ಗದಗ | ಸಂಶೋಧನೆಯ ಕೌಶಲ್ಯ ಉದ್ಯೋಗಗಳನ್ನು ಸೃಜಿಸಬಲ್ಲವೂ: ಡಾ. ಪಿ ಎಸ್ ಶಶಿಧರ

Date:

Advertisements

“ಸಂಶೋಧನಾ ಕೌಶಲ್ಯಗಳು ಪ್ರಸ್ತುತ ದಿನಮಾನಗಳಲ್ಲಿ ಉದ್ಯೋಗವನ್ನು  ಸೃಜಿಸಬಲ್ಲವು”ಎಂದು ಸಂಪನ್ಮೂಲ ವ್ಯಕ್ತಿಯಾಗಿ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ದೇವರಾಯ ವಿಶ್ವ ವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರು ಡಾ.ಪಿ.ಎಸ್. ಶಶಿಧರ್ ಅಭಿಪ್ರಾಯ ವ್ಯಕ್ತಪಡಿಸಿದರು. 

ಗದಗ ಪಟ್ಟಣದ ಕೆ.ಎಲ್.ಇ. ಸಂಸ್ಥೆಯ ಜೆ.ಟಿ. ಮಹಾವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಮತ್ತು ವಾಣಿಜ್ಯ ವಿಭಾಗ ಹಾಗೂ ಆಂತರಿಕ ಭರವಸೆ ಗುಣಮಟ್ಟ ಕೋಶ ಸಹಯೋಗದಲ್ಲಿ  ‘ಸಂಶೋಧನಾ ವಿಧಾನಗಳು’ ವಿಷಯದ ಕುರಿತು ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

“ಪ್ರಸ್ತುತ ದಿನಮಾನಗಳಲ್ಲಿ ಸಂಶೋಧನೆ ಕೌಶಲ್ಯ ಅತ್ಯಾವಶ್ಯಕವಾಗಿದ್ದು, ದತ್ತಾಂಶ ಸಂಗ್ರಹಣೆ, ವಿಶ್ಲೇಷಣೆ ಕುರಿತು” ಉಪನ್ಯಾಸ ನೀಡಿದರು.

ಮತ್ತೋರ್ವ ಸಂಪನ್ಮೂಲ ವ್ಯಕ್ತಿ ಕರ್ನಾಟಕ ವಿಶ್ವವಿದ್ಯಾಲಯ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಅನಿತಾ ಹಾಲಮಠ ಅವರು ಮಾತನಾಡಿ, ಸಂಶೋಧನೆಯ ಮೂಲಭೂತ ತತ್ವಗಳಾದ ಸಂಶೋಧನೆ, ಸಾಹಿತ್ಯ ಅವಲೋಕನ, ಸ್ಯಾಂಪಿಂಗ್ ಮಾದರಿ, ವಿಷಯದ ಅಧ್ಯಯನ, ಸಂಶೋಧನ ಹೇಳಿಕೆ ಹೀಗೆ ವಿವಿಧ ಹಲವು ವಿಚಾರಗಳ ಮೇಲೆ ಬೆಳಕು ಚೆಲ್ಲಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರು ಪ್ರೊ.ಪಿ.ಜಿ ಪಾಟೀಲ ಅವರು ಮಾತನಾಡಿ, “ಇಂದಿನ ಯುವ ಸಮೂಹ ಸಂಶೋಧನೆಯ ಕಡೆ ಒಲವು ಬೆಳೆಸಿಕೊಳ್ಳಬೇಕು, ಆ ನಿಮಿತ್ಯ ವಿದ್ಯಾರ್ಥಿಗಳಲ್ಲಿ ಸಂಶೋಧನ ವಿಷಯದ ಮೇಲೆ ಆಸಕ್ತಿ ಮೂಡಿಸಲು ಇಂಥ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಉಪಯೋಗ ಪಡೆದುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥರು ಡಾ. ನಾಗರಾಜ ಓಬಯ್ಯ ಪ್ರಾಸ್ತವಿಕವಾಗಿ ಮಾತನಾಡಿ, ಸರ್ವರನ್ನು ಸ್ವಾಗತಿಸಿದರು. ವಾಣಿಜ್ಯ ವಿಭಾಗ ಮುಖ್ಯಸ್ಥರು ಪ್ರೊ.ಜಗನ್ನಾಥ್ ಆರ್  ಸಂಪನ್ಮೂಲ ವ್ಯಕ್ತಿಗಳ ಪರಿಚಯ ಮಾಡಿಕೊಟ್ಟರು. ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಶ್ರೀ.ಎ.ಸ್.ಐ.ಕನಕೆ ಸರ್ವರಿಗೂ ವಂದಿಸಿದರು. ವಿದ್ಯಾರ್ಥಿಗಳಾದ ಕು.ಭೂಮಿಕಾ ಹಾಗೂ ಕು.ಮೇಘ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ. ಮಂಗಳ ಬಡಿಗೇರ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ  ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಹಾಗೂ ಭೋದಕ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು ನಾರಾಯಣ ಕರಾಲ್ವಾಡ, ಎಸ್.ಎಂ.ಜಂತಲಿ, ಬಸಮ್ಮ ಕರಭಿಷ್ಟಿ, ಭಾಗ್ಯಶ್ರೀ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರು ಪ್ರೊ. ವಿಶ್ವನಾಥ. ಜಿ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರು ಡಾ. ರಘು ಎಸ್ ಹಾಗೂ  ಆಂಗ್ಲ ವಿಭಾಗದ ಮುಖ್ಯಸ್ಥರು ಪ್ರೊ. ಗಿರಿಧರ್ ಕೆ ಆರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X