ಗದಗ | ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಶೇಖರಗೌಡ ರಾಮತ್ನಾಳ

Date:

Advertisements

ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಈ ಕುರಿತು ಅರಿವು ಮೂಡಿಸುವುದು ಮಕ್ಕಳ ರಕ್ಷಣಾ ಘಟಕ ಸೇರಿದಂತೆ ಎಲ್ಲ ಇಲಾಖೆಯ ಕರ್ತವ್ಯ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ತಿಳಿಸಿದರು.

ಗದಗ ಜಿಲ್ಲಾಡಳಿತ ಭವನದಲ್ಲಿ ಸೋಮವಾರದಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಹಲವು ಇಲಾಖೆಗಳೊಂದಿಗೆ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಅಂಗನವಾಡಿ ಕೇಂದ್ರ, ಶಾಲಾ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ 1098 ಶಾಶ್ವತ ಫಲಕ ಬರೆಯಿಸಬೇಕು. ಶಾಲೆಗಳಲ್ಲಿ ಪ್ರತಿ ತಿಂಗಳು ಮಕ್ಕಳ ಸಭೆಗಳನ್ನು ಜರುಗಿಸುವದರ ಜೊತೆಗೆ ಗ್ರಾಮ ಪಂಚಾಯಿತಿಗಳಲ್ಲಿಯೂ ಮಕ್ಕಳ ಸಹಾಯವಾಣಿ 1098 ಶಾಶ್ವತ ಫಲಕ ಅಳವಡಿಸಬೇಕು. ಬಾಲ್ಯ ವಿವಾಹ ನಡೆಯುತ್ತಿರುವ ಕುರಿತು ಮಾಹಿತಿ ಬಂದರೆ ವಿಳಂಬಕ್ಕೆ ಆಸ್ಪದ ನೀಡದೆ ಕೂಡಲೇ ಸ್ಥಳಕ್ಕೆ ಧಾವಿಸಿ ಅಗತ್ಯ ದಾಖಲಾತಿಗಳೊಂದಿಗೆ ಎಫ್‌ಐಆರ್ ದಾಖಲಿಸಲು ಕ್ರಮ ವಹಿಸಬೇಕು” ಎಂದು ತಿಳಿಸಿದರು.

Advertisements

“ಶಾಲೆಯಲ್ಲಿ ಕಡ್ಡಾಯವಾಗಿ ಶೌಚಾಲಯಗಳು ಇರುವ ಹಾಗೆ ಹಾಗೂ ಅವುಗಳ ಸ್ವಚ್ಛತೆಗೆ ಕ್ರಮ ವಹಿಸಿ ಮಕ್ಕಳ ವಸತಿ ಶಾಲೆಗಳಲ್ಲಿ ಮಕ್ಕಳ ಸಮಸ್ಯೆಗಳನ್ನು ಆಲಿಸಲು ಮಕ್ಕಳ ಸಲಹಾ ಪೆಟ್ಟಿಗೆಗಳನ್ನು ತಪ್ಪದೇ ಅಳವಡಿಸಬೇಕು. ಶಾಲೆಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡದೆ ಕಾನೂನು ಬಾಹಿರ ಚಟುವಟಿಕೆಗಳ ತಡೆಗಾಗಿ ಬೀಟ್ ಪೊಲೀಸರು ಶಾಲೆಗಳಿಗೆ ಭೇಟಿ ನೀಡಬೇಕು” ಎಂದು ಸಲಹೆ ಮಾಡಿದರು.

ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಕೆ ಟಿ ತಿಪ್ಪೆಸ್ವಾಮಿ ಮಾತನಾಡಿ, “ಶಾಲೆಗಳಲ್ಲಿ ಮಕ್ಕಳ ನಿಯಮಿತ ಆರೋಗ್ಯ ತಪಾಸಣೆಯಾಗಬೇಕು. ವಸತಿ ಶಾಲೆಯಲ್ಲಿ ಮಕ್ಕಳ ಆರೋಗ್ಯದ ಕುರಿತು ನಿರ್ಲಕ್ಷ್ಯ ತೋರಬಾರದು ಹಾಗೂ ಶಾಲೆಗಳಲ್ಲಿ ಮಕ್ಕಳಿಗೆ ಮೂಲಭೂತ ಸೌಕರ್ಯಗಳು ಒದಗುವಂತೆ ನೋಡಿಕೊಳ್ಳಬೇಕು. ಶಾಲೆಯ ಕಂಪೌಂಡಿನೊಳಗೆ ಸುರಕ್ಷಿತ ವಿದ್ಯುತ್ ಸಂಪರ್ಕ ಇರುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಅಪಘಾತ ಸಂಭವಿಸುವ ಸಾಧ್ಯತೆ ಇದ್ದು ಸಂಬಂಧಿತ ಮುಖ್ಯಸ್ಥರನ್ನೇ ಹೊಣೆಗಾರರಾಗಲಿದ್ದಾರೆ. ಪ್ರತಿ ಗ್ರಾಮ ಪಂಚಾಯತ್‍ಗಳಲ್ಲಿ ಮಕ್ಕಳ ಗ್ರಾಮ ಸಭೆ ನಡೆಸಬೇಕು. ಮಕ್ಕಳಿಗೆ ಏನಾದರೂ ಸಮಸ್ಯೆಯಾದಲ್ಲಿ ಸ್ವತಃ ಮಕ್ಕಳೇ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡುವ ಕುರಿತು ಮಕ್ಕಳಿಗೆ ಅರಿವು ಮೂಡಿಸಬೇಕು” ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಮಾತನಾಡಿ, “ಶಾಲೆ ಮತ್ತು ಕಾಲೇಜುಗಳಲ್ಲಿ ಮಕ್ಕಳ ಹಕ್ಕುಗಳ ಕುರಿತು ಹಾಗೂ ಪೋಕ್ಸೊ ಕಾಯ್ದೆ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು” ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಾತನಾಡಿ, “ಜಿಲ್ಲೆಯಲ್ಲಿ 2022-23 ನೇ ಸಾಲಿನಲ್ಲಿ ಒಟ್ಟು 47 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. 2023-24 ನೇ ಸಾಲಿನಲ್ಲಿ (ಜುಲೈ 15, ತಿಂಗಳ ಅಂತ್ಯಕ್ಕೆ ) ಒಟ್ಟು 9 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಕೋವಿಡ್‍ನಿಂದ ಪೋಷಕರಿಬ್ಬರನ್ನು ಕಳೆದುಕೊಂಡು ವಿಸ್ತೃತ ಕುಟುಂಬದ ಸದಸ್ಯರ ಆರೈಕೆಯಲ್ಲಿ 18 ವರ್ಷದೊಳಗಿನ ಮಕ್ಕಳಿಗೆ ಪಾಲನೆ, ಪೋಷಣೆ ಮತ್ತು ರಕ್ಷಣೆ ಒದಗಿಸಿ ಅವರ ಸರ್ವತೋಮುಖ ಬೆಳವಣಿಗೆಗೆ ಸೌಕರ್ಯ ಒದಗಿಸಲು ಮುಖ್ಯಮಂತ್ರಿ ಬಾಲಸೇವಾ ಯೋಜನೆಯಡಿ ಪ್ರತಿ ಮಗುವಿಗೆ ಪ್ರತಿ ತಿಂಗಳು ₹3,500 ರಂತೆ ಜಿಲ್ಲೆಯಲ್ಲಿ ಒಟ್ಟು 5 ಅರ್ಹ ಫಲಾನುಭವಿ ಮಕ್ಕಳಿಗೆ ಸಹಾಯಧನ ನೀಡಲಾಗುತ್ತಿದೆ. ವಿಶೇಷ ದತ್ತು ಸಂಸ್ಥೆಯಲ್ಲಿ ಒಟ್ಟು 3 ಮಕ್ಕಳು ಪೋಷಣೆ ಪಡೆಯುತ್ತಿವೆ. ಜಿಲ್ಲೆಯಲ್ಲಿ ಶಿಶು ಮಕ್ಕಳ ರಕ್ಷಣೆಗಾಗಿ ಸಾರ್ವಜನಿಕ ಜನದಟ್ಟಣೆ ಇರುವ ಸ್ಥಳಗಳಲ್ಲಿ, ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ, ರೇಲ್ವೆ ನಿಲ್ದಾಣಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ಮಮತೆಯ ತೊಟ್ಟಿಲುಗಳನ್ನು ಇರಿಸಲಾಗಿದೆ. ಸಾರ್ವಜನಿಕರಲ್ಲಿ ಈ ಕುರಿತು ಅರಿವು ಮತ್ತು ಜಗೃತಿ ಮೂಡಿಸಲಾಗಿದೆ” ಎಂದು ಸಭೆಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಅನಾಥೆಯಾಗಿ ಓಡಾಡುತ್ತಿದ್ದ ಮಹಿಳೆಯ ರಕ್ಷಣೆ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿ ಚಳಗೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ ವೈ ಶೆಟ್ಟೆಪ್ಪನವರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರವಿ ಗುಂಜೀಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಜಗದೀಶ ನುಚ್ಚಿನ, ಬಾಲ ನ್ಯಾಯ ಮಂಡಳಿ ಸದಸ್ಯ ಜೆ ಸಿ ರೇಶ್ಮಿ, ಭಾರತಿ ಶಲವಡಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಅನ್ನಪೂರ್ಣ ಗಾಣಿಗೇರ ಸೇರಿದಂತೆ ಎಲ್ಲ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು, ಹಲವು ಇಲಾಖೆಯ ಅಧಿಕಾರಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X