ಗದಗ | ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ; ಆರೋಪಿಗಳ ಬಂಧನಕ್ಕೆ ಛಲವಾದಿ ಮಹಾಸಭಾ ಆಗ್ರಹ

Date:

ಕಾರಟಗಿ ಪಿಎಸ್‌ಐ ಪರಶುರಾಮ್ ಅವರ ಸಾವಿನ ಹಿಂದಿರುವ ಶಕ್ತಿಗಳನ್ನು ಬಂಧಿಸುವಂತೆ ಆಗ್ರಹಿಸಿ ಛಲವಾದಿ ಮಹಾಸಭಾದಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು.

- Advertisement -

‌ಈ ವೇಳೆ ಛಲವಾದಿ ಮಹಾಸಭಾದ ಅಧ್ಯಕ್ಷ ಆನಂದ್ ಶಿಂಗಾಡಿ ಮಾತನಾಡಿ, “ಪಿಎಸ್‌ಐ ಸೇವೆ ಸಲ್ಲಿಸುತ್ತಿದ್ದ ಪರಶುರಾಮ್‌ ಎಂಬ ಅಧಿಕಾರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತಪಡಿಸಿರುವ ಗೃಹ ಸಚಿವರ ಹೇಳಿಕೆ ಖಂಡನೀಯ. ಯಾದಗಿರಿ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದ ಪಿಎಸ್‌ಐ ಪರಶುರಾಮ ಅವರ ಸಾವಿನ ಹಿಂದಿನ ಶಕ್ತಿಗಳನ್ನು ಕೂಡಲೇ ಬಂಧಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಪಿಎಸ್‌ಐ ಪರಶುರಾಮ ಅವರಿಗೆ ಯಾದಗಿರಿ ಜಿಲ್ಲೆಯ ಶಾಸಕ ಮತ್ತು ಅವರ ಪುತ್ರ ಕಿರುಕುಳ ನೀಡಿ, ಪರಶುರಾಮ್ ಅವರಿಗೆ ಲಂಚದ ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ ಅವರು ಬೇಸರ ವ್ಯಕ್ತಪಡಿಸಿದ್ದರೆಂಬುದು ಅವರ ಕುಟುಂಬದವರ ಆರೋಪದಲ್ಲಿ ನಮೂದಾಗಿದೆ. ಈ ಹಿನ್ನೆಲೆಯಲ್ಲಿ ದಲಿತ ಸಮುದಾಯದ ವ್ಯಕ್ತಿಗಳು ಅಧಿಕಾರ ಹಿಡಿಯುವುದೇ ಸಾಹಸವಾಗಿರುವ ಈ ಕಾಲಘಟ್ಟದಲ್ಲಿ ಅದೇ ಸಮುದಾಯಕ್ಕೆ ಸೇರಿದ ಒಬ್ಬ ಪೋಲಿಸ್ ಅಧಿಕಾರಿಯನ್ನು ರಾಜಕೀಯ ಬಲದಿಂದ ಶಾಸಕರು ಮತ್ತು ಅವರ ಹಿಂಬಾಲಕರು ಕಿರುಕುಳ ನೀಡಿ ಅವರ ಸಾವಿಗೆ ಕಾರಣರಾಗಿದ್ದಾರೆ. ಹಾಗಾಗಿ ಅವರ ಸಾವಿಗೆ ಕಾರಣರಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು” ಎಂದು ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಆನಂದ್ ಶಿಂಗಾಡಿ ಅಸಮಾಧಾನ ವ್ಯಕ್ತಪಡಿಸಿದರು.‌

ದಲಿತಪರ ಹೋರಾಟಗಾರ ಶರೀಫ್ ಬಿಳಿಯಲಿ ಮಾತನಾಡಿ, “ದಲಿತ ಸಮುದಾಯದ ಪೋಲಿಸ್ ಅಧಿಕಾರಿಗೆ ಕಿರುಕುಳ ನೀಡಿದ್ದಲ್ಲದೇ ಅವರ ಸಾವಿಗೂ ಕಾರಣರಾಗಿರುವವರ ಮೇಲೆ ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆ 1989ರ ಅಡಿ ಪ್ರಕರಣ ದಾಖಲಾಗಿದ್ದರೂ ಈವರೆಗೆ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿಲ್ಲ. ಇದು ದಲಿತರಿಗೆ ಮಾಡುವ ಅಪಮಾನವೇ ಸರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರಕ್ಷಣೆ ನೀಡಬೇಕಾದ ಪೋಲಿಸ್ ಅಧಿಕಾರಿಗೇ ಈ ರೀತಿ ಆದರೆ ಇನ್ನೂ ಜನಸಾಮಾನ್ಯರ ಗತಿ ಏನು? ದಲಿತರ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಬದ್ದವಾಗಿದೆಯೆಂದು ಹೇಳಿದ ಸರ್ಕಾರ ಇವತ್ತು ದಲಿತರನ್ನು ದಮನ ಮಾಡಲು ಹೊರಟಿದೆ, ಇದು ನಿಲ್ಲಬೇಕು. ಕೇವಲ ದಲಿತಪರ ಕಾಳಜಿ ಇದ್ದರೆ ಸಾಲದು ಅವರ ಶ್ರೇಯೋಭೀವೃದ್ಧಿಗೆ ಕೆಲಸ ಮಾಡಬೇಕಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಪ್ರತ್ಯೇಕ ಘಟನೆ; ತಾಯಿ ಮೇಲೆ ಅತ್ಯಾಚಾರ, ಮನೆಗೆ ನುಗ್ಗಿ ಮಹಿಳೆಯ ಕೊಲೆ

“ಪಿಎಸ್‌ಐ ಪರಶುರಾಮ ಅವರ ಸಾವಿಗೆ ನ್ಯಾಯ ನೀಡಲೇಬೇಕು. ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು. ಒಂದು ವೇಳೆ ಸರ್ಕಾರ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾದರೆ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ದಲಿತ ಮುಖಂಡ ಬಾಲರಾಜ್ ಅರಬರ್ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ದಲಿತಪರ ಮುಖಂಡರು ಮುತ್ತು ಬಿಳಿಯಲಿ, ಪರಶು ಕಾಳೆ, ಅನಿಲ್ ಕಾಳೆ, ಬಸವರಾಜ್ ಬಿಳಿಯಲಿ, ಮಲ್ಲೇಶ್ ಹೊಸಮನಿ, ಶಿವಾನಂದ ತಮ್ಮಣ್ಣವರ, ಯಲ್ಲಪ್ಪ, ಮುತ್ತು ಚೌಡಣ್ಣವರ, ರಮೇಶ್ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...