ಗದಗ | ಸಾರ್ವಜನಿಕರು ಮೊಬೈಲ್ ಮೂಲಕವೇ ಅಕ್ರಮಗಳ ಬಗ್ಗೆ ದೂರು ಸಲ್ಲಿಸಿ: ಜಿಲ್ಲಾಧಿಕಾರಿ 

Date:

ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶ ಹೊಂದಿರುವ ಚುನಾವಣಾ ಆಯೋಗವು ಚುನಾವಣಾ ಸಮಯದಲ್ಲಿ ನಡೆಯುವ ಅಕ್ರಮಗಳ ಪತ್ತೆಗೆ ಹಾಗೂ ತಡೆಗೆ ಸಿ-ವಿಜಲ್ ಆ್ಯಪ್ ಬಿಡುಗಡೆಮಾಡಿದ್ದು, ಸಾರ್ವಜನಿಕರು ಪ್ರಯೋಜನ ಪಡೆದುಕೊಳ್ಳಬಹುದು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ತಿಳಿಸಿದ್ದಾರೆ.

- Advertisement -

ಚುನಾವಣೆಯ ಸಂದರ್ಭಗಳಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ವ್ಯಕ್ತಿಗೆ ಅಥವಾ ಪಕ್ಷಕ್ಕೆ ಮತ ಹಾಕುವಂತೆ ಆಮಿಷಗಳನ್ನು ಒಡ್ಡಿದರೆ, ಹಣ, ಉಡುಗೊರೆ, ಕೂಪನ್‌ಗಳನ್ನು ವಿತರಣೆ, ಮದ್ಯದ ಆಸೆ ಮತ್ತು ಆಮಿಷ ಒಡ್ಡಿದರೆ ಮತದಾರರು ಸಿ-ವಿಜಿಲ್ ಆ್ಯಪ್ ಮೂಲಕ ದೂರು ನೀಡಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಅನುಮತಿ ಅನುಮತಿ ಇಲ್ಲದಿದ್ದರೂ ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಅಂಟಿಸುವುದು, ಬಂದೂಕು ತೋರಿಸಿ ಬೆದರಿಕೆ ಹಾಕುವುದು, ಆಸ್ತಿ ವಿರೂಪಗೊಳಿಸುವುದು, ಧಾರ್ಮಿಕ ಅಥವಾ ಕೋಮು ಪ್ರಚೋದಿತ ಭಾಷಣ ಮಾಡಿದರೂ ಆ್ಯಪ್ ಮೂಲಕ ದೂರು ನೀಡಬಹುದು.

“ಮತಗಟ್ಟೆಯ 200 ಮೀಟರ್ ಪ್ರದೇಶದಲ್ಲಿ ನಿಷೇಧವಿದ್ದರೂ ಪ್ರಚಾರ ಮಾಡುವುದು, ಮತದಾನದ ದಿನ ವಾಹನಗಳಲ್ಲಿ ಮತದಾರರನ್ನು ಕರೆತಂದು ಪ್ರಚೋದನೆಗೊಳಿಸುವುದು, ಮತ ಹಾಕುವಂತೆ ಬೆದರಿಸುವುದು ಹಾಗೂ ನೀತಿ ಸಂಹಿತೆ ಪ್ರಕರಣಗಳು ಕಂಡುಬಂದರೆ ಸಿ-ವಿಜಿಲ್ ಆ್ಯಪ್ ಮೂಲಕ ದೂರು ಸಲ್ಲಿಸಲು ಅವಕಾಶವಿದೆ” ಎಂದು ಹೇಳಿದರು.

ಸಿ-ವಿಜಲ್ ಮೂಲಕ ಸಲ್ಲಿಕೆಯಾಗುವ ದೂರುಗಳಿಂದ ಘಟನೆ ನಡೆದ ಸ್ಥಳದ ಮಾಹಿತಿ ಲಭ್ಯವಾಗುವುದರಿಂದ ಪ್ರಕರಣ ನಡೆದ ಸ್ಥಳಕ್ಕೆ ಅಧಿಕಾರಿಗಳು ತಲುಪಬಹುದು.

ಸಾರ್ವಜನಿಕರು ಪ್ಲೇ ಸ್ಟೋರ್‌ನಲ್ಲಿ ಸಿ-ವಿಜಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಬಳಸಬಹುದು. ಅಕ್ರಮಗಳ ಕುರಿತು ಛಾಯಾಚಿತ್ರ ಹಾಗೂ ವೀಡಿಯೋಗಳನ್ನು ಅಪ್‌ಲೋಡ್‌ ಮಾಡಬಹುದು. ದೂರು ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿಡಲಾಗುವುದು” ಎಂದರು.

“ಸಿ-ವಿಜಲ್‌ನಲ್ಲಿ ದಾಖಲಾಗುವ ದೂರುಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತ್ಯೇಕ ಸಿಬ್ಬಂದಿಗಳಿದ್ದು, ಮತದಾನ ಮುಕ್ತಾಯವಾಗುವರೆಗೂ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ” ಎಂದರು.

“ದೂರು ದಾಖಲಾದ ಕೂಡಲೇ ಪರಿಶೀಲಿಸಿ ದೂರು ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫ್ಲೈಯಿಂಗ್ ಸ್ಕ್ವಾಡ್ ತಂಡಕ್ಕೆ ಪ್ರಕರಣದ ಸಂಪೂರ್ಣ ವಿವರ ರವಾನಿಸಿ ದೂರಿನ ಕುರಿತು ತುರ್ತು ಕ್ರಮ ವಹಿಸುವಂತೆ ನೋಡಿಕೊಳ್ಳಲಾಗುತ್ತದೆ. ಗರಿಷ್ಠ 100 ನಿಮಿಷಗಳ ಒಳಗೆ ದೂರುಗಳನ್ನು ಇತ್ಯರ್ಥಪಡಿಸಲಾಗುತ್ತದೆ” ಎಂದು ಹೇಳಿದರು.

“ಸಾರ್ವಜನಿಕರು ಸಿ-ವಿಜಿಲ್ ಆ್ಯಪ್ ಮಾತ್ರವಲ್ಲದೆ ಉಚಿತ ಸಹಾಯವಾಣಿ ಸಂಖ್ಯೆ 1950ಗೆ ಕರೆಮಾಡಿ ಚುನಾವಣಾ ಅಕ್ರಮಗಳ ಬಗ್ಗೆ ದೂರು ನೀಡಬಹುದು. ಈ ಮೂಲಕ ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಯಲು ಚುನಾವಣಾ ಆಯೋಗದೊಂದಿಗೆ ಕೈ ಜೋಡಿಸಬಹುದಾಗಿದೆ” ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವೋಟರ್‌ ಹೆಲ್ಪ್‌ಲೈನ್‌ ಆ್ಯಪ್ 

ವೋಟರ್‌ ಹೆಲ್ಪ್‌ಲೈನ್‌ ಆ್ಯಪ್‍ನಿಂದ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಹುಡುಕಬಹುದು, ಮತದಾರ ಪಟ್ಟಿಯಲ್ಲಿ ಹೆಸರಿಲ್ಲದಿದ್ದಲ್ಲಿ ನಮೂನೆ-6ನ್ನು ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದು. ಹೆಸರು, ವಿಳಾಸ, ಭಾವಚಿತ್ರ, ಲಿಂಗ ಏನಾದರೂ ತಿದ್ದುಪಡಿ ಮಾಡಬೇಕಾದಲ್ಲಿ ನಮೂನೆ-8ನ್ನು ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು. ನಿಮ್ಮ ಡಿಜಿಟಲ್(ಭಾವಚಿತ್ರವುಳ್ಳ) ವೋಟರ್ ಸ್ಲೀಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಚುನಾವಣೆ ಸಂಬಂಧಿತ ಅಪ್‌ಡೇಟೆಡ್ ಮಾಹಿತಿ ಪಡೆಯಬಹುದಾಗಿದೆ” ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕಂಟ್ರೋಲ್ ರೂಂ ಹಾಗೂ ಸಹಾಯವಾಣಿ ಸ್ಥಾಪನೆ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಜಿಲ್ಲೆಯಲ್ಲಿ ಅಹವಾಲು ಅಥವಾ ದೂರುಗಳನ್ನು ಸಲ್ಲಿಸಲು ಕಂಟ್ರೋಲ್ ರೂಂಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಕೆಳಕಂಡ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

ಜಿಲ್ಲಾಧಿಕಾರಿ ಕಾರ್ಯಾಲಯದ ಕಂಟ್ರೋಲ್ ರೂಂ ದೂರವಾಣಿ ಸಂಖೈ (ಡಿಇಒ ಆಫೀಸ್) : 08372-239177, 08372-1950; ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 08372-238300, 9480804400 ; ಜಿಲ್ಲಾ ಅಬಕಾರಿ ಇಲಾಖೆಯ ಕಂಟ್ರೋಲ್ ರೂಂ ಸಂಖ್ಯೆ 08372-221129, 18004252329; ಜಿಲ್ಲಾ ವಾಣಿಜ್ಯ ತೆರಿಗೆ ಕಂಟ್ರೋಲ್ ರೂಂ ಸಂಖ್ಯೆ 9008937878, 08372-238307 . ಈ ಮೇಲ್ಕಂಡ ಕಂಟ್ರೋಲ್ ರೂಂ ದೂರವಾಣಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ‌ ಹಾಗೂ ಜಿಲ್ಲಾ ದಂಡಾಧಿಕಾರಿಯಾದ ವೈಶಾಲಿ ಎಂ ಎಲ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...