ಗದಗ | ಆರ್.ಸಿ.ಬಿ ಸಂಭ್ರಮಾಚರಣೆ, ಕಾಲ್ತುಳಿತ, 11 ಜನರ ಸಾವು ಸರ್ಕಾರದ ನಿರ್ಲಕ್ಷ್ಯ ಎಸ್ ಎಫ್ ಐ ಖಂಡನೆ

Date:

“ಆರ್.ಸಿ.ಬಿ. ತಂಡದ ಗೆಲುವಿನ ಸಂಭ್ರಮಾಚರಣೆಗೆ ಸಾವಿರಾರು ಜನರು ಸೇರುವುದನ್ನು ರಾಜ್ಯ ಸರ್ಕಾರ ಅಂದಾಜಿಸಿ ಸರಿಯಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಇದರ ವೈಫಲ್ಯದಿಂದ  ಕಾಲ್ತುಳಿತ ಸಂಭವಿಸಿ 11 ಜನರ ಸಾವು ಮತ್ತು ಹಲವಾರು ಮಂದಿ‌ ಗಂಭೀರವಾದ ಸ್ಥಿತಿಗೆ ದೂಡುವಂತೆ ಮಾಡಿದೆ” ಎಂದು ಎಸ್ ಎಫ್ ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ್ ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು “ಜೂನ್ 3ರ ರಾತ್ರಿ ನಡೆದ ಐಪಿಎಲ್ ಪೈನಲ್ ಪಂದ್ಯದಲ್ಲಿ ಆರ್.ಸಿ.ಬಿ. ತಂಡವು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧ  ಗೆಲುವು ಪಡೆದು  ಟ್ರೋಫಿ ತನ್ನದಾಗಿಸಿಕೊಂಡಿತ್ತು. ಈ ಗೆಲುವಿನ ಸಂಭ್ರಮಾಚರಣೆಯನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್.ಸಿ.ಬಿ. ಫ್ರಾಂಚೈಸಿ ಮತ್ತು ವಿಧಾನ ಸೌಧ ಮುಂಭಾಗ ರಾಜ್ಯ ಸರ್ಕಾರ  ಆಯೋಜಿಸಿದ್ದವು. ಈ ಸಂಭ್ರಮಾಚರಣೆಗೆ ಕನಿಷ್ಡ ವ್ಯವಸ್ಥೆಗಳನ್ನು ಮಾಡಿಕೊಳ್ಳದೆ, ಎರಡು ಕಡೆ ಕಾರ್ಯಕ್ರಮಕ್ಕೆ ಅವಕಾಶ ‌ನೀಡಿದ್ದು ಸರಿಯಾದ ಕ್ರಮವಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಎರಡು ಕಡೆ ಕಾರ್ಯಕ್ರಮವನ್ನು ಆಯೋಜಿಸಿದ ಮೇಲೆ ಅದಕ್ಕೆ ತಕ್ಕಂತಹ ಸಿದ್ಧತೆಯನ್ನು ರಾಜ್ಯ  ಸರ್ಕಾರ ಮಾಡಬೇಕಿತ್ತು. ಆರ್.ಸಿ.ಬಿ. ಫ್ರಾಂಚೈಸಿ ಮಾಲೀಕರು ಸಹ ಸೂಕ್ತ ಭದ್ರತೆ ಪಡೆಯಬೇಕಿತ್ತು. ಇಡೀ  ಪೋಲೀಸ್ ಇಲಾಖೆಯ ಭದ್ರತೆ ವಿಧಾನ ಸೌಧ ಕಾರ್ಯಕ್ರಮಕ್ಕೆ ನೀಡಿ,  ಚಿನ್ನಸ್ವಾಮಿ ಸ್ಟೇಡಿಯಂ ಕಾರ್ಯಕ್ರಮದ ಭದ್ರತಾ ಕೆಲಸಗಳಿಗೆ ನಿರ್ಲಕ್ಷ್ಯತೆ ವಹಿಸಿದಂತೆ ಕಾಣುತ್ತದೆ.‌ ಅಲ್ಲದೆ ಚಿನ್ನಸ್ವಾಮಿ ಸ್ಟೇಡಿಯಂನ ಗೇಟ್ ನ್ನು ಒಮ್ಮೆಲೆ ತೆರೆದಿದ್ದು ನೂಕುನುಗ್ಗಲು ಹೆಚ್ಚಾಗಿ  ಈ ದುರಂತಕ್ಕೆ ಎಡೆಮಾಡಿಕೊಟ್ಟಂತಿದೆ.  ಇದು ರಾಜ್ಯ ಗೃಹ ಇಲಾಖೆಯ ವೈಫಲ್ಯವಾಗಿದೆ” ಎಂದು ಕಿಡಿಕಾರಿದರು.

“ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್  ಗೆದ್ದಾಗ, ಕರ್ನಾಟಕ ತಂಡ ರಣಜಿ ಟ್ರೋಫಿ ಗೆದ್ದಾಗ ನೀಡದಿರುವ ಮಹತ್ವ ಹಾಗೂ ಕ್ರೀಡೆಗಳಿಗೆ ಪ್ರೋತ್ಸಾಹ, ಅನುದಾನ ನೀಡಿದ ರಾಜ್ಯ ಸರ್ಕಾರ ಆರ್.ಸಿ.ಬಿ. ಫ್ರಾಂಚೈಸಿ ತಂಡ ಗೆಲುವಿಗೆ ಮಹತ್ವ ನೀಡಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ಆಯೋಜಿಸಿದ್ದು ದುರದೃಷ್ಟಕರವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ; 5 ವರ್ಷದ ಬಾಲಕ ಸೇರಿ ಇಬ್ಬರ ಸಾವು

ಘಟನೆಯಲ್ಲಿನ ಎಲ್ಲಾ ಗಾಯಾಳುಗಳ ಚಿಕಿತ್ಸೆ ವೆಚ್ಚ, ಆರೈಕೆ ಅವಧಿಯ ವೆಚ್ಚವನ್ನು ಸರಕಾರವೇ ನೋಡಿಕೊಳ್ಳಬೇಕು. ಮೃತ ವ್ಯಕ್ತಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ರಾಜ್ಯ ಸರ್ಕಾರ ಹಾಗೂ ಆರ್.ಸಿ.ಬಿ. ಫ್ರಾಂಚೈಸಿ ಮಾಲಿಕರು  ಘೋಷಿಸಬೇಕು” ಎಂದು ಚಂದ್ರು ರಾಠೋಡ ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...