ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಾರ್ಚ್-ಎಪ್ರಿಲ್-2024ರ ಮಾಹೆಯಲ್ಲಿ ನಡೆಸಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್ 15ರಿಂದ ಏಪ್ರಿಲ್ 29ರವರೆಗೆ ಗದಗ ಜಿಲ್ಲೆಯ 6 ಮೌಲ್ಯಮಾಪನ ಕೇಂದ್ರಗಳಲ್ಲಿ ನಡೆಯಲಿದೆ.
ಈ ಪರೀಕ್ಷಾ ಮೌಲ್ಯಮಾಪನ ಕಾರ್ಯವು ಸುಗಮವಾಗಿ ಜರುಗಲು ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮೌಲ್ಯಮಾಪನ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಏಪ್ರಿಲ್ 15 ರಿಂದ ಏಪ್ರಿಲ್ 29 ರವರೆಗೆ ಪ್ರತಿಬಂಧಕಾಜ್ಞೆ ಜಾರಿಯಾಗಿದೆ.
“ಈ ಅವಧಿಯಲ್ಲಿ ಮೌಲ್ಯಮಾಪನ ಕಾರ್ಯಗಳಿಗಾಗಿ ನೇಮಿಸಿರುವ ಸಿಬ್ಬಂದಿಯ ಹೊರತಾಗಿ ಬೇರೆ ಯಾವುದೇ ಅನಧಿಕೃತ ವ್ಯಕ್ತಿಗಳ ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ” ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಆದೇಶಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಗದಗ | ಸಿಇಟಿ ಪರೀಕ್ಷೆ ಕುರಿತು ಪೂರ್ವಭಾವಿ ಸಭೆ
ಜಿಲ್ಲೆಯಲ್ಲಿ 6 ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಕೇಂದ್ರಗಳ ವಿವರ: ಗದಗ-ಬೆಟಗೇರಿಯ ಸೇಂಟ್ ಜಾನ್ ಪ್ರೌಢಶಾಲೆ, ಪಾಲಾ ಬಾದಾಮಿ ರಸ್ತೆಯಲ್ಲಿನ ಲೊಯೋಲಾ ಪ್ರೌಢಶಾಲೆ, ಒಕ್ಕಲಗೇರಿಯ ಸಿಡಿಒ ಜೈನ್ ಆಂಗ್ಲ ಮಾಧ್ಯಮ ಶಾಲೆ, ಕನಕ ಭವನದ ಹತ್ತಿರ ಮಹಾವೀರ ಜೈನ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಭೂಮರಡ್ಡಿ ವೃತ್ತ ಹತ್ತಿರದ ಜಗದ್ಗುರು ತೋಂಟದಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಸಿದ್ಧಲಿಂಗ ನಗರದ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ.
