ಗದಗ | ಪರಿಶಿಷ್ಟರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಉಸ್ತುವಾರಿ ಸಮಿತಿ ಸಭೆ

Date:

ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಸಮುದಾಯದ ಅಭಿವೃದ್ಧಿಗೆ ವಿನಿಯೋಗವಾಗಬೇಕು. ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಎಸ್‌ಸಿಪಿ/ಟಿಎಸ್‌ಪಿ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ತಲುಪುವಲ್ಲಿ ವಿಳಂಬವಾಗಬಾರದು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌ ತಿಳಿಸಿದ್ದಾರೆ.

ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಡದವರ ಮೇಲಿನ ದೌರ್ಜನ್ಯ ನಿಯಂತ್ರಿಣ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. “ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಜಾರಿಗೆ ಬಂದಿರುವ ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಕುರಿತು ಅರ್ಹ ಫಲಾನುಭವಿಗಳಿಗೆ ಮಾಹಿತಿ ಒದಗಿಸಬೇಕು. ಅನುದಾನದ ಸಮರ್ಪಕ ಬಳಕೆಯಾಗದಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಊಟದ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಬಳಗಾನೂರ ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಅಂಬೇಡ್ಕರ್ ಭವನದ ಸ್ವಚ್ಛತೆ ಸೇರಿದಂತೆ ಸಮರ್ಪಕ ನಿರ್ವಹಣೆಗೆ ಕ್ರಮ ವಹಿಸಬೇಕು” ಎಂದು ಸೂಚಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಎಸ್‌ಸಿ/ಎಸ್‌ಟಿ ಕಾಲೋನಿಗಳಲ್ಲಿ ರಸ್ತೆ, ಕುಡಿಯುವ ನೀರಿನ ಪೂರೈಕೆ, ಬೀದಿ ದೀಪದ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪ್ರತಿಷ್ಟಿತ ಶಾಲೆಗಳಲ್ಲಿ ಪ್ರವೇಶಾತಿ ಪಡೆದ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ವರ್ಗಾವಣೆ ಪತ್ರ ಕೊಡಲು ನಿರಾಕರಣೆ ಮಾಡುತ್ತಿದ್ದಾರೆಂಬ ದೂರುಗಳಿವೆ. ಆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ತಾಕೀತು ಮಾಡಿದರು.

ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಮಾತನಾಡಿ, “ಈಗಾಗಲೇ ಪರಿಶಿಷ್ಟರ ಮೇಲಿನ ದೌರ್ಜನ್ಯ ಕುರಿತು ದಾಖಲಾದ ಎಲ್ಲ ಪ್ರಕರಣಗಳು 60 ದಿನಗಳೊಳಗೆ ಇತ್ಯರ್ಥವಾಗಿವೆ. ಮುಂದೆ ದಾಖಲಾಗುವ ಪ್ರಕರಣಗಳನ್ನು ವಿಳಂಬ ಮಾಡದೇ ಸೂಕ್ತ ಸಾಕ್ಷಾಧಾರಗಳ ಮುಖಾಂತರ ಶೀಘ್ರವೇ ಇತ್ಯರ್ಥಗೊಳಿಸಲು ಕ್ರಮ ವಹಿಸಲಾಗುವುದು. ಸಮುದಾಯದ ಮೇಲೆ ಆಗುವ ದೌರ್ಜನ್ಯಕ್ಕೆ ಕಾನೂನಿನಲ್ಲಿ ಕಠಿಣ ಶಿಕ್ಷೆಗಳನ್ನು ರೂಪಿಸಲಾಗಿದ್ದು, ಅವುಗಳನ್ನು ನಿರ್ದಾಕ್ಷಿಣ್ಯವಾಗಿ ಜಾರಿಗೊಳಿಸಲಾಗುತ್ತದೆ” ಎಂದರು.

ಸಭೆಯಲ್ಲಿ ಸಮಿತಿಯ ನಾಮನಿರ್ದೇಶಿತ ಸದಸ್ಯ ಎಸ್.ಎನ್ ಬಳ್ಳಾರಿ, ಜಾನು ಲಮಾಣಿ, ಸುರೇಶ ಚಲವಾದಿ, ಮೈಲಾರಪ್ಪ ಕಲಕೇರಿ, ಶಾರದಾ ಕಿತ್ತೂರ, ಸಾವಿತ್ರಿ ಪಾಟೀಲ, ಪ್ರೊ. ಬೇಲೂರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುಶೀಲಾ ಬಿ, ಉಪವಿಭಾಗಾಧಿಕಾರಿ ಅನ್ನಪೂರ್ಣ ಎಂ, ಜಿ.ಪಂ.ಉಪಕಾರ್ಯದರ್ಶಿ ಬಸವರಾಜ ಅಡವಿಮಠ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ನಗರಾಭಿವೃಧ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್ , ತಾಲೂಕಾ ತಹಶೀಲ್ದಾರರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ಕಾರುಗಳ ನಡುವೆ ಅಪಘಾತ : ಐವರು ಸಾವು

ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಐದು ಜನರು ಮೃತಪಟ್ಟಿರುವ ಘಟನೆ...

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಮೊಂತಿ ಫೆಸ್ಟ್ ಆಚರಣೆ

ಜಿಲ್ಲಾದ್ಯಂತ ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ಟ್ ಅನ್ನು ಕ್ರೆಸ್ತರು ಭಾನುವಾರ ಸಂಭ್ರಮದಿಂದ...

ಕೊಪ್ಪ | ಮಹಿಳಾ ಪೊಲೀಸ್‌ ಸಿಬ್ಬಂದಿಗೆ ಲೈಂಗಿಕ ಕಿರುಕುಳ; ಪಿಎಸ್ಐ ಬಸವರಾಜ್ ವಿರುದ್ಧ ಆರೋಪ

ಕೊಪ್ಪ ಪಿಎಸ್ಐ ಬಸವರಾಜ್ ತಮ್ಮದೇ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಗೆ ಲೈಂಗಿಕ...