ಶಾಲೆಯ ಕೊಠಡಿ ಏಕಏಕಿ ಮೇಲ್ಛಾವಣಿ ಪದರ ಕುಸಿದು ಬಿದ್ದ ಪರಿಣಾಮ ಐವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕರು ಗಾಯಗೊಂಡ ಘಟನೆ ನಡೆದಿದೆ.
ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಚಿಲಝೆರಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ಕೊಠಡಿ ಮೇಲ್ಛಾವಣಿ ಕಾಂಕ್ರೀಟ್ ಪದರ ಏಕಾಏಕಿ ಕುಸಿದು ಬಿದ್ದಿದೆ.
ಘಟನೆಯಲ್ಲಿ ಎಮ್.ಡಿ ಒಂಟಿ ಎಂಬ ಶಿಕ್ಷಕರ ತಲೆಗೆ ಗಂಭೀರ ಗಾಯಗಳಾಗಿವೆ. ಮಕ್ಕಳ ತಲೆ, ಕೈ, ಕಾಲು, ಮುಖಕ್ಕೆ ಗಾಯಗಳಾಗಿವೆ. ಗಾಯಾಳು ಮಕ್ಕಳು ಹಾಗೂ ಶಿಕ್ಷಕರನ್ನು ಕೂಡಲೇ ಗಜೇಂದ್ರಗಡ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸುದ್ದಿ ಓದಿದ್ದೀರಾ? ಕೊಪ್ಫಳ | ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ರೈತರ ವಿರೋಧ; ಕೋರ್ಟ್ ಮೊರೆ ಹೋಗುವ ಎಚ್ಚರಿಕೆ
ಶಿಥಿಲಗೊಂಡ ಹಳೆಯ ಕೊಠಡಿಯಲ್ಲಿ ಮಕ್ಕಳು ಸಾಲಿ ಕಲಿಯುವ ಪರಿಸ್ಥಿತಿ ಆಗಿದೆ. ಇದರ ಬಗ್ಗೆ ಅಧಿಕಾರಿಗಳಿಗೆ, ಜನಪ್ರತಿನಿದಿಗಳಿಗೆ ಗಮನಕ್ಕೆ ತಂದ್ರೂ ಪ್ರಯೋಜನವಾಗಿಲ್ಲ” ಎಂದು ಶಿಕ್ಷಣ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಘಟನೆ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
