ಗದಗ | ಅವಳಿ ನಗರಕ್ಕೆ ಸಮರ್ಪಕ ನೀರಿನ ಪೂರೈಕೆಗೆ ಆದ್ಯತೆ ಇರಲಿ : ಸಚಿವ ಎಚ್ ಕೆ ಪಾಟೀಲ

Date:

Advertisements

“ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ಸಮರ್ಪಕ ನೀರು ಪೂರೈಕೆಗೆ ಆದ್ಯತೆ ವಹಿಸಬೇಕು. ಅಲ್ಲದೇ ಪ್ರತಿ ಮೂರು ದಿನಕ್ಕೊಮ್ಮೆ ನೀರು ಪೂರೈಕೆ ಆಗಬೇಕು” ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಅವರು ಸೂಚನೆ ನೀಡಿದರು.

ಗದಗ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸೋಮವಾರದಂದು ಗದಗ ಬೆಟಗೇರಿ ಅವಳಿ ನಗರಕ್ಕೆ ನೀರು ಸರಬರಾಜು ಕುರಿತಂತೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಸೂಕ್ತ ನಿರ್ದೇಶನ ನೀಡಿದರು.

“ಅಗತ್ಯ ಮೂಲಭೂತ ಸೌಲಭ್ಯಗಳಲ್ಲಿ ಒಂದಾದ ನೀರು ಸರಬರಾಜು ಮಾಡಲು ಪ್ರಥಮಾದ್ಯತೆ ನೀಡಬೇಕು. ವಿನಾಕಾರಣ ನೀರಿನ ಅಪವ್ಯಯವನ್ನು ತಡೆದು ಅಗತ್ಯವಿರುವಲ್ಲಿ ನೀರು ಪೂರೈಕೆ ಮಾಡಲು ಅಧಿಕಾರಿ ವರ್ಗ ಕ್ರಮ ಕೈಗೊಳ್ಳಬೇಕು” ಎಂದರು.

“ಪ್ರತಿ ದಿನ ರಾತ್ರಿ ನದಿಯಿಂದ ಜಾಕ್ವೆಲ್ ಮೂಲಕ ನೀರನ್ನು ಟ್ಯಾಂಕಿನಲ್ಲಿ ಸಂಗ್ರಹಿಸಿ, ಮುಂಜಾನೆ ವಾರ್ಡ್ ವಾರು ನೀರು ಪೂರೈಕೆಗೆ ವಾಲ್ ಮನ್ ಗಳು ಮುಂದಾಗಬೇಕು” ಎಂದರು.

“ನಗರಸಭೆಯಿಂದ ಸದ್ಯ ಕಾರ್ಯನಿರ್ವಹಿಸುತ್ತಿರುವ ವಾಲ್ಮಾನ್ ಗಳು ಸೂಪರ್ವೈಸರ್ಗಳನ್ನು ಬದಲಾವಣೆ ಮಾಡಬೇಕು. ಅವರಿಗೆ ಪ್ರತ್ಯೇಕ ಬೀದಿ, ವಾರ್ಡ್ ಗಳ ಮರುಹಂಚಿಕೆ ಮಾಡಿ ಸಮರ್ಪಕ ನೀರು ಪೂರೈಕೆಗೆ ಇರುವ ಕ್ರಮ ಕೈಗೊಳ್ಳಬೇಕು, ಈ ಬಗ್ಗೆ ನಗರಸಭೆ ಪೌರಾಯುಕ್ತರು ಮುಂದಾಗಬೇಕು” ಎಂದು ಸಚಿವರು ಸೂಚನೆ ನೀಡಿದರು.

“ನಾವೆಲ್ಲರೂ ನೀರು ಪೂರೈಕೆ ಮಾಡುವ ವಾಲ್ಮೆನ್ ಮೇಲೆ ವಿಶ್ವಾಸವಿಟ್ಟು ಗಮನಿಸೋಣ, ಮುಂದಿನ 100 ದಿವಸದೊಳಗೆ ಸಮರ್ಪಕ ನೀರಿನ ವ್ಯವಸ್ಥೆ ಆಗುವಂತೆ ಅವರು ಕಾರ್ಯನಿರ್ವಹಿಸುವ ವಿಶ್ವಾಸವಿದೆ. ನೀರು ಪೂರೈಕೆ ಕುರಿತಂತೆ ನವಂಬರ್ 1 ರಂದು ಮತ್ತೆ ನಾವೆಲ್ಲರೂ ಸೇರೋಣ, ಆಗ ನೀರಿನ ಸಮಸ್ಯೆ ಪೂರೈಕೆ ಸಂಪೂರ್ಣ ನಿವಾರಣೆಯಾಗಿರಬೇಕು” ಎಂದರು.

“ಅವಳಿ ನಗರಕ್ಕೆ ನೀರು ಪೂರೈಕೆಗಾಗಿಯೇ ಪ್ರತ್ಯೇಕ ಒಬ್ಬ ಇಂಜಿನಿಯರ್ ನೇಮಕ ಮಾಡಿ ನೀರು ಪೂರೈಕೆ ಸರಳೀಕರಣಗೊಳಿಸುವಂತೆ, ಅಲ್ಲದೆ ಪೈಪ್, ವಾಲ್ ನಿಂದ ಪೋಲಾಗುವ ನೀರನ್ನು ತಡೆಯಲು ಶೀಘ್ರ ದುರಸ್ತಿ ಕೈಗೊಳ್ಳಲು” ಸಚಿವ ಹೆಚ್ ಕೆ ಪಾಟೀಲ ಸೂಚಿಸಿದರು.

“ಅವಳಿ ನಗರಕ್ಕೆ ನೀರು ಪೂರೈಕೆ ಕುರಿತಂತೆ ನಗರಸಭೆ ಪೌರಾಯುಕ್ತರು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ಸಮರ್ಪಕ ನೀರು ಪೂರೈಕೆ ಆಗುತ್ತಿರುವ ಬಗ್ಗೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಮೇಲುಸ್ತುವಾರಿ ಕಾರ್ಯ ನಿರ್ವಹಿಸಬೇಕು” ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಮಾತನಾಡಿ, “ಮೊದಲು ದಿಬ್ಬದಲ್ಲಿರುವ ಮನೆಗಳಿಗೆ ನೀರಿನ ಪೂರೈಕೆ ಮಾಡಬೇಕು ನಂತರದಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ಪೂರೈಕೆ ಆಗುವಂತೆ ನಿಗ ವಹಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಪ್ರಗತಿಪರ ಸಂಘಟನೆಗಳ ಸಮ್ಮುಖದಲ್ಲಿ ವಿವಿಧ ಸಮಸ್ಯೆಗಳ ಕುರಿತು ಚರ್ಚೆ

ಈ ವೇಳೆ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ, ಪ್ರಭು ಬುರುಬುರೆ, ಸಿದ್ದು ಪಾಟೀಲ, ಅಶೋಕ ಮಂದಾಲಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ಅಧಿಕಾರಿ ರೋಹನ್ ಜಗದೀಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವನಗೌಡ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ್ ಸೇರಿದಂತೆ ನಗರಸಭೆಯ ಅಧಿಕಾರಿಗಳು, ವಾಲ್ಮಾನ್ ಗಳು ಸೂಪರ್ ವೈಸರ್ ಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X