ಗದಗ | ತಹಶೀಲ್ದಾರ್ ಕಛೇರಿ ಸ್ಥಳಾಂತರ ಖಂಡಿಸಿ ಪ್ರತಿಭಟನೆ

Date:

ತಹಶೀಲ್ದಾ‌ರ್ ಕಛೇರಿಯನ್ನು ಎಪಿಎಂಸಿ ಆವರಣದಲ್ಲಿರುವ ಟೆಂಡರ್‌ ಹಾಲ್‌ಗೆ ಸ್ಥಳಾಂತರಿಸುವ ನಿರ್ಧಾರ ವಿರೋಧಿಸಿ ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ(ದಾದಾಸಾಹೇಬ್ ಡಾ.ಎನ್.ಮೂರ್ತಿ ಸ್ಥಾಪಿತ) ಹಾಗೂ ಬಾಬು ಜಗಜೀವನ್ ರಾಮ್ ಆದಿ ಜಾಂಬವ ಯುವ ಬ್ರಿಗೇಡ್ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾ‌ರ್ ಕಿರಣಕುಮಾರ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಮಂಜುನಾಥ್ ಬುರಡಿ ಮಾತನಾಡಿ, “ನಾವು ಸ್ಥಳಾಂತರ ಮಾಡಬೇಕಾಗಿರುವದು ತಾಲ್ಲೂಕು ಪಂಚಾಯಿತಿ ಹೊರತು ತಹಶೀಲ್ದಾ‌ರ್ ಕಚೇರಿಯಲ್ಲ. ಸರ್ಕಾರಿ ಕೆಲಸ ಸಾರ್ವಜನಿಕ ಕೆಲಸ. ತಹಶೀಲ್ದಾ‌ರ್ ಕಚೇರಿ ಇದ್ದ ಸ್ಥಳದಲ್ಲೇ ಇರಬೇಕು. ಜಿಲ್ಲಾಧಿಕಾರಿಗಳು ಕೂಡಲೇ ತಮ್ಮ ಆದೇಶವನ್ನು ಮರಳಿ ಪಡೆಯಬೇಕು. ಇಲ್ಲವಾದರೆ ಮುಂದಿನ ದಿನಮಾನಗಳಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಉಗ್ರ ಹೋರಾಟ ಮಾಡಲಾಗುವದು” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಈ ಕಚೇರಿಯ ಸ್ಥಳಾಂತರದ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಸಾರ್ವಜನಿಕರ ಅನುಕೂಲ ಮರೆತು ಪ್ರಭಾವಿಗಳ ಮಾತು ಕೇಳಿ ಸ್ಥಳಾಂತರಿಸಿದ್ದೆ ಆದರೆ ಮುಂದಿನ ದಿನಮಾನಗಳಲ್ಲಿ ಗ್ರಾಮ ಗ್ರಾಮಗಳಲ್ಲಿ ಈ ವಿಷಯವನ್ನು ತಿಳಿಸಿ ಬೃಹತ್ ಮಾಡಲಾಗುವುದು” ಎಂದರು.

“ಗಜೇಂದ್ರಗಡ ಪಟ್ಟಣ ತಾಲ್ಲೂಕು ಕೇಂದ್ರವಾಗಿ ಘೋಷಣೆಯಾಗಿದ್ದು, ಈಗಾಗಲೇ ತಾಲ್ಲೂಕು ಕಚೇರಿಗಳ ಕಟ್ಟಡಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಹೀಗಿರುವಾಗ ತಹಶೀಲ್ದಾ‌ರ್ ಕಚೇರಿಯನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸುವುದರಿಂದ ಹಲವು ತೊಂದರೆಗಳು ಉಂಟಾಗಲಿವೆ. ಕೂಡಲೇ ಕಚೇರಿ ಸ್ಥಳಾಂತರ ಬಿಡಬೇಕು” ಎಂದು ಸಂಘಟನೆ ಕಾರ್ಯಕರ್ತರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕುಕನೂರು | ಮಾನವೀಯ ಮೌಲ್ಯಗಳ ನಾಯಕ ಕೆ ಎಚ್ ಪಾಟೀಲ: ಗೃಹ ಸಚಿವ ಪರಮೇಶ್ವರ್‌

ಈ ಸಂದರ್ಭದಲ್ಲಿ ಶಿವಪ್ಪ ಮುಶಿಗೇರಿ, ಡಿ.ಜಿ. ಕಟ್ಟಿಮನಿ, ಡಿ.ಎಂ. ಸಂದಿಮನಿ, ರವಿ ಮಾದರ, ಯಮನೂರಪ್ಪ ಪುರ್ತಗೇರಿ, ಮಾರುತಿ ಹಾದಿಮನಿ, ಸಣ್ಣಪ್ಪ ಪೂಜಾರ, ಭೀಮಪ್ಪ ಹಿರೇಹಾಳ, ಯಲ್ಲಪ್ಪ ಶಾಂತಗೇರಿ, ರೋಣಪ್ಪ ಚಿಲಝರಿ, ಚನ್ನಪ್ಪ ಪೂಜಾರ, ದುರಗಪ್ಪ ಹಿರೇಮನಿ, ಶಿವು ಭೂಮದ, ಶರಣು ಅರಳಿಗಿಡದ, ಯಮನೂರ ಅಬ್ಬಿಗೇರಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...