ಗದಗ | ಅಕ್ರಮ ಮರಳು ಗಣಿಗಾರಿಕೆ; ದಸಂಸ ಪ್ರತಿಭಟನೆ

Date:

ಗದಗ ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿ ವ್ಯಾಪಕವಾಗಿದ್ದಿ, ರೋಣ ತಾಲೂಕಿನಾದ್ಯಂತ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಭೀಮ್ ಆರ್ಮಿ (ಅಂಬೇಡ್ಕರ್ ವಾದ) ತಾಲೂಕು ಸಮಿತಿ ಸದಸ್ಯರು ರೋಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಪ್ರಧಾನ ಕಾರ್ಯದರ್ಶಿ ಹನಮಂತ ಚಲವಾದಿ, ರೋಣ ತಾಲೂಕಿನ ಹಲವು ಗ್ರಾಮಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ. ನಿಯಮ ಮೀರಿ ಲಾರಿಗಳಲ್ಲಿ ಹೆಚ್ಚಿನ ಮರಳು ತುಂಬಿಸಿ ಸಾಗಾಟ ಮಾಡುತ್ತಿದ್ದಾರೆ. ಈ ಕುರಿತು ಎಷ್ಟೇ ಮನವಿ ಮಾಡಿದರೂ ತಾಲೂಕು ಆಡಳಿತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ರೋಣ ನಗರದ ಮತ್ತು ನಗರವನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳಲ್ಲಿ ಅತಿಯಾದ ಮರಳು ಲಾರಿಗಳ ಓಡಾಟಕ್ಕೆ ಸಂಪೂರ್ಣ ಹಾಳಾಗಿವೆ. ತಗ್ಗು ಗುಂಡಿ ಬಿದ್ದಿರುವ ರಸ್ತೆಗಳಲ್ಲಿ ವಾಹನ ಅಪಘಾತಗಳ ಪ್ರಮಾಣ ಹೆಚ್ಚುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸದೆ ಸುಮ್ಮನಿದ್ದಾರೆ ಎಂದು ಆರೋಪಿಸಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಸಾರಿಗೆ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ತಾಲೂಕು ಆಡಳಿತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾ ಸ್ಥಳಕ್ಕೆ ಬಂದ ರೋಣ ತಹಸೀಲ್ದಾರ್ ನಾಗರಾಜ.ಕೆ, ಮನವಿ ಸ್ವೀಕರಿಸಿ ಮುಖ್ಯಮಂತ್ರಿಗಳಿಗೆ ಮನವಿ ತಲುಪಿಸುವ ಮತ್ತು ತಮ್ಮ ವ್ಯಾಪ್ತಿಯಲ್ಲಿ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.

ಈ ವೇಳೆ ಭೀಮ್ ಆರ್ಮಿ‌ ರೋಣ ತಾಲೂಕು ಘಟಕದ ಅಧ್ಯಕ್ಷ ಮುತ್ತು ನಂದಿ, ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚಲವಾದಿ, ಪುರಸಭೆ ಸದಸ್ಯ ಸಂತೋಷ ಕಡಿವಾಲ, ಭೀಮ್ ಆರ್ಮಿ ರೋಣ ತಾಲೂಕು ಘಟಕದ ಉಪಾಧ್ಯಕ್ಷ ಪುಂಡಲೀಕ ಮಾದರ, ಪದಾಧಿಕಾರಿಗಳಾದ ಸುರೇಶ ಹಲಗಿ, ಅಭಿಷೇಕ ಕೊಪ್ಪದ, ಚಂದ್ರು ಮಾದರ, ಮಹೇಶ ಮಾದರ, ರವಿ ಜೋಗಣ್ಣವರ, ಬಾಲರಾಜ ಹಲಗಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...