ಗದಗ | ಸಿಇಟಿ ಪರೀಕ್ಷೆ ಕುರಿತು ಪೂರ್ವಭಾವಿ ಸಭೆ

Date:

ಏಪ್ರಿಲ್ 18 ಮತ್ತು 19 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಸುಗಮ ಹಾಗೂ ಸುಲಲಿತವಾಗಿ ನಡೆಸುವಂತೆ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಅವರು ಸೂಚಿಸಿದ್ದಾರೆ.

- Advertisement -

ಗದಗ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಸುಗಮ ನಿರ್ವಹಣೆ ಸಂಬಂಧ ಅಧಿಕಾರಿಗಳ ಜತೆ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈಗಾಗಲೇ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಯಾವುದೇ ರೀತಿ ಗೊಂದಲಕ್ಕೆ ಅವಕಾಶ ಮಾಡದೇ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

“ಜಿಲ್ಲೆಯಲ್ಲಿ ಬಿಸಿಗಾಳಿ ಇರುವುದರಿಂದ ಪರೀಕ್ಷಾ ಕೊಠಡಿಯಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಜತೆಗೆ ಗಾಳಿ ಬೆಳಕು ಇರುವಂತೆ ನೋಡಿಕೊಳ್ಳಬೇಕು. ಅಂತೆಯೇ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಗಮನ ಹರಿಸಬೇಕು. ಶಿಸ್ತು ಕಾಪಾಡಬೇಕು” ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಪರೀಕ್ಷಾ ಕೇಂದ್ರಗಳ ವಿವರ : ಗದಗ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಎಚ್‌ಸಿಇಎಸ್ ಪದವಿ ಪೂರ್ವ ಕಾಲೇಜು, ಕೆವಿಎಸ್‌ಆರ್ ಪದವಿ ಪೂರ್ವ ಕಾಲೇಜು, ತೋಂಟದ ಸಿದ್ಧೇಶ್ವರ ವಿಜ್ಞಾನ ಮತ್ತು ವಾಣಿಜ್ಯ ಪಿಯು ಕಾಲೇಜು, ವಿದ್ಯಾದಾನ ಸಮಿತಿ ಬಾಲಕರ ಪದವಿ ಪೂರ್ವ ಕಾಲೇಜು, ಬೆಟಗೇರಿಯ ಎಎಸ್‌ಎಸ್‌ ಪದವಿ ಪೂರ್ವ ಕಾಲೇಜು, ನಗರದ ಮೈಲಾರಪ್ಪ ಮೆಣಸಗಿ ಪದವಿ ಪೂರ್ವ ಕಾಲೇಜು, ಜಗದ್ಗುರು ತೋಂಟದಾರ್ಯ ಪದವಿ ಪೂರ್ವ ಕಾಲೇಜು, ಲೋಯೊಲಾ ಪದವಿ ಪೂರ್ವ ಕಾಲೇಜು, ವಿದ್ಯಾದಾನ ಸಮಿತಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಸನ್ಮಾರ್ಗ ಪದವಿ ಪೂರ್ವ ಕಾಲೇಜು, ಕರ್ನಾಟಕ ಪದವಿ ಪೂರ್ವ ಕಾಲೇಜು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿ ನಾಗಜ್ಯೋತಿ ಬಿ ಎನ್ ನಾಮಪತ್ರ ಸಲ್ಲಿಕೆ

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕುರ್ತಕೋಟಿ, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...