ಗದಗ | ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ; ದಲಿತರ ನೂರೆಂಟು ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳು-ಆರೋಪ

Date:

Advertisements

ಹೊಸದಾಗಿ ಬಂದ ಅಧಿಕಾರಿಗಳಿಗೆ ತಳ ಸಮುದಾಯಗಳ ಸಮಸ್ಯೆಗಳನ್ನು ಅರಿಯಲು ಆಗುತ್ತಿಲ್ಲ. ಎಸ್‌ಸಿ/ಎಸ್‌ಟಿ ಸಮುದಾಯಕ್ಕಿರುವ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪದೆ, ಕೇವಲ ಆರ್ಥಿಕವಾಗಿ ಸಬಲರಾದ ದಲಿತ ಸಮುದಾಯದ ಕೆಲವರಷ್ಟೇ ಪಡೆಯುತ್ತಿದ್ದಾರೆ ಎಂದು ಡಿಎಸ್ಎಸ್ ಹಿರಿಯ ಮುಖಂಡ ಎಚ್ ಡಿ ಪೂಚಾರ ಅಸಮಾಧಾನ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ಮುಂಡರಗಿ ಪೋಲಿಸ್ ಠಾಣೆ ಆವರಣದಲ್ಲಿ ತಾಲೂಕು ದಂಡಾಧಿಕಾರಿಗಳು ಧನಂಜಯ ಹಾಗೂ ತಾಲೂಕು ಸಿಪಿಐ ಮಂಜುನಾಥ್ ಕುಸುಗಲ್  ಹಾಗೂ ನಾನಾ ಇಲಾಖೆಗಳ ಅಧಿಕಾರಿಗಳು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಕುಂದು ಕೊರತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪೂಜಾರ ಮಾತನಾಡಿದರು.

“ಮೊದಲು ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಸಂವಿಧಾನ ಪೀಠಿಕೆಯನ್ನು ದೊಡ್ಡದಾದ ಪ್ರತಿಯೊಬ್ಬರಿಗೂ ಕಾಣುವ ಹಾಗೆ ಹಾಕಬೇಕು. ಅಧಿಕಾರಿಗಳು ದಲಿತ ಸಮುದಾಯಗಳಿಗೆ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತಿಲ್ಲ. ಯಾವ ಯಾವ ಇಲಾಖೆಗಳಲ್ಲಿ ದಲಿತ ಸಮುದಾಯಗಳಿಗೆ ದೊರಕುವ ಸೌಲಭ್ಯಗಳ ಪ್ರತಿಯೊಂದು ಮಾಹಿತಿಯನ್ನು ತಿಳಿಸಬೇಕು” ಎಂದು ಹೇಳಿದರು.

Advertisements

“12ನೇ ಶತಮಾನದಿಂದ ಇಲ್ಲಿಯವರೆಗೂ ಜಾತಿ ವ್ಯವಸ್ಥೆ ವಿರುದ್ದ ಕ್ರಾಂತಿ ಮಾಡಿ, ಸಮಾನತೆಯನ್ನು ತರಲು ಪ್ರಯತ್ನಿಸಿದರು. ಆ ಪ್ರಯತ್ನ ಇನ್ನೂ ನಡೆಯುತ್ತಿದೆ. ಈಗಲೂ ಕೂಡ ಕೆಲವೊಂದು ಹಳ್ಳಿಗಳ ಹೋಟೆಲ್‌ಗಳಲ್ಲಿ ದಲಿತರಿಗೆ ಪ್ರವೇಶವಿಲ್ಲ. ಪ್ರಾಣಿಗಳಿಗಿಂತ ಕೀಳಾಗಿ ನೋಡುವ ಪರಿಸ್ಥಿತಿ ಇದೆ. ಅಧಿಕಾರಿಗಳು ಇಂತವುಗಳ ಕಡೆ ಹೆಚ್ಚು ಗಮನ ಹರಿಸಿ ಸಮಾನತೆಯನ್ನು ತರುವ ಕೆಲಸ ಮಾಡಬೇಕು” ಎಂದರು.

“ಗ್ರಾಮೀಣ ಪ್ರದೇಶಗಳಲ್ಲಿ ಈಗಲೂ ಸಾರಾಯಿ ಮಾರಾಟಕ್ಕೆ ಸಿಗುತ್ತದೆ. ಇದರಿಂದ ಎಷ್ಟೊ ಜನರ ಜೀವನ ಹಾಳಾಗಿದೆ. ಇನ್ನೂ ಕೆಲವು ಹಳ್ಳಿಗಳಲ್ಲಿ ಎಸ್ಸಿ ಎಸ್ಟಿ ಸಮುದಾಯದಲ್ಲಿ ಯಾರಾದರು ಮೃತಪಟ್ಟರೆ, ಹೂಳಲು ರುದ್ರಭೂಮಿ ಇಲ್ಲ. ಜಿಲ್ಲಾ ಪಂಚಾಯತಿಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕಾಲೋನಿಯಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಬೇಕು. ಆದರೆ, ಯಾವುದೋ ಒಂದು ಜಾಗದಲ್ಲಿ ರಸ್ತೆ ಮಾಡಿ, ಕಾಲೋನಿಗೆ ಕಾಂಕ್ರಿಟ್ ರಸ್ತೆ ಮಾಡಿದ್ದೇವೆಂದು ಬಿಲ್ ಪಡೆದುಕೊಳ್ಳುತ್ತಿದ್ದಾರೆ. ಪೌರ ಕಾರ್ಮಿಕರಿಗೆ ಆರು ತಿಂಗಳಾದರೂ ವೇತನ ನಿಡಿಲ್ಲ” ಎಂದು ಎಚ್.ಡಿ ಪೂಚಾರ ಅಕ್ರೋಶ ವ್ಯಕ್ತಪಡಿಸಿದರು.

ಡಿಎಸ್ಎಸ್ ತಾಲೂಕು ಸಂಚಾಲಕ ಸೋಮಪ್ಪ ಐತಾಪುರ ಮಾತನಾಡಿ, “ದಲಿತ ಕೇರಿಗಳಲ್ಲಿ ಸಾರಾಯಿ ಮಾರಾಟ ಮಾಡುವುದನ್ನು ನಿಲ್ಲಿಸಬೇಕು. ಈ ಕುರಿತು ಅಬಕಾರಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಮೇವುಂಡಿ ಗ್ರಾಮದ ದಲಿತ ಕೇರಿಗೆ ಹೋಗಲು ದಾರಿಯೇ ಇಲ್ಲ. ತಾಲೂಕು ಆಸ್ಪತ್ರೆಯಲ್ಲಿ ಸರಿಯಾಗಿ ಸ್ಪಂದನೆ ಸಿಗುತ್ತಿಲ್ಲ. ಹಿರೆವಡ್ಡಟ್ಟಿಯ ಶಾಲೆಗೆ ಸರಿಯಾಗಿ ರಸ್ತೆಯೇ ಇಲ್ಲ. ಇವುಗಳ ಕುರಿತು ಯಾವ ಅಧಿಕಾರಿಗಳು ಸ್ಪಂದನೆ ಸಿಗುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಂಡರಗಿ ಪುರಸಭೆ ಸದಸ್ಯ ಸಂತೋಷ ಹಿರೆಮನಿ ಮಾತನಾಡಿ, “ಅಧಿಕಾರಿಗಳಿಗೇ ಎಸ್‌ಸಿ/ಎಸ್‌ಟಿ ಸೌಲಭ್ಯಗಳ ಮಾಹಿತಿ ಕೊರತೆ ಇರುತ್ತದೆ. ಹೀಗಿರುವಾಗ, ಅವರೇಗೆ ಜನರಿಗೆ ಹೇಳೋಕೆ ಆಗುತ್ತದೆ. ಹಾಗಾಗಿ ಸೌಲಭ್ಯಗಳ ಕರಪತ್ರ ತಯಾರು ಮಾಡಿ ಮಾಹಿತಿ ನೀಡಿ, ಪ್ರತಿಯೊಬ್ಬರಿಗೂ ಈ ಕರಪತ್ರ ತಲುಪಿದರೆ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುತ್ತದೆ. ಪಟ್ಟಣದ ಕೇಂದ್ರ ಸ್ಥಾನ ಹರಿಜನ ಕೇರಿ ಜನರು ಮನೆಗಳನ್ನು ಕಟ್ಟಿಕೊಂಎಉ ಎಪ್ಪತ್ತು ಎಂಬತ್ತು ವರ್ಷಗಳಾಗಿವೆ ಇದುವರೆಗೂ ಅವರಿಗೂ ಹಕ್ಕುಪತ್ರ ಕೊಟ್ಟಿಲ್ಲ. ಈ ಕೂಡಲೇ ಈ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಬೇಕು” ಎಂದು ಆಗ್ರಹಿಸಿದರು.

ಮುಂಡರಗಿ ತಾಲೂಕು ದಂಡಾಧಿಕಾರಿ ಧನಂಜಯ ಮಾತನಾಡಿ, “ಕೆಲವು ಸಮಸ್ಯೆಗಳಿನ್ನು ಕೂಡಲೇ ಪರಿಹರಿಸುವಂತೆ ಸೂಚನೆ ನೀಡುತ್ತೇನೆ. ಮುಂದಿನ ಕುಂದು ಕೊರತೆ ಸಭೆಯ ಒಳಗಾಗಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುತ್ತದೆ” ಎಂದು ಭರವಸೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X