ಗದಗ | ಮನರೇಗಾ ಯೋಜನೆಯ ಲಾಭ ಬಡವರಿಗೆ ದೊರಕಲಿ: ಬಸವರಾಜ ಗಿರಿತಿಮ್ಮಣ್ಣವರ 

Date:

ಮನರೇಗಾ ಯೋಜನೆಯಡಿ ಈ ಬಾರಿ ಸಮುದಾಯ ಕಾಮಗಾರಿಗಳನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ ತಂದು, ಗ್ರಾಮೀಣ ಪ್ರದೇಶಗಳ ಬಡ ಜನರಿಗೆ ಮನರೇಗಾ ಯೋಜನೆಯ ಲಾಭ ದೊರಕುವ ಹಾಗೆ ಮಾಡುವುದು ನಮ್ಮ ಕರ್ತವ್ಯ. ಅದಕ್ಕೆ ನಿಮ್ಮೆಲ್ಲರ ಸಹಕಾರ ಕೂಡ ಬಹಳ ಮುಖ್ಯ ಎಂದು ಅಸೂಟಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಗಿರಿತಿಮ್ಮಣ್ಣವರ ಹೇಳಿದರು.

ಗದಗ ಜಿಲ್ಲೆಯ ರೋಣ ತಾಲೂಕಿನ ಅಸೂಟಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಕಾಯಕ ಬಂಧುಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

“ಏಪ್ರಿಲ್‌ 1ರಂದು ಅಸೂಟಿ ಗ್ರಾಮ ಪಂಚಾಯಿತಿಯಲ್ಲಿ ಮನರೇಗಾ ಸಾಮೂಹಿಕ ಕಾಮಗಾರಿ ಆರಂಭವಾಗಲಿದ್ದು, ಮನರೇಗಾ ಕೆಲಸಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರರನ್ನು ಸೇರಿಸುವ ಕೆಲಸವನ್ನು ತಾವು ಮಾಡಬೇಕು” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮನರೇಗಾ ಯೋಜನೆ ಮಹತ್ವದ ಪಾತ್ರವಹಿಸಿದೆ. ಯೋಜನೆಯಡಿ ವಾರ್ಷಿಕವಾಗಿ 100 ದಿನಗಳವರೆಗೆ ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಕೆಲಸ ಸಿಗುವಂತಾಗಬೇಕು. ಈ ಮೂಲಕ ಗ್ರಾಮೀಣ ಪ್ರದೇಶದ ಮೂಲಭೂತ ಸಮಸ್ಯೆಗಳನ್ನು ನಿವಾರಿಸಲು ಮನರೇಗಾ ವರದಾನವಾಗಲಿದೆ” ಎಂದರು.

“ಏಪ್ರಿಲ್ 1ರಿಂದ ಮನರೇಗಾ ಕೂಲಿಕಾರರಿಗೆ ದಿನವೊಂದಕ್ಕೆ ₹349 ಕೂಲಿ ನಿಗದಿಪಡಿಸಲಾಗಿದೆ. ಬೇಸಿಗೆ ಅವಧಿಯ 100 ದಿನಗಳ ಕಾಲ ಮನರೇಗಾ ಯೋಜನೆಯಡಿ ಕೆಲಸ ಮಾಡಿದರೆ ಕೂಲಿಕಾರರಿಗೆ ₹34,900 ಸಿಗುತ್ತದೆ. ಕೂಲಿಕಾರರು ಯೋಜನೆಯಿಂದ ಬರುವ ಈ ಹಣವನ್ನು ಮುಂಗಾರಿನ ಕೃಷಿ ಬಿತ್ತನೆಯ ಕಾರ್ಯಕ್ಕೆ ಸದುಪಯೋಗಪಡಿಸಿಕೊಳ್ಳಲು ನೆರವಾಗುವುದು” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿ ಘೋಷಣೆಗೆ ಆಗ್ರಹ

ಬಿಎಫ್‌ಟಿ ಅಶೋಕ ಕಂಬಳಿ, ಕಾಯಕ ಮಿತ್ರರಾದ ಪವಿತ್ರಾ ನಾಡಗೌಡರ, ಕಾಯಕ ಬಂಧುಗಳು ಮನರೇಗಾ ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಇದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ ವಿದ್ಯಾರ್ಥಿ ಯುವಜನರ ಪ್ರಣಾಳಿಕೆ ಬಿಡುಗಡೆ 

ರಾಜ್ಯದಲ್ಲಿ ಒಟ್ಟು ಎಂಟು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ 2024ರ ಈ ಬಾರಿಯ...

ವಿಜಯಪುರ | ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಭೆ

ರಾಜ್ಯದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌ ಕೆ ಶಿವಕುಮಾರ್,...

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಸದಾಶಿವ ಉಳ್ಳಾಲ್ ವಿಶ್ವಾಸ

ಉಳುವವನೇ ಭೂಮಿಯೊಡೆಯ, ಲೋನ್ ಮೇಳ, ಬ್ಯಾಂಕ್ ರಾಷ್ಟ್ರೀಕರಣ, ಮಂಗಳೂರಿಗೆ ಎನ್‌ಎಂಪಿಟಿ, ವಿಮಾನ...

ವಿಜಯಪುರ ಲೋಕಸಭಾ ಕ್ಷೇತ್ರ; 21 ಅಭ್ಯರ್ಥಿಗಳಿಂದ 35 ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ವಿಜಯಪುರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಏಪ್ರಿಲ್‌...