ಗದಗ | ಅರ್ಹ ಫಲಾನುಭವಿಗಳಿಗೆ ಕಾಲಮಿತಿಯಲ್ಲಿಯೇ ಸೌಲಭ್ಯ ಒದಗಿಸಿ: ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ

Date:

“ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಹಂಚಿಕೆ ಯೋಜನೆಯಡಿ ಅರ್ಹ ಫಲಾನುಭವಿಗಳ ಆಯ್ಕೆ ಕೈಗೊಂಡು ಕಾಲಮಿತಿಯಲ್ಲಿಯೇ ಅವರಿಗೆ ಸೌಲಭ್ಯ ದೊರಕಿಸಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ತಿಳಿಸಿದರು.

ಗದಗ ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ಬುಧವಾರ ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಯೋಜನೆಯಡಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

- Advertisement -

“ಆಯಾ ಆರ್ಥಿಕ ಸಾಲಿನಲ್ಲಿ ಅನುಷ್ಟಾನಿತ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವತ್ತ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ಬಿಡುಗಡೆಯಾದ ಅನುದಾನ ಲ್ಯಾಪ್ಸ್ ಆಗದಂತೆ ಹಾಗೂ ದುರ್ಬಳಕೆಯಾಗದಂತೆ ನೋಡಿಕೊಳ್ಳಬೇಕು. ಎಸ್‌ಸಿ ಎಸ್‌ಟಿ ಕಾಲೋನಿಯಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಗುಣಮಟ್ಟದ ಕಡೆಗೂ ನಿಗಾವಹಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಎಸ್‌ಸಿಪಿ ಟಿಎಸ್‌ಪಿ ಯೋಜನೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ, ದುರುಪಯೋಗ ಹಾಗೂ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಬಳಕೆ ಆಗದೇ ಇರುವಂತೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳುವುದು ಅವರ ಜವಾಬ್ದಾರಿ ಆಗಿರುತ್ತದೆ. ಇಲ್ಲದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು” ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಹೇಶ ಪೋತದಾರ ಅವರು ಮಾತನಾಡಿ, “ಎಸ್‌ಸಿಟಿ ಟಿಎಸ್‌ಪಿ ಉಪಹಂಚಿಕೆ ಯೋಜನೆಯಡಿ ಜಿಲ್ಲೆಯಲ್ಲಿ ಇಲಾಖೆಗಳ ಪ್ರಗತಿ ಕುರಿತು ಸಭೆಗೆ ವಿವರಿಸಿದರು. ಈ ಸಂದರ್ಭದಲ್ಲಿ 12 ಇಲಾಖೆಗಳು 100% ರಷ್ಟು ಪ್ರಗತಿ ಸಾಧಿಸಿದ್ದು ಅಂತಹ ಇಲಾಖೆಗಳ ಸಾಧನೆಯನ್ನು ಜಿಲ್ಲಾಧಿಕಾರಿಗಳು” ಎಂದು ಪ್ರಶಂಸಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ರೈತರ ಆತ್ಮಹತ್ಯೆ ತಡೆಯಲು ತುರ್ತು ಕ್ರಮ ಕೈಗೊಳ್ಳಿ : ಕೆ.ಬಿ.ವಾಸು

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಪದ್ಮಾವತಿ ಜಿ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...