ಗದಗ | ವ್ಯಾಪಾರ ಮಳಿಗೆಗಳಿಂದ ₹20 ರಿಂದ ₹25 ಲಕ್ಷ ಬಾಕಿ; ನರೇಗಲ್ ಪ. ಪಂ. ಆದಾಯಕ್ಕೆ ಹೊಡೆತ

Date:

ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪಟ್ಟಣ ಪಂಚಾಯತ್ ಮಳಿಗೆಗಳ ಟೆಂಡರ್‌ ಸಮಸ್ಯೆ ಹೆಚ್ಚಿನ ಸಮಯ ಪಡೆದುಕೊಂಡಿದ್ದು, ಲಕ್ಷಾಂತರ ಬಾಕಿ ಉಳಿದಿದೆ. ಇದರಿಂದ ಪಟ್ಟಣ ಪಂಚಾಯತ್ ಆದಾಯಕ್ಕೆ ಹೊಡೆತ ಬಿದ್ದಿರುವ ಬಗ್ಗೆ ನರೇಗಲ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

- Advertisement -

ಗದಗ ಜಿಲ್ಲೆಯ ರೋಣ ತಾಲೂಕಿನ ನರೇಗಲ್ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯು ಅಧ್ಯಕ್ಷರಾದ ಫಕೀರಪ್ಪ ಮಳ್ಳಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಸಭೆಯಲ್ಲಿ ರೋಣ ಶಾಸಕ ಜಿ ಎಸ್ ಪಾಟೀಲ ಮಾತನಾಡಿ, “ನರೇಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಳಿಗೆಗಳಿಂದ ಬಾಡಿಗೆ ಅಂದಾಜು ₹20 ರಿಂದ ₹25 ಲಕ್ಷದವರೆಗೆ ಬಾಕಿ ಉಳಿದಿದೆ. ನಿಧನರಾದ ಮಾಲೀಕರ ಮಳಿಗೆಗಳನ್ನು ವಾಪಸ್‌ ಪಡೆಯಬೇಕು” ಎಂದು ಸೂಚಿಸಿದರು.

ಮಳಿಗೆಗಳ  ಬಾಡಿಗೆ ಬಾಕಿ ಕಟ್ಟದಿರುವ ಮಾಲೀಕರಿಂದ ಆದಷ್ಟು ಬೇಗ ಬಾಕಿ ವಸೂಲಿ ಮಾಡಿಕೊಂಡು ಟೆಂಡರ್‌ ಪ್ರಕ್ರಿಯೆಗೆ ಮುಂದಾಗಬೇಕು. ಅನುಕೂಲತೆ ಒದಗಿಸಿದ ನಂತರವೂ ಕಟ್ಟದೇ ಇದ್ದರೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಇದನ್ನು ಓದಿದ್ದೀರಾ? ರಾಜ್ಯಮಟ್ಟದ ದಸರಾ ಈಜು ಸ್ಪರ್ಧೆ: ಮಂಗಳೂರಿನ ವಾಫಿ ಅಬ್ದುಲ್ ಹಕೀಂ ಚಾಂಪಿಯನ್

ಸಭೆಯಲ್ಲಿ ನರೇಗಲ್ ಪಟ್ಟಣ ಪಂಚಾಯಿತಿ ಸದಸ್ಯರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...