ಗದಗ | ಸೆ. 22ರಂದು ಜಿಲ್ಲಾಮಟ್ಟದ ಲಿಂಗಾಯತ ಸಮಾವೇಶ

Date:

ಸೆಪ್ಟೆಂಬರ್ 22 ರವಿವಾರದಂದು ಮಧ್ಯಾಹ್ನ 3:30 ಗಂಟೆಗೆ ಗದಗ ಜಿಲ್ಲಾ ಲಿಂಗಾಯತ ಸಮಾವೇಶ ಶ್ರೀ ಜಗದ್ಗುರು ತೋಂಟದಾರ್ಯ ಸಿದ್ದಲಿಂಗೇಶ್ವರ ಕಲ್ಯಾಣ ಕೇಂದ್ರದಲ್ಲಿ ಜರುಗಲಿದೆ ಎಂದು ಮಹಾಸಭಾ ಮುಖಂಡ, ಶರಣತತ್ವ ಚಿಂತಕ ಅಶೋಕ ಬರಗುಂಡಿ ತಿಳಿಸಿದರು.

- Advertisement -

ಜಿಲ್ಲಾ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ನೇತೃತ್ವದಲ್ಲಿ ನಡೆಯುವ ಸಮಾವೇಶದ ಸಾನಿಧ್ಯವನ್ನು ಗದಗ ಜಗದ್ಗುರು ತೋಂಟದಾರ್ಯ ಮಠದ ಡಾ.ತೋಂಟದ ಸಿದ್ದರಾಮ ಸ್ವಾಮೀಜಿ ವಹಿಸಲಿದ್ದಾರೆ. ಬೆಳಗಾವಿ ಜಿಲ್ಲೆಯ, ಬಸವಬೆಳವಿ ಚರಂತೇಶ್ವರ ಮಠದ ಶರಣಬಸವ ಸ್ವಾಮಿಗಳು ಹಾಗೂ ವಿಜಯಪುರದ ಪ್ರಗತಿಪರ, ಶರಣತತ್ವ ಚಿಂತಕ ಡಾ. ಜೆ.ಎಸ್. ಪಾಟೀಲ್ ಕ್ರಮವಾಗಿ ಲಿಂಗಾಯತ ಬೆಳೆದು ಬಂದ ಬಗೆ, ಅದರ ಇತಿಹಾಸ ಹಾಗೂ ಲಿಂಗಾಯತ ಜ್ವಲಂತವಾಗಿ ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಕುರಿತಾದ ಚಿಂತನೆಗಳ ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಎಲ್ಲ ಚಿಂತನೆಗಳ ನೇತೃತ್ವವನ್ನು ಸಮಾವೇಶದ ಮುಖ್ಯ ಅತಿಥಿಗಳಾಗಿರುವ, ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಜಾಮದಾರ ನಡೆಸಿಕೊಡುತ್ತಾರೆ. ಜೆಎಲ್ಎಮ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್. ಚೆಟ್ಟಿ ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾವೇಶದಲ್ಲಿ ಜಿಲ್ಲೆಯ ಎಲ್ಲ ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಅಂದು ಮುಂಜಾನೆ 10:30 ಗಂಟೆಗೆ ಕೇಂದ್ರ ಜಾಗತಿಕ ಲಿಂಗಾಯತ ಮಹಾಸಭಾದ ಆರನೇ ಸರ್ವಸಾಮಾನ್ಯ ವಾರ್ಷಿಕ ಮಹಾಸಭೆ ಜರುಗಲಿದೆ. ಗದಗ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ದರಾಮ ಸ್ವಾಮಿಗಳ ಸನ್ನಿಧಾನದಲ್ಲಿ ಈ ಮಹಾಸಭೆ ನಡೆಸಲು ಯೋಜಿಸಲಾಗಿದೆ. ಇದರಲ್ಲಿ ಕೇಂದ್ರ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಕರ್ನಾಟಕದ ಎಲ್ಲ ಜಿಲ್ಲಾ, ತಾಲೂಕು ಘಟಕಗಳ ಅಧ್ಯಕ್ಷರು ಸದಸ್ಯರು, ಹೊರದೇಶದ ಪ್ರತಿನಿಧಿಗಳು, ವಿಶೇಷ ಆಹ್ವಾನಿತರು, ಮಹಾಪೋಷಕರು, ದಾಸೋಹಿ ಸದಸ್ಯರು, ಎಲ್ಲಾ ಪ್ರಾತಿನಿಧಿಕ ಸದಸ್ಯರು ಮಹಾಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಬರಗುಂಡಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್. ಚೆಟ್ಟಿ, ಕಾರ್ಯದರ್ಶಿ ಶೇಖಣ್ಣ ಕವಳಿಕಾಯಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶ್ರೀದೇವಿ ಶೆಟ್ಟರ, ಕಾರ್ಯದರ್ಶಿ ಗೌರಕ್ಕ ಬಡಿಗಣ್ಣವರ, ಜಿಲ್ಲಾ ಮುಖಂಡರಾದ ಎಸ್.ಎ. ಮುಗದ, ಪ್ರಕಾಶ ಅಸುಂಡಿ, ಜಿ.ಬಿ. ಪಾಟೀಲ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...