ಗದಗ | ಪೊಲೀಸ್ ಧ್ವಜ ದಿನಾಚರಣೆ; ನಿವೃತ್ತರ ಸೇವಾ ಸಂಸ್ಮರಣೆ ಮತ್ತು ಗೌರವ ಸಮರ್ಪಣಾ ಸಮಾರಂಭ

Date:

Advertisements

ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಪಾತ್ರ ಮಹತ್ವದ್ದಾಗಿದೆ ಎಂದು ನಿವೃತ್ತ ಪೊಲೀಸ ವರಿಷ್ಠಾಧಿಕಾರಿ ಟಿ. ಫೈಜುದ್ದೀನ್ ತಿಳಿಸಿದರು.

ಗದಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಮಂಗಳವಾರ (ಏ.2) ಜಿಲ್ಲಾ ಸಶಸ್ತ್ರ ಪೊಲೀಸ್ ಘಟಕ ಮಲ್ಲಸಮುದ್ರ-ಗದಗ ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ‌ ನಿಮಿತ್ತ ಆಯೋಜಿಸಿದ್ದ ನಿವೃತ್ತರ ಸೇವಾ ಸಂಸ್ಮರಣೆ ಮತ್ತು ಗೌರವ ಸಮರ್ಪಣಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು.

ಇಲಾಖೆಯಲ್ಲಿ ಪ್ರತಿದಿನ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಎಲ್ಲ ನೌಕರರು  ಮಾನಸಿಕ ಹಾಗೂ ದೈಹಿಕ ಸದೃಢವಾಗಿರುವುದು ಅವಶ್ಯಕವಾಗಿದೆ. ಅವರು ತಮ್ಮ ಸೇವಾ ನಿರತ ದಿನಗಳನ್ನು ಸ್ಮರಿಸಿಕೊಳ್ಳುತ್ತಾ ಪೊಲೀಸ ಇಲಾಖೆ ಹಾಗೂ ಮೇಲಾಧಿಕಾರಿಗಳಿಗೆ ಇನ್ನೂ ಹೆಚ್ಚಿನ ಗೌರವ ತರುವ ಕಾರ್ಯ ಮಾಡಬೇಕೆಂದು ತಿಳಿಸಿದರು.

Advertisements

ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಅವರು ಮಾತನಾಡಿ, ಹಗಲು-ರಾತ್ರಿ ಎನ್ನದೇ ಕಾನೂನು ಸುವ್ಯವಸ್ಥೆ ಹಾಗೂ ಶಾಂತತೆ ಕಾಪಾಡಲು ಪೊಲೀಸ್ ಸಿಬ್ಬಂದಿಯವರು ಸದಾ ಕಾರ್ಯನಿರತರಾಗಿರುತ್ತಾರೆ. 1965ರಿಂದ ಪೊಲೀಸ್‌ ಧ್ವಜ ದಿನಾಚರಣೆ ಆಚರಿಸಲಾಗುತ್ತಿದ್ದು, ಪ್ರಸಕ್ತ ವರ್ಷವೂ ಎಪ್ರಿಲ್ 02ರಂದು ರಾಜ್ಯದ ಎಲ್ಲಾ ಪೊಲೀಸ್‌ ಘಟಕಗಳಲ್ಲಿ ಪೊಲೀಸ್‌ ಧ್ವಜ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪೊಲೀಸ್‌ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾದ ಅಧಿಕಾರಿ ಹಾಗೂ ಸಿಬ್ಬಂದಿಯವರನ್ನು ಈ ಸಮಯದಲ್ಲಿ ಸ್ಮರಿಸಿಕೊಳ್ಳಲು  ಹಾಗೂ  ನಿವೃತ್ತಿ ನಂತರ ಅವರಿಗೆ ಉತ್ತೇಜನ ನೀಡಲು  ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರತಿವರ್ಷ ಪೊಲೀಸ ಧ್ವಜ ದಿನಾಚರಣೆ ಸಂದರ್ಭದಲ್ಲಿ ಪೊಲೀಸ್‌ ಧ್ವಜಗಳನ್ನು ಮಾರಾಟ ಮಾಡಿ ಅದರಿಂದ ಬಂದ ಹಣದಲ್ಲಿ ಶೇ.50ರಷ್ಟು ಹಣವನ್ನು ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮ ನಿಧಿಗೆ ಮತ್ತು ಶೇ.50ರಷ್ಟು ಹಣವನ್ನು ಕೇಂದ್ರ ನಿವೃತ್ತ ಪೊಲೀಸ್ ಕಲ್ಯಾಣ ನಿಧಿಗೆ ಜಮಾ ಮಾಡಿ ಈ ನಿಧಿಯನ್ನು ಸೇವೆಯಲ್ಲಿರುವ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ವೈದ್ಯಕೀಯ ಚಿಕಿತ್ಸಾ ವೆಚ್ಚ ಮಂಜೂರಿಸುವ ಸಲುವಾಗಿ ವಿನಿಯೋಗಿಸಲಾಗುತ್ತದೆ.   ಪ್ರತೀ ಮೂರು ತಿಂಗಳಿಗೊಮ್ಮೆ ಜಿಲ್ಲೆಯ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮ ನಿಧಿ ಸಮಿತಿ ಸಭೆ ಕರೆದು ಸದರಿ ಸಭೆಗಳಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯವರ ಕುಂದುಕೊರತೆಗಳನ್ನು ಆಲಿಸಿ, ಕುಂದುಕೊರತೆ ನಿವಾರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯವರು ಕ್ಯಾಂಟೀನ್ ಉಪಯೋಗ ಪಡೆಯುತ್ತಿದ್ದು, ಈ ಸದುಪಯೋಗವನ್ನು ನಿವೃತ್ತ ಪೊಲೀಸ್ ಅಧಿಕಾರಿಯವರುಗಳೂ ಸಹ ಪಡೆಯುವಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಪ್ರಸಕ್ತ ವರ್ಷನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮನಿಧಿಯಿಂದ 39 ಜನ ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿಯವರಿಗೆ  ರೂ.1,27,950ಗಳ ವೈದ್ಯಕೀಯ ಧನ ಸಹಾಯ ಪಾವತಿಸಲಾಗಿದೆ ಮತ್ತು ಮರಣ ಹೊಂದಿದ 22 ಜನ ನಿವೃತ್ತ ಪೊಲೀಸ್ ಅಧಿಕಾರಿಗಳ ಅಂತ್ಯಸಂಸ್ಕಾರಕ್ಕೆ ರೂ.2,20,000 ಧನ ಸಹಾಯ ನೀಡಿಲಾಗಿದೆ ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ತಿಳಿಸಿದರು.

ಕಾರ್ಯಕ್ರಮದಲ್ಲಿ ಸೇವಾ ನಿವೃತ್ತರಿಗೆ ಗೌರವ ಸಮರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಬಿ. ಸಂಕದ, ಡಿಎಸ್‌ಪಿ ಡಿ.ಬಿ. ಇನಾಮದಾರ, ಸೇರಿದಂತೆ ಪೊಲೀಸ್ ಸಿಬ್ಬಂದಿ, ಗಣ್ಯರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X