ಗದಗ | ಉಳ್ಳಾಗಡ್ಡಿ ಬೆಲೆ ಕುಸಿತ; ಎರಡು ಎಕ್ಕರೆ ಹರಗಿದ ರೈತ

Date:

ಬೆಳೆದ ಬೆಳೆಗೆ ಸೂಕ್ತ ಬೆಲೆ ಇಲ್ಲದೆ ಮನನೊಂದ ರೈತ ತಾನು ಬೆಳೆದ ಉಳ್ಳಾಗಡ್ಡಿ ಬೆಳೆಯನ್ನೇ ಟ್ರ್ಯಾಕ್ಟರ್ ಮೂಲಕ ನಾಶ ಮಾಡಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಗುಜಮಾಗಡಿ ಗ್ರಾಮದಲ್ಲಿ ನಡೆದಿದೆ.

- Advertisement -

ಗ್ರಾಮದ ಯುವ ರೈತ ಸಂಗಪ್ಪ ಮರಿತಿಮ್ಮಪ್ಪ ಹೂಗಾರ್ ತಮ್ಮ ಎರಡು ಎಕ್ಕರೆ ಇಪ್ಪತ್ತು ಗುಂಟೆ ಜಮೀನಿನಲ್ಲಿ ಉಳ್ಳಾಗಡ್ಡಿ ಬೆಳೆ ಬೆಳೆದಿದ್ದ. ಮಾರುಕಟ್ಟೆಯಲ್ಲಿ ಉಳ್ಳಾಗಡ್ಡಿ ಬೆಲೆ ಗಣನೀಯವಾಗಿ ಕುಸಿತವಾಗಿದ್ದರಿಂದ ಬೇಸರಗೊಂಡು ಉಳ್ಳಾಗಡ್ಡಿ ಬೆಳೆಯನ್ನು ಟ್ರಾಕ್ಟರ್ ಮೂಲಕ ಹರಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಗದಗ | ಸಿ.ಸಿ. ರಸ್ತೆ ಕಳಪೆ ಕಾಮಗಾರಿ: ಎಸ್ ಡಿ ಪಿ ಐ ಆರೋಪ

“ಮಾರುಕಟ್ಟೆಯಲ್ಲಿ ಕ್ವಿಂಟಾಲ್‌ ಉಳ್ಳಾಗಡ್ಡಿಗೆ 500-600 ರೂ. ಇದೆ. ಎರಡು ಎಕರೆ ಈರುಳ್ಳಿ ಬೆಳೆಯಲು 15-20 ಸಾವಿರ ರೂ.ಗೂ ಅಧಿಕ ಹಣ ಖರ್ಚಾಗಿದೆ. ಸದ್ಯ ಬೆಳೆ ಕಟಾವಿಗೆ ಬಂದಿದ್ದು, ಕಟಾವು ಮಾಡಲು 20 ಸಾವಿರ ರೂ. ವೆಚ್ಚವಾಗಲಿದೆ. ಆದರೆ, ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಇಲ್ಲ. ಇತ್ತ ಚಿಲ್ಲರೆ ವ್ಯಾಪಾರಿಗಳು 25-30 ರೂ.ವರಗೆ ಕೆ.ಜಿ. ಈರುಳ್ಳಿ ಮಾರಾಟ ಮಾಡುತ್ತಿದ್ದು ಲಾಭ ಗಳಿಸುತ್ತಿದ್ದಾರೆ. ಆದರೆ, ರೈತರಿಗೆ ಮಾತ್ರ ಬೆಲೆ ದೊರೆಯುತ್ತಿಲ್ಲ. ಇದರಿಂದ ಈರುಳ್ಳಿ ಬೆಳೆಗಾರರು ಕಂಗಾಲಾಗಿದ್ದಾರೆ. ಬಂದ ಬೆಳೆ ಮಾರಾಟ ಮಾಡಿದರೆ, ಕೂಲಿ ಮೊತ್ತವೂ ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ. ಹರಗಿದಲ್ಲಿ ಹೊಲಕ್ಕೆ ಗೊಬ್ಬರವಾದರೂ ಆಗಲಿದೆ” ಎಂದು ಬೆಳೆ ನಾಶಪಡಿಸಿರುವುದಾಗಿ ರೈತ ಸಂಗಪ್ಪ ಅಳಲು ತೋಡಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...