ಗದಗ | ಬದಲಾದ ಸಂಗ್ರಹಿಸಿಟ್ಟ ಕೆಂಪು ಮೆಣಸಿನಕಾಯಿ ಬಣ್ಣ: ಬೆಲೆ ಕುಸಿತದ ಆತಂಕದಲ್ಲಿ ರೈತರು

Date:

ಉತ್ತರ ಕರ್ನಾಟಕದ  ರೈತರು ಒಳ್ಳೆಯ ಬೆಲೆ ಬರುತ್ತದೆ ಎಂದು ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಮೆಣಸಿನಕಾಯಿ ಈಗ ಕಂದು ಬಣ್ಣಕ್ಕೆ ತಿರುಗುತ್ತಿವೆ. ಇದರಿಂದ ರೈತರು ಮನೆಯಲ್ಲೂ ಇಟ್ಟುಕೊಳ್ಳಲಾಗದೆ, ಮಾರಾಟ ಮಾಡಲೂ ಆಗದೆ ಪರಿತಪಿಸುವಂತಾಗಿದೆ.

ಕಳೆದ ಬಾರಿ ಮೆಣಸಿನಕಾಯಿ ಉತ್ತಮ ಬೆಳೆ ಬಂದಿದ್ದರೂ ಕೂಡ, ಬೆಲೆ ಕುಸಿತದಿಂದಾಗಿ ಹಲವು ರೈತರು ಉತ್ತಮ ಬೆಲೆ ಬಂದಾಗ ಮಾರಾಟ ಮಾಡುವ ಉದ್ದೇಶದಿಂದ ಮನೆಗಳಲ್ಲಿ, ಸ್ಟೋರೇಜ್‌ಗಳಲ್ಲಿ ಸಂಗ್ರಹಿಸಿಟ್ಟಿದ್ದರು. ಆದರೆ ಈಗಲೂ ಬೆಲೆ ಕುಸಿಯುತ್ತಿರುವುದರಿಂದ ರೈತರ ಮೇಲೆ ಬರೆ ಎಳೆದಂತಾಗಿದೆ.

ಗದಗ ಜಿಲ್ಲೆಯಾದ್ಯಂತ ಅಧಿಕ ಪ್ರಮಾಣದಲ್ಲಿ ಮೆಣಸಿನಕಾಯಿ ಬಿತ್ತನೆ ಮಾಡಲಾಗಿತ್ತು. ಉತ್ತಮ ಇಳುವರಿಯ ಬಂದಿದ್ದ ಮೆಣಸಿನಕಾಯಿ ಬೆಳೆಗೆ ರೈತರಿಗೆ ಜನವರಿಯಲ್ಲಿ ಗದಗ, ಬ್ಯಾಡಗಿ ಹುಬ್ಬಳ್ಳಿ ಮಾರುಕಟ್ಟೆಗಳಲ್ಲಿ ರೂ ಐವತ್ತು ಸಾವಿರದಿಂದ ಅರವತ್ತು ಸಾವಿರದವರೆಗೆ ಬೆಲೆ ಇತ್ತು. ನಂತರ ಫೆಬ್ರವರಿ ತಿಂಗಳಿಂದ ಇಲ್ಲಿಯವರೆಗೂ ಮೆಣಸಿನಕಾಯಿ ಬೆಲೆ ಕುಸಿತ ಕುಸಿತ ಕಂಡಿದೆ. ಸೂಕ್ತ ಬೆಲೆ ಸಿಗದ ಕಾರಣ ಮಾರಾಟಕ್ಕೆ ತೆಗೆದುಕೊಂಡು ಹೋಗಿದ್ದ ಸುಮಾರು ಹತ್ತರಿಂದ ಇಪ್ಪತ್ತು ಕ್ವಿಂಟಾಲ್ ಮೆಣಸಿನಕಾಯಿಯನ್ನು ಮರಳಿ ಮನೆಯಲ್ಲಿ ಸಂಗ್ರಹಣೆ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರೈತರು ಸಂಗ್ರಹಿಸಿಟ್ಟಿದ್ದ ಕೆಂಪು ಮೆಣಸಿನಕಾಯಿ ಕಂದು ಬಣ್ಣಕ್ಕೆ ತಿರುಗಿದೆ. ಬೆಲೆ ಕುಸಿತದ ನಡುವೆ ಈ ರೀತಿ ಬಣ್ಣ ಬದಲಾವಣೆಗೊಂಡಿರುವುದರಿಂದ ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಉತ್ತಮ ಬೆಲೆ ಬರುವ ನಿರೀಕ್ಷೆಯಲ್ಲಿ ರೈತರು ಸಂಗ್ರಹಣೆ ಮಾಡಿಟ್ಟಿದ್ದ ಮೆಣಸಿನಕಾಯಿ ಉಪಯೋಗಕ್ಕೆ ಬಾರದ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಾದ್ಯಂತ ಮೆಣಸಿನಕಾಯಿ ಬೆಳೆದ ರೈತರ ಸ್ಥಿತಿ ಚಿಂತಾಜನಕವಾಗಿದೆ.

ಈ ಕುರಿತು ರೋಣ ತಾಲೂಕಿನ ಅರಹುಣಶಿ ಗ್ರಾಮದ ರೈತ ಮುತ್ತನಗೌಡ ಚೌಡರೆಡ್ಡಿ ಮಾತನಾಡಿ, “ಒಳ್ಳೆ ಬೆಲೆ ಬರುತ್ತದೆ ಎಂದು ಮನೆಯಲ್ಲಿ ಮೆಣಸಿನಕಾಯಿ ಸಂಗ್ರಹಣೆ ಮಾಡಿದ್ದೆ. ಈಗ ಬೆಲೆ ಏಳು ಎಂಟು ಸಾವಿರ ಕಡಿಮೆ ಆಗಿದ್ದರಿಂದ, ಏನ್ ಮಾಡಬೇಕು ಅಂತ ತಿಳಿಯುತ್ತಿಲ್ಲ” ಎಂದು ನೋವು ತೋಡಿಕೊಂಡಿದ್ದಾರೆ.

ಈ ಕುರಿತು ರೋಣ ತಾಲೂಕಿನ ಕೌಜಗೇರಿ ಗ್ರಾಮದ, ಕೃಷಿಕ ಸಮಾಜ ಜಿಲ್ಲಾ ಅಧ್ಯಕ್ಷ ಬಸವರಾಜ್ ಸಜ್ಜನ ಮಾತನಾಡಿ, “ಜಿಲ್ಲೆಯ ಬಹುತೇಕ ಪ್ರತಿ ರೈತರ ಮನೆಗಳಲ್ಲಿ ಉತ್ತಮ ಬೆಲೆ ಬರುತ್ತೆ ಅಂತ ಕ್ವಿಂಟಾಲ್‌ಗಟ್ಟಲೆ ತೂಕದಷ್ಟು ಮೆಣಸಿನಕಾಯಿಯನ್ನು ಸಂಗ್ರಹಿಸಿಟ್ಟಿದ್ದಾರೆ. ಆದರೆ ಬೆಲೆಯೇ ಇಲ್ಲ. ಈ ಕುರಿತು ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದೇವೆ. ರೈತರ ಮೆಣಸಿನಕಾಯಿಗೆ ಸರಕಾರ ಉತ್ತಮ ಬೆಲೆ ನಿಗದಿ ಮಾಡಿ ಖರೀದಿ ಮಾಡಬೇಕು ಎಂಬುದು ನಮ್ಮ ಆಗ್ರಹ” ಎಂದು ಹೇಳಿದರು.

ಶರಣಪ್ಪ ಎಚ್ ಸಂಗನಾಳ

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ: ರೈತ ಮುಖಂಡ ಚಾಮರಸ ಮಾಲೀ ಪಾಟೀಲ್

"ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ, ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಹಗರಣಗಳ...

ಚಿಕ್ಕನಾಯಕನಹಳ್ಳಿ | ವೆಲ್ಡಿಂಗ್ ಮಾಲೀಕರ-ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ

ಚಿಕ್ಕನಾಯಕನಹಳ್ಳಿ ಪಟ್ಟಣದ ಮತಿಘಟ್ಟ ಗೇಟ್ ಬಳಿಯಿರುವ ವೀರಭದ್ರೇಶ್ವರ ಇಂಜಿನಿಯರಿಂಗ್ ವರ್ಕ್ಸ್ ಆವರಣದಲ್ಲಿ...

ಶಿವಮೊಗ್ಗ | ವ್ಯಾಪಕ ಮಳೆ ಹಿನ್ನೆಲೆ: ಜು.16ರಂದು ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ...

ಕಲಬುರಗಿ | ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು; ಕುಟುಂಬಸ್ಥರಿಂದ ಪ್ರತಿಭಟನೆ

ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಮೃತಪಟ್ಟಿದ್ದು, ವೈದ್ಯರು ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆಂದು...