ಗದಗ | ಸೆ.15 ರಿಂದ ಲಿಂಗತ್ವ ಅಲ್ಪಸಂಖ್ಯಾತರ & ದೇವದಾಸಿ ಮಹಿಳೆಯರ ಮರು ಸಮೀಕ್ಷೆ

Date:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್‌ ಜೆಂಡರ್) ಮತ್ತು ದೇವದಾಸಿ ಮಹಿಳೆಯರ ಮರು ಸಮೀಕ್ಷೆ ಇದೇ ಸೆಪ್ಟೆಂಬರ್ 15 ರಿಂದ 45 ದಿನಗಳ ಕಾಲ ರಾಜ್ಯಾದ್ಯಂತ ಪ್ರಾರಂಭವಾಗುತ್ತಿದೆ. ಗದಗ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಪೋಸ್ಟರ್ ಬಿಡುಗಡೆ ಮಾಡುವುದರ ಮೂಲಕ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿದರು.

- Advertisement -

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿದೇಶಕರ ನಿರ್ದೇಶನದಂತೆ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್‌ ಜೆಂಡರ್) ಮತ್ತು ದೇವದಾಸಿಯರ ಮರು ಸಮೀಕ್ಷೆ ನಡೆಸಲಾಗುತ್ತಿದೆ. ದೇವದಾಸಿ ಮಹಿಳೆಯರ ಸಮೀಕ್ಷೆಯನ್ನು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯನ್ನು ತಾಲೂಕು ಆಸ್ಪತ್ರೆಗಳಲ್ಲಿ ನಡೆಸಲಾಗುತ್ತಿದೆ. ದೇವದಾಸಿ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ನಿಗದಿಪಡಿಸಿದ ಅವಧಿಯೊಳಗಾಗಿ ಮೇಲ್ಕಂಡ ನಿಗದಿಪಡಿಸಿದ ಸ್ಥಳಗಳಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿ: ಗದಗ | ನೂರಾರು ರೈತರು ಭಿಕ್ಷಾಟನೆ ಮೂಲಕ ಪ್ರತಿಭಟನೆ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು ಹಾಗೂ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವನ್ನು ಸಂಪರ್ಕಿಸಬಹುದಾಗಿದೆ.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅನುಪಮಾ ಅಂಗಡಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕಿ ದಾಕ್ಷಾಯಣಿ ಪಾಟೀಲ, ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ರಫೀಕಾ ಹಳ್ಳೂರ ಮತ್ತು ಇಲಾಖಾ ಸಿಬ್ಬಂದಿಗಳು ಹಾಗೂ ಸಮುದಾಯ ಆಧಾರಿತ ಸಂಸ್ಥೆಯವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...