ಗದಗ | ಸೆ.9 ರಂದು ರಾಷ್ಟ್ರೀಯ ಲೋಕ ಅದಾಲತ್; ರಾಜಿ-ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ

Date:

ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಪರಸ್ಪರ ರಾಜಿ ಸಂಧಾನ ಮಾಡಿಕೊಳ್ಳುವ ಮೂಲಕ ಸಾರ್ವಜನಿಕರು, ಪಕ್ಷಗಾರರು ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ಗದಗ ಜಿಲ್ಲೆಯಲ್ಲಿ ಸೆ.9ರಂದು ಅದಾಲತ್ ನಡೆಯಲಿದ್ದು, ಜಿಲ್ಲೆಯ ದೂರುದಾರರು-ಪ್ರತಿವಾದಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗದಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ತಿಳಿಸಿದ್ದಾರೆ.

ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಜಿಲ್ಲೆಯಲ್ಲಿ ಸೆ.9 ರಂದು ಜರುಗಲಿರುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಆ ಮೂಲಕ ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಬಹುದು” ಎಂದು ತಿಳಿಸಿದ್ದಾರೆ.

“ರಾಜಿ ಸಂಧಾನ ಪ್ರಕರಣ ಇತ್ಯರ್ಥವಾದರೆ ನ್ಯಾಯಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುತ್ತದೆ. ಜೊತೆಗೆ, ಉಭಯ ಪಕ್ಷಗಾರರಿಗೆ ಮೇಲ್ಮನಿ ಸಲ್ಲಿಸಲು ಅವಕಾಶವಿರುವುದಿಲ್ಲ. ಇದರಿಂದಾಗಿ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂಧವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ” ಎಂದು ವಿವರಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಜಿಲ್ಲೆಯಲ್ಲಿ ರಾಜಿ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು 16 ಬೆಂಚಗಳನ್ನು ರಚಿಸಲಾಗಿದೆ. ಗದಗ ಜಿಲ್ಲೆಯಲ್ಲಿ ಒಟ್ಟು 19,428 ವಿವಿಧ ಚಾಲ್ತಿ ಪ್ರಕರಣಗಳಿದ್ದು, ಅದರಲ್ಲಿ ಈಗಾಗಲೇ ರಾಜಿ ಆಗಬಹುದಾದ 2,965 ಪ್ರಕರಣಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಸಿವಿಲ್ ದಾವೆಗಳಾದ ಜಮೀನುಗಳಿಗೆ, ಮನೆ ಹಾಗೂ ನಿವೇಶನಕ್ಕೆ ವ್ಯಾಜ್ಯಗಳು, ಭೂಸ್ವಾಧೀನ, ಬ್ಯಾಂಕ್‌ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕರ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್ ಬೌನ್ಸ್‌ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ಕೆಲವು ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ಗುರುತಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಪ್ರಕರಣಗಳಿಗೆ ಸಂಬಂಧಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಸೆ.9 ರಂದು ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಪಾಲ್ಗೊಂಡು, ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಬಹುದು” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಕೋಮುವಾದದ ಮಾತುಗಳನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ ಸಿ ಸುಧಾಕರ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...

ಯಾದಗಿರಿ | ಅಂಗಡಿ, ಸಂತೆ ಪ್ರದೇಶದಲ್ಲಿ ಎಸ್‌ಯುಸಿಐ ಚುನಾವಣಾ ಪ್ರಚಾರ

ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ...