ಗದಗ | ಎಸ್ ಸಿ ಎಸ್ ಪಿ /ಟಿ ಎಸ್ ಪಿ ಕಾಯ್ದೆಯ ‘7ಸಿ’ ಸೆಕ್ಷನ್ ರದ್ದುಪಡಿಸಬೇಕು : ಶರೀಫ್ ಬಿಳಿಯಲಿ

Date:

“ದಲಿತ ಸಂಘಟನೆಗಳ ಒತ್ತಾಯಕ್ಕೆ ಮಣಿದು  ಎಸ್ ಸಿ ಎಸ್ ಪಿ /ಟಿ ಎಸ್ ಪಿ  ಕಾಯ್ದೆಯ ʼ7ಡಿʼ ಸೆಕ್ಷನ್‌ ರದ್ದುಪಡಿಸಿದಂತೆ  ʼ7ಸಿʼ ಯನ್ನೂ ರದ್ದುಪಡಿಸಬೇಕೆಂದು ದಲಿತ ಸಂಘರ್ಷ ಸಮಿತಿಯು  ಸರ್ಕಾರವನ್ನು ಒತ್ತಾಯಿಸುತ್ತದೆ. ಹಾಗೂ  ಸಂವಿಧಾನ ವಿಧಿ 46ರ ಆಶಯವನ್ನು ಪಾಲಸಬೇಕು” ಎಂದು ಡಿ ಎಸ್ ಎಸ್ ಮುಖಂಡ ಶರೀಫ್ ಬಿಳಿಯಲಿ ಆಗ್ರಹಿಸಿದರು.

- Advertisement -

ಗದಗ ಪಟ್ಟಣದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, “ದಲಿತ ಸಂಘರ್ಷ ಸಮಿತಿ ಚಳವಳಿಯ ಒತ್ತಾಸೆಯಿಂದಾಗಿ 2013-14 ರಲ್ಲಿ ಸಿದ್ಧರಾಮಯ್ಯನವರ ಸರ್ಕಾರವೇ ಜಾರಿಗೆ ತಂದ ಎಸ್ ಸಿ ಎಸ್ ಪಿ /ಟಿ ಎಸ್ ಪಿ ಯೋಜನೆಯ ಕಾಯ್ದೆಯು ತನ್ನ ಪರಿಭಾಷೆಯಲ್ಲಿ ಎಸ್ ಸಿ ಎಸ್ ಪಿ /ಟಿ ಎಸ್ ಪಿ ಎಂಬುದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯಲ್ಲಿನ ಅಂತರವನ್ನು ತುಂಬಲು ಅನುಮೋದಿಸಿರುವ ಯೋಜನೆ ಆಗಿದೆ. ಅದರಲ್ಲಿಯೇ ʼಅಭಿವೃದ್ಧಿಯ ಅಂತರʼ ಎಂದರೆ ಮಾನವ ಮತ್ತು ಆರ್ಥಿಕ ಅಭಿವೃದ್ಧಿಗೆ ಸಂಬಂಧಪಟ್ಟಂತೆ ನಿರ್ದಿಷ್ಟವಾಗಿ ಗೊತ್ತುಪಡಿಸಬಹುದಾದಂತೆ, ರಾಜ್ಯ ಸರಾಸರಿಗೆ ಹೋಲಿಸಿದಾಗ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಸೂಚಕಗಳಲ್ಲಿರುವ ವ್ಯತ್ಯಾಸಗಳು ವ್ಯಾಖ್ಯಾನಿಸುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸಾರಾಂಶದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರು (ದಲಿತರು) ಮತ್ತು ಇತರ ಸಮುದಾಯಗಳ ನಡುವಿನ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯ ಅಂತರವನ್ನು ಕಡಿಮೆ ಮಾಡುವುದೇ ಈ ಯೋಜನೆಯ ಮೂಲ ಉದ್ದೇಶವಾಗಿದೆ” ಅಸಮಾಧಾನ ವ್ಯಕ್ತಪಡಿಸಿದರು.

“ಕರ್ನಾಟಕ ಮಾನವ ಅಭಿವೃದ್ಧಿ ವರದಿ – 2015ರ ಪ್ರಕಾರ ಇತರೆ ಸಮುದಾಯಗಳಿಗೆ ಹೋಲಿಸಿಕೊಂಡರೆ ದಲಿತರು ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದಾರೆ. ರಾಜ್ಯದ ಸರಾಸರಿ ಅಭಿವೃದ್ಧಿಗಿಂತಲೂ ದಲಿತರು ಕಡಿಮೆ ಅಭಿವೃದ್ಧಿ ಹೊಂದಿರುವುದು ಕಂಡುಬಂದಿದೆ. ಹೀಗಿರುವಾಗ ಎಸ್ ಸಿ ಎಸ್ ಪಿ /ಟಿ ಎಸ್ ಪಿ ಕಾಯ್ದೆಯು ದಲಿತರಿಗೆ ಮೀಸಲಿಡುವ ಹಣವನ್ನು ಅಸಮಾನತೆಯ ಅಂತರವನ್ನು ಕಡಿಮೆ ಮಾಡುವ ಯೋಜನೆಗಳಲ್ಲಿ ವಿನಿಯೋಗಿಸಬೇಕೇ ಹೊರತು ಎಲ್ಲರ ಅಭಿವೃದ್ಧಿಗೆ ರೂಪಿಸುವ ಯೋಜನೆಗಳಲ್ಲಿ ಅಲ್ಲ” ಎಂದರು.

“2023-24ನೇ ಸಾಲಿನಿಂದಲೂ ಸುಮಾರು ರೂ. 25000 ಕೋಟಿಯನ್ನು ಗ್ಯಾರಂಟಿಗಳಿಗೂ, ರೂ. 15000 ಕೋಟಿಯನ್ನು ಅನ್ಯ ಉದ್ದೇಶಕ್ಕೂ ಬಳಸಿರುವುದು ಕಾಯ್ದೆಯನ್ನು ಸ್ಪಷ್ಟವಾಗಿ  ಉಲ್ಲಂಘಿಸಿದಂತೆ, ಅಷ್ಟೇ ಅಲ್ಲ, ಕಳೆದ ಬಿಜೆಪಿ ಸರ್ಕಾರ ಮಾಡಿದ ಕೆಲಸವನ್ನೇ ಕಾಂಗ್ರೆಸ್‌ ಸರ್ಕಾರ ಕೂಡ ಮಾಡಿದಂತಾಗಿದೆ. ಅದಷ್ಟೇ ಅಲ್ಲದೆ ಸರ್ಕಾರ, ಮುಖ್ಯ ಮಂತ್ರಿಗಳು, ಸಮಾಜ ಕಲ್ಯಾಣ ಸಚಿವರೂ ಸೇರಿದಂತೆ ಇತರ ಮಂತ್ರಿಗಳೂ ಈ ಕ್ರಮವನ್ನು ಸಮರ್ಥಿಸಿಕೊಳ್ಳುತ್ತಿರುವುದು ದುರಂತ ಮತ್ತು ಖಂಡನೀಯ” ಎಂದರು.

“ಬೇಲಿಯೇ ಎದ್ದು ಹೊಲ ಮೇಯುತ್ತಿದೆ ಎಂಬಂತೆ ದಲಿತರ ಓಗ್ಗಟ್ಟಿನ ಓಟುಗಳಿಂದ ಸರ್ಕಾರ ರಚಿಸಿದ ಕಾಂಗ್ರೆಸ್‌, ಈಗ ದಲಿತರ ಅಭಿವೃದ್ಧಿಗೆ ಮೀಸಲಿರಿಸಿದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಹಾಗೂ ಅನ್ಯ ಉದ್ದೇಶಗಳಿಗೆ  ಬಳಸುತ್ತಿರುವುದು ದಲಿತ  ಸಮುದಾಯಗಳಿಗೆ ಬಗೆದ  ಮಹಾ ದ್ರೋಹವಾಗಿದೆ” ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ವಿ ವಿ ಉಳಿಸಲು ರಾಜ್ಯದ ರೈತ ಸಂಘಟನೆಗಳು ಬೆಂಬಲಿಸಿ: ಉಡಚಪ್ಪ ಮಾಳಗಿ

“ಸರ್ಕಾರದ ಈ ದುರ್ವರ್ತನೆಯನ್ನು ತೀವ್ರವಾಗಿ ಖಂಡಿಸುತ್ತದೆ. ಗ್ಯಾರಂಟಿ ಯೋಜನೆಗಳು ಉತ್ತಮ ಯೋಜನೆಗಳೇ. ಕನ್ನಡಿಗರೆಲ್ಲರಿಗೂ ಈ ಯೋಜನೆಯಿಂದ ಅನುಕೂಲವಾಗಿದೆ, ಸಂತೋಷ. ಆದರೆ ಗ್ಯಾರಂಟಿಗಳ ಉದ್ದೇಶವೇ ಬೇರೆ ಎಸ್ ಸಿ ಎಸ್ ಪಿ /ಟಿ ಎಸ್ ಪಿ ಕಾಯ್ದೆಯ ಉದ್ದೇಶವೇ ಬೇರೆ. ಗ್ಯಾರಂಟಿಗಳು ದಲಿತರು ಮತ್ತು ದಲಿತೇತರರ ನಡುವಿನ ಸಾಮಾಜಿಕ-ಆರ್ಥಿಕ ಅಸಮಾನತೆಯ ಅಂತರವನ್ನು ಕಡಿಮೆ ಮಾಡುವುದಿಲ್ಲ. ಆದ್ದರಿಂದ ಈಗಿಂದೀಗಲೇ ಗ್ಯಾರಂಟಿಗಳಿಗೆ ಬಳಸಿರುವ  ಎಸ್ ಸಿ ಎಸ್ ಪಿ /ಟಿ ಎಸ್ ಪಿ ಹಣವನ್ನು ದಲಿತರ ಅಭಿವೃದ್ಧಿಗೆ ಹಿಂದಿರುಗಿಸಬೇಕು” ಎಂದು ಶರೀಫ್ ಬಿಳಿಯಲಿ ಆಗ್ರಹಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...