ಗದಗ | ಅಂಗನವಾಡಿ ಸುತ್ತ ಗಿಡ-ಗಂಟೆ ಬೆಳೆದು ಮಕ್ಕಳಿಗೆ ಸಮಸ್ಯೆ; ಪೋಷಕರ ಆಕ್ರೋಶ

Date:

ಅಂಗನವಾಡಿ ಹೊರವಲಯದಲ್ಲಿ ಇರುವದರಿಂದ  ಅಂಗನವಾಡಿ ಸುತ್ತಲೂ ಮುಳ್ಳು ಕಂಟಿಗಳು ಹಾಗೂ ಹುಲ್ಲುಗಾವಲು ಬೆಳೆದು ಅಂಗನವಾಡಿ ಸುತ್ತಲೂ ಕ್ರಿಮಿ- ಕೀಟಗಳು, ವಿಷಜಂತೂಗಳು ಹಗಲು ರಾತ್ರಿ ಎನ್ನದೆ ಓಡಾಡುತ್ತಿವೆ ಇದರಿಂದ ಮಕ್ಕಳಿಗೆ ಸಮಸ್ಯೆ ಆಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸಂಕಧಾಳ ಗ್ರಾಮದ ಅಂಗನವಾಡಿ ಆವರಣ ಹಾಗೂ ಸುತ್ತಲೂ ಇರುವ ಜಾಗವನ್ನು ಅಭಿವೃದ್ಧಿ ಮಾಡದೇ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.  ಸುಮಾರು 4 ವರ್ಷಗಳ ಹಿಂದೆಯೇ ಗ್ರಾಮದ ಹೊರವಲಯದಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಪೂರ್ಣ ಪ್ರಮಾಣದಲ್ಲಿ ಕಾಂಪೌಂಡ್ ಗೋಡೆ ನಿರ್ಮಾಣ ಆಗಿರುವುದಿಲ್ಲ. ಅಲ್ಲದೆ ಅಂಗನವಾಡಿ ಆವರಣದಲ್ಲಿ ಹಾಗೂ  ಅದರ ಸುತ್ತಲೂ ಮುಳ್ಳು-ಕಂಟೆಗಳು ಬೆಳೆದುಕೊಂಡಿವೆ. ಇದರಿಂದ ಮಕ್ಕಳು ಅಲ್ಲಿ ಓಡಾಡಲು ಹಾಗೂ ಆಟ ಆಡಲು ಸಹ ಆಗುತ್ತಿಲ್ಲ. ಅಲ್ಲದೆ ಕ್ರಿಮಿ ಕೀಟಗಳು ಓಡಾಡುವ ಕಾರಣಕ್ಕಾಗಿ ಮಕ್ಕಳು ಸಹ ಶಾಲೆಗೆ ಬರಲು ಹಿಂಜರಿಯುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಈ ವಿಚಾರವಾಗಿ ಆದರಹಳ್ಳಿ ಗ್ರಾಮ ಪಂಚಾಯತ ಹಿಂದಿನ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಹಂದಿಗನೂರು ಹಾಗೂ ತಾಲೂಕ ಹಾಗೂ ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇವರಿಗೆ ಹಲವಾರು ಭಾರಿ ನೇರವಾಗಿ ಹಾಗೂ ಫೋನ್ ಮುಖಾಂತರ ಮನವಿ ಮಾಡಿದರು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ಸರ್ಕಾರದಲ್ಲಿ ದುಡ್ಡು ಇಲ್ಲಾ ನೋಡೋಣ, ಮಾಡೋಣ ಎಂಬ ಉಡಾಫೆಯ ಮಾತುಗಳನ್ನು ಆಡುತ್ತಾರೆ” ಎಂದು ಮೈಲಾರಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಗದಗ | ಸಂವಿಧಾನ ಕುರಿತು ರಸಪ್ರಶ್ನೆ ಸ್ಪರ್ಧೆ

ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಆದ್ಯತೆ ಮೇರೆಗೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಅಂಗನವಾಡಿ ಸುತ್ತ ಬೆಳೆದಿರುವ ಅನಗತ್ಯ ಕಳೆಯನ್ನು ತೆರವುಗೊಳಿಸಿ, ಚಿಕ್ಕ ಮಕ್ಕಳು ನಿರ್ಭಯವಾಗಿ ಓಡಾಡಲು ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ ಜೇಬಿಗೂ ಕತ್ತರಿ!

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ...

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ರೈತರಿಗೆ ನ್ಯಾಯ ಓದಗಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ : ಹರಿನಾಥರೆಡ್ಡಿ

ಅಭಿವೃದ್ದಿ ಹೆಸರಿನಲ್ಲಿ ಬೇನಾಮಿ ಸಂಸ್ಥೆಯನ್ನು ಸ್ಥಾಪಿಸಿ ಎಸ್ಸಿ, ಎಸ್ಟಿ ಹಾಗೂ ಅಲ್ಪಸಂಖ್ಯಾತರ...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಗದಗ | ಜಿಲ್ಲೆಯಲ್ಲಿ ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ

"2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಎಫ್.ಎ.ಕ್ಯು ಗುಣಮಟ್ಟದ ಸೂರ್ಯಕಾಂತಿ...