ಗದಗ | ಪ್ರೊ. ಬಿ. ಕೃಷ್ಣಪ್ಪ ಜನ್ಮದಿನ ʼಸಂಘರ್ಷ ದಿನʼವಾಗಿ ಆಚರಿಸಲು ನಿರ್ಧಾರ: ಬಾಲರಾಜ ಅರಬರ‌

Date:

Advertisements

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಆಶಯ ಈಡೇರಿಸುವ ಹಾಗೂ ಶೋಷಿತ ವರ್ಗಕ್ಕೆ ನ್ಯಾಯ ಒದಗಿಸುವ ಉದ್ದೇಶದಿಂದ 70ರ ದಶಕದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಹುಟ್ಟುಹಾಕಿದ ಹೋರಾಟಗಾರ ಪ್ರೊ. ಬಿ.ಕೃಷ್ಣಪ್ಪ ಅವರ ಜನ್ಮದಿನವನ್ನು ‘ಸಂಘರ್ಷ ದಿನ’ವನ್ನಾಗಿ ಆಚರಿಸಲಾಗುವುದು ಎಂದು ಗದಗ ಸಮಿತಿಯ ಜಿಲ್ಲಾ ಸಂಚಾಲಕ ಬಾಲರಾಜ ಅರಬರ ಹೇಳಿದರು.

ಗದಗ ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.

ಮುಂಡರಗಿ ತಾಲೂಕು ಸಂಚಾಲಕ ಹನಮಂತ ಪೂಜಾರ ಮಾತನಾಡಿ, “ಪ್ರೊ. ಕೃಷ್ಣಪ್ಪ ಅವರಂತಹ ಅಪ್ರತಿಮ ನಾಯಕ, ಚಿಂತಕ, ಹೋರಾಟಗಾರನ ಜನ್ಮದಿನವನ್ನು ‘ಸಂಘರ್ಷ ದಿನ’ವನ್ನಾಗಿ ಆಚರಿಸಲಾಗುವುದು. ಜೂ.9 ರಂದು ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಪುರಭವನದಲ್ಲಿ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕ‌ರ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ” ಎಂದು
ತಿಳಿಸಿದರು.

Advertisements

“ಬಾಲ್ಯದಲ್ಲಿ ಅಸ್ಪೃಶ್ಯತೆಯ ಅವಮಾನ, ಶೋಷಣೆ ಅನುಭವಿಸಿದ ಇವರು ಕರ್ನಾಟಕದಲ್ಲಿ ಪ್ರತ್ಯೇಕ ದಲಿತ ಚಳವಳಿ ಪ್ರಾರಂಭಿಸಿದರು. ಪ್ರೊ. ಬಿ. ಕೃಷ್ಣಪ್ಪ- ಹಬ್ಬನವರು ದಲಿತ ಹೋರಾಟಗಾರರಾಗಿ ಅಷ್ಟೇ ಅಲ್ಲದೇ ಪತ್ರಕರ್ತರಾಗಿ, ಲೇಖಕರಾಗಿ ಮತ್ತು ಅಂಬೇಡ್ಕರ್ ವಾದದ ಕಣೋಟದಿಂದ ಸಾಹಿತ್ಯ, ಸಮಾಜ, ರಾಜಕಾರಣವನ್ನು/ ಗ್ರಹಿಸಲು ಪ್ರಯತ್ನಿಸಿದ ಅಪೂರ್ವ ಚಿಂತಕರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಪ್ರಜಾಪ್ರಭುತ್ವ, ಸಂವಿಧಾನ, ಜನಜೀವನದ ಮೇಲಿನ ದಾಳಿಗೆ ಜನತಾ ತೀರ್ಪು ದೊರಕಿದೆ: ಸಿಪಿಐ(ಎಂ)

ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಗೋಕಾವಿ, ರೋಣ ತಾಲೂಕು ಸಂಚಾಲಕ ಹನಮಂತ ಚಲವಾದಿ, ರಮೇಶ ಚಲವಾದಿ, ಕೆಂಚಪ್ಪ ಮ್ಯಾಗೇರಿ, ಮಾಂತೇಶ ನಡಗಲಿ, ಪ್ರಕಾಶ ಕಮಡೊಳ್ಳಿ, ಪ್ರಕಾಶ ಭಜಂತ್ರಿ, ಹೊನ್ನಪ್ಪ ಸಾಕಿ, ಶ್ರೀಧರ ಕಲಾಲ, ಪ್ರಕಾಶ ಗಡ್ಡದವರ, ಪೂಜಾ ಬೇವೂರ, ಸಂತೋಷ ಜಾಲನ್ನವರ, ಮಾರುತಿ ಅಂಗಡಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X