ಗದಗ | 69 ಲಕ್ಷ ಮತದಾರರ ಕಡಿತ, SIR ಅಪಾಯಕಾರಿ ಎಚ್ಚರಿಕೆ!: ಮುತ್ತು ಬಿಳಿಯಲಿ

Date:

“ದೇಶಕ್ಕೆ SIR ಅಪಾಯಕಾರಿ ಎಂದು ಸಾಬೀತು ಪಡಿಸುತ್ತಲೇ ಬರುತ್ತಿದೆ. ಇತ್ತ ಗುಜರಾತ್ ಹಾಗೂ ಲಕ್ಷದ್ವೀಪ ಮತ್ತು ಪಾಂಡಿಚೇರಿಯಲ್ಲಿ SIR ಬಳಿಕ 69 ಲಕ್ಷ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಹೀಗೆ ತೆಗೆದು ಹಾಕಲಾದ ಮತದಾರರು ಯಾರು…? ಯಾವ ಧರ್ಮದವರು ಎಂಬುದು ಗೊತ್ತಾಗಿಲ್ಲ. ಅವೆಲ್ಲವೂ ದೊಡ್ಡ ಪ್ರಮಾಣದ ಅಲ್ಪಸಂಖ್ಯಾತರ ಮತದಾರರೇ ಆಗಿರುತ್ತಾರೆ” ಎಂದು ದಲಿತ ಹೋರಾಟಗಾರ ಮುತ್ತು ಬಿಳಿಯಲಿ ಆರೋಪಿಸಿದರು.

- Advertisement -

ಗದಗ ಪಟ್ಟಣದಲ್ಲಿ ಮಾತನಾಡಿದ ಅವರು, “ಇತ್ತ ಪಶ್ಚಿಮ ಬಂಗಾಳದದಲ್ಲಿ ಏನಾದರೂ ಮಾಡಿ SIR ಜಾರಿಗೆ ಕುರಿತು ಕೇಂದ್ರ ಸರ್ಕಾರದ ಅಣತಿಯಂತೆ ನಡೆದುಕೊಳ್ಳುತ್ತಿರುವ ಕೇಂದ್ರ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸ್ವತ ಮುಖ್ಯಮಂತ್ರಿಯಾದ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜ್ಯದ ಅಹಿಂದ ಮತದಾರರನ್ನು ರಕ್ಷಿಸಿಕೊಳ್ಳಲು ಸುಪ್ರೀಂ ಕೋರ್ಟ್ ನಲ್ಲಿ ವಾದ ಮಾಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

“ಶುಕ್ರವಾರ ಸುಪ್ರೀಂಕೋರ್ಟ್ ಪಶ್ಚಿಮ ಬಂಗಾಳದಲ್ಲಿ SIR ಜಾರಿಗಾಗಿ ಚುನಾವಣೆ ಆಯೋಗಕ್ಕೆ ನೆರವಾಗಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗೂ ಹಾಲಿ ನ್ಯಾಯಾಧೀಶರನ್ನು ನಿಯೋಜಿಸುವಂತೆ ಅಪರೂಪದ ತೀರ್ಪು ನೀಡಿದೆ” ಎಂದು ಹೇಳಿದರು.

“ಇತ್ತ ನಮ್ಮ ಕರ್ನಾಟಕ ರಾಜ್ಯದಲ್ಲಿ SIR ಕುರಿತು ಮೃದು ಧೋರಣೆ ತೋರಿದ್ದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕಳೆದ ಸಚಿವ ಸಂಪುಟದಲ್ಲಿ SIR ಕುರಿತು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅಧ್ಯಯನ ನಡೆಸಿ ವರದಿ ನೀಡುವಂತೆ ಕಾನೂನು ಇಲಾಖೆಗೆ ಸೂಚಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

“ಒಟ್ಟಾರೆ ದೇಶದ ವಿವಿಧ ರಾಜ್ಯಗಳಲ್ಲಿ ನಡೆದ SIR ಪ್ರಕ್ರಿಯೆ ನೋಡಿಕೊಂಡು ನಮ್ಮ ರಾಜ್ಯ ಸರ್ಕಾರ ಅಸಲಿ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕದ ಹಾಗೆ ನೋಡಿಕೊಳ್ಳಬೇಕು” ಎಂದು ಸರಕಾರಕ್ಕೆ ಮನವಿ ಮಾಡಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ‘ಬೆಂಕಿ ಹಚ್ಚುತ್ತೇನೆ’ ಹೇಳಿಕೆ ಶಾಸಕರ ಘನತೆಗೆ ತಕ್ಕುದಲ್ಲ: ಮಂಜುನಾಥ ಮೇತ್ರಿ

ಅಕ್ರಮ ಮರಳು ಸಾಗಾಟ ಹಾಗೂ ಓವರ್‌ಲೋಡ್ ಟಿಪ್ಪರ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುವುದು...

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...