗಳತ್ತ ಗುಳೆ ಹೊರಟಿದ್ದಾರೆ.

ಹೀಗೆ ಹಡಗಲಿ ಗ್ರಾಮದ ಜನರ ಗೋಳು ನಿಜಕ್ಕೂ ಹೇಳತೀರದ್ದಾಗಿದೆ. ತಾಲೂಕಿನ ಅತಿ ಚಿಕ್ಕ ಗ್ರಾಮಗಳಲ್ಲಿ ಒಂದಾದ ಹಡಗಲಿ ಗ್ರಾಮವು ಹೆಬ್ಬಾಳ ಗ್ರಾಮ ಪಂಚಾಯ್ತಿಗೆ ಸೇರಿದ್ದು, ಒಬ್ಬ ಗ್ರಾಮ ಪಂಚಾಯಿತಿ ಸದಸ್ಯನನ್ನು ಒಳಗೊಂಡಿದೆ.

ಗ್ರಾಮದಲ್ಲಿ ಯಾರಾದರೂ ಸತ್ತರೆ ಹೂಳಲು ರುದ್ರಭೂಮಿ ಇಲ್ಲ. ಗ್ರಾಮದ ರೈತರೊಬ್ಬರ ಹೊಲದಲ್ಲಿ ಶವಸಂಸ್ಕಾರ ಮಾಡುತ್ತಿದ್ದಾರೆ. ಹಲವು ಬಾರಿ ರುದ್ರಭೂಮಿಗೆ ಜಮೀನು ಖರೀದಿ ಮಾಡುವಂತೆ ಹೆಣವನ್ನಿಟ್ಟು ಪ್ರತಿಭಟನೆ ಮಾಡಿ ತಹಸೀಲ್ದಾರರಿಗೆ‌ ಮನವಿ ನೀಡಿದ್ದರೂ ಅದಕ್ಕೆ ಸ್ಪಂದನೆ ದೊರೆತಿಲ್ಲ ಎಂಬುದು ಗ್ರಾಮಸ್ಥರು ಆರೋಪಿಸಿದ್ದಾರೆ.

Advertisements

ಗ್ರಾಮದಲ್ಲಿ ಫ್ಲೋರೈಡ್ ನೀರು ಪೂರೈಕೆಯಾಗುತ್ತಿತ್ತು. ಇದನ್ನು ತಡೆಯಲು ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿತ್ತು. ಆದರೆ, ಮೂರು ವರ್ಷಗಳಿಂದ ಘಟಕ ಸ್ಥಗಿತಗೊಂಡಿದೆ. ಯಾರು ಇದನ್ನು ದುರಸ್ತಿಗೊಳಿಸುವ ಗೋಜಿಗೆ ಹೋಗಿಲ್ಲ. ಸದ್ಯ ಫ್ಲೋರೈಡ್‌ಯುಕ್ತ ನೀರೇ ಗ್ರಾಮಸ್ಥರಿಗೆ ಆಸರೆಯಾಗಿದೆ. ಶುದ್ಧ ಕುಡಿಯುವ ನೀರಿಗಾಗಿ ಕಾಯುತ್ತ ಕುಳಿತಿದ್ದಾರೆ.

ಸರ್ಕಾರ ಗ್ರಾಮೀಣ ಜನರು ಗುಳೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜನೆಯ ಅಡಿಯಲ್ಲಿ ಕೂಲಿ ಕೆಲಸ ನೀಡುತ್ತಿದೆ. ಆದರೆ, ಈ ಯೋಜನೆ ಒಂದೂವರೆ ವರ್ಷದಿಂದ ಗ್ರಾಮಕ್ಕೆ ಮರೀಚಿಕೆಗಿದೆ. ಗ್ರಾಮದ ಒಬ್ಬ ವ್ಯಕ್ತಿಗೂ ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡುತ್ತಿಲ್ಲ. ಬೇರೆ ಗ್ರಾಮಸ್ಥರಿಗೆ ಕೂಲಿ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಸದ್ಯ ಬರಗಾಲ ಎದುರಿಸುತ್ತಿರುವ ರೈತರು ಕೂಲಿಗಾಗಿ ಗುಳೆ ಹೋಗುತ್ತಿದ್ದಾರೆ. ನರೇಗಾದ ಅಡಿ ಕೆಲಸ ಹಾಗೂ ಕೂಲಿ ನೀಡಿ ಗುಳೆ ತಪ್ಪಿಸಬೇಕು  ಎಂಬುದು ಗ್ರಾಮಸ್ಥರ ಮನವಿ.

ಗ್ರಾಮಕ್ಕೆ ಬೆಳಿಗ್ಗೆ ಒಂದು ಬಾರಿ ಮಾತ್ರ ಬಸ್‌ ಬರುತ್ತದೆ. ಶಾಲಾ, ಕಾಲೇಜುಗಳಿಗೆ ತೆರಳುವ ಮಕ್ಕಳಿಗೆ ಇದರಿಂದ ಸಮಸ್ಯೆಯಾಗುತ್ತಿದೆ. ಪೋಷಕರು ಬಡತನದ ಕಾರಣ ಮಕ್ಕಳನ್ನು ಕೂಲಿ ಕೆಲಸಕ್ಕೆ ಕಳುಹಿಸುತ್ತಿದ್ದಾರೆ. ಶಿಕ್ಷಣ ಪಡೆಯಬೇಕಾದರೆ ಹಾಗೂ ಬೇರೆ ಊರಿಗೆ ಹೋಗಬೇಕಾದರೆ ನಿತ್ಯ ಕನಿಷ್ಠ 2 ಕಿ.ಮೀ ನಡೆಯಬೇಕಿದೆ ಎನ್ನುತ್ತಾರೆ ಗ್ರಾಮಸ್ಥರು.

ಹಡಗಲಿಯಿಂದ ಚಿಕ್ಕವಡ್ಡಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ‌ ಮಧ್ಯದಲ್ಲಿ ಬರುವ ದೊಡ್ಡ ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡಬೇಕೆಂಬುದು ಗ್ರಾಮಸ್ಥರ ಒಕ್ಕೊರಲಿನ ಒತ್ತಾಸೆಯಾಗಿದೆ. ಮಜ್ಜೂರ ಕೆರೆಯ ನೀರು ಸಹ ಇಲ್ಲಿ ಹರಿದು ಬರುವುದರಿಂದ ಸೇತುವೆ ಅವಶ್ಯಕತೆ ಇದೆ. ಈ ಕುರಿತು ಹಲವು ಬಾರಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಭೇಟಿ ನೀಡಿ ಭರವಸೆ ನೀಡುತ್ತಿದ್ದಾರೆ. ಆದರೆ, ಕೆಲಸ ಮಾತ್ರ ಆಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಒಟ್ಟಾರೆ ನಮ್ಮ ಗ್ರಾಮ ಸಮಸ್ಯೆಗಳ ಆಗರವಾಗಿದ್ದು ಈ ಎಲ್ಲ ಸಮಸ್ಯೆಗಳಿಗೆ ಆದಷ್ಟು ಬೇಗ ಮುಕ್ತಿ ನೀಡಿ ಎಂದು ಹಡಗಲಿ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X