ಗದಗ | ಸರಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳು ನಿಷೇಧ: ಸಿಪಿಐ(ಎಂ) ಸ್ವಾಗತ

Date:

“ಬಹುತ್ವವೇ ಜೀವಾಳ ಆಗಿರುವ ಭಾರತವನ್ನು ಹಿಂದುತ್ವವಾದದ ಮೂಲಕ ಏಕ ಧರ್ಮವನ್ನು ಹೇರುವ ಕನಸಿನಲ್ಲಿ ಮುನ್ನಡೆಯುತ್ತಿರುವ ಆರ್‌ಎಸ್‌ಎಸ್ ಗೆ ಈಗ ಶತಮಾನ. ಈ ಹೊತ್ತಿನಲ್ಲಿ ಅದು ತಾನು ಮತ್ತು ತನ್ನ ಅಂಗ ಸಂಸ್ಥೆಗಳ ಮೂಲಕ ನಡೆಸಿಕೊಂಡು ಬಂದಿರುವ ಚಟುವಟಿಕೆಗಳನ್ನು ಅವಲೋಕಿಸಿದರೆ ಜನರನ್ನು ಭಾವನಾತ್ಮಕವಾಗಿ ಸೆಳೆದು ಧರ್ಮಾಧಾರಿತ ವಿಭಜನೆಯನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಸರಕಾರ ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿರ್ಬಂಧ ಮಾಡಿರುವ ಪ್ರಸ್ತಾಪ ಸಿಪಿಐಎಂ ಸ್ವಾಗತಸುತ್ತದೆ” ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಾಲು ರಾಠೋಡ ಹೇಳಿದ್ದಾರೆ.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಅವರು ಪತ್ರಿಕಾ ಹೇಳಿಕೆ ನೀಡಿದ್ದು, “ಎಳೆ ಮಕ್ಕಳನ್ನು ಕೇಂದ್ರೀಕರಿಸಿಕೊಂಡು ಅವರು ನಡೆಸುವ ಚಟುವಟಿಕೆಗಳು ಭವಿಷ್ಯದ ಭಾರತವನ್ನು ಕೋಮುದ್ವೇಷದ ಜ್ವಾಲಾಮುಖಿಯಾಗಿ ಮಾರ್ಪಡಿಸುವುದರಲ್ಲಿ ಸಂಶಯವಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ ತಾಂತ್ರಿಕ ಜ್ಞಾನದ ದೇಗುಲಗಳಾಗಿ ಉಳಿದಿಲ್ಲ; ಬದಲಾಗಿ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯುವ ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು...

“ಜನರ ಮನಸ್ಸಿನಲ್ಲಿ ಕೋಮುವಿಷಬೀಜ ಬಿತ್ತುವ ಉದ್ದೇಶದಿಂದಲೇ ಆಡಳಿತದ ಎಲ್ಲ ವಿಭಾಗಗಳಲ್ಲಿ ತನ್ನ ಸಿದ್ದಾಂತವನ್ನು ಅಂತರಂಗದಲ್ಲಿ ಬೆಂಬಲಿಸುವವರನ್ನು ತೂರಿಸಿರುವ ಸಂಘ ನೆಲದ ಕಾನೂನನ್ನು ಕಾಲಕಸದಂತೆ ಪರಿಗಣಿಸುತ್ತಿದೆ. ತಾನೊಂದು ಸಾಂಸ್ಕೃತಿಕ ಸಂಘಟನೆ ಎಂದು ಕರೆದುಕೊಳ್ಳುವ ಆದರೆ ದೇಶದ ರಾಜಕಾರಣವನ್ನು ತನಗೆ ಬೇಕಾದ ಹಾಗೆ ನಿಯಂತ್ರಿಸುವ ಮತ್ತು ದ್ವೇಷ ರಾಜಕಾರಣವನ್ನು ಮುಂದೊತ್ತುತ್ತಿರುವ ಸಂಗತಿ ಜಗಜ್ಜಾಹಿರವಾಗಿದೆ” ಎಂದು ಹೇಳಿದ್ದಾರೆ.

“ಬೆಂಗಳೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ, ಮೆರವಣಿಗೆಗಳನ್ನು ನಡೆಸಲು ನಿರ್ಬಂಧವಿದೆ. ಇದಕ್ಕೆ ತಡೆ ಒಡ್ಡುವ, ಪ್ರಕರಣ ದಾಖಲಿಸುವ ನಗರ ಪೊಲೀಸ್ ಇಲಾಖೆ ಆರ್‌ಎಸ್‌ಎಸ್‌ಗೆ ಪಥಸಂಚಲನಕ್ಕೆ ಅನುಮತಿ ನೀಡಿ ಸಂಚಾರ ನಿರ್ಬಂಧ ಹೇರಿ ಪೊಲೀಸ್ ಬಂದೋಬಸ್ತಿನಲ್ಲಿ ನಡೆಸಿಕೊಟ್ಟ ಘಟನೆ ನಡೆದಿದೆ.

ರಾಜ್ಯದಲ್ಲಿ ಸರಕಾರ ಇದೆಯೋ, ಇಲ್ಲವೋ ಎಂಬಂತಹ ಸ್ಥಿತಿ ಇದೆ” ಎಂದು ಕಿಡಿಕಾರಿದರು.

“ಈ ಮೊದಲೂ ಪೆಹಲ್ಗಾಮ್ ದುರಂತದ ವಿರುದ್ಧ ಇತರ ಸಂಘಟನೆಗಳಿಗೆ ಖಂಡನಾ ಸಭೆ ಶಾಂತಿ ಸಭೆ ನಡೆಸಲು ಅವಕಾಶ ನಿರಾಕರಿಸಿ ಸಂಘದ ಸದಸ್ಯರೂ ಇರುವ ಭಾರತೀಯ ಜನತಾ ಪಕ್ಷದ ನಾಯಕರುಗಳೇ ಭಾಗವಹಿಸಿ ಪ್ರಚೋದನಕಾರಿ ಹೇಳಿಕೆಗಳನ್ನು ಮಾಡಿದ ಘಟನೆಯೂ ನಡೆದಿದೆ” ಎಂದಿದ್ದಾರೆ.

“ಇವೆಲ್ಲವನ್ನೂ ಸರಕಾರ ಮತ್ತು ಸಮಾಜ ಗಂಭೀರವಾಗಿ ಪರಿಗಣಿಸಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರತಿಪಾದಿಸುವ ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸಲು ಕಂಕಣಬದ್ಧವಾಗಬೇಕು. ಸಹಬಾಳ್ವೆಯ ಸಾಮರಸ್ಯದ ಮೌಲ್ಯಗಳನ್ನು ಸ್ಥಿರವಾಗಿಸಲು ಜನರನ್ನು ಅಣಿನೆರೆಸಬೇಕೆಂದು ಕರೆ ನೀಡುತ್ತದೆ” ಎಂದು ಪತ್ರಿಕಾ ಹೇಳಿಕೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಡಿಹಳ್ಳಿ ಚಂದ್ರಶೇಖರ್ ಬಂಧನ ಖಂಡಿಸಿ ಮುಧೋಳದಲ್ಲಿ ರೈತರ ಪ್ರತಿಭಟನೆ

ಕಳಸಾ–ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ರೈತಪರ ಹೋರಾಟ ನಡೆಸಿದ್ದ ರಾಜ್ಯ ರೈತ...

ತಾಳಿಕೋಟಿ | ₹2,500 ಬರ ಪರಿಹಾರಕ್ಕೆ ವಿರೋಧ: ಸರ್ಕಾರಕ್ಕೇ ದೇಣಿಗೆ ನೀಡಲು ರೈತ ಸಂಘ ಸಿದ್ಧತೆ

ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ₹2,500 ಬರ...

‘SIR’ ತರಾತುರಿ, ದಾಖಲೆಗಳ ಗೊಂದಲದ ನಡುವೆ ಮತದಾನದ ಹಕ್ಕಿನ ಆತಂಕ: ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ರಾಜ್ಯಾದ್ಯಂತ...

‘ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕು’ : ಸುರೇಶ್ ಶೆಟ್ಟಿ ಬನ್ನಂಜೆ

ಮತದಾರರ ಪಟ್ಟಿಯಿಂದ ಮತದಾರರನ್ನು ಅಕ್ರಮವಾಗಿ ತೆಗೆದುಹಾಕುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಅನ್ಯಾಯ...