ಗದಗ | ನಿಸ್ವಾರ್ಥ ಕಾಯಕವೇ ಶರಣತ್ವದ ದಾರಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

Date:

“ನಿಸ್ವಾರ್ಥ ಕಾಯಕವೇ ಶರಣತ್ವದ ದಾರಿ. ನಾನು-ನಾನು ಎಂಬ ಅಹಂಕಾರದಿಂದ ಹೊರಬಂದಾಗಲೇ ಶರಣತ್ವ ಸಾಧ್ಯ. ಶರಣರು ತೋರಿಸಿದ ಸಾಧನೆಯ ದಾರಿಯಲ್ಲಿ ಸಾಗುವುದು ನಮ್ಮೆಲ್ಲರ ಕರ್ತವ್ಯ” ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಹೇಳಿದರು.

- Advertisement -

ಗದಗ ಪಟ್ಟಣದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕಾಯಕ ಶರಣ ಮಾದಾರ ಚೆನ್ನಯ್ಯ, ಶರಣ ಸಮಗಾರ ಹರಳಯ್ಯ ಹಾಗೂ ಶರಣ ಡೋಹರ ಕಕ್ಕಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ ಕಾಯಕ ಶರಣರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಜಯಂತಿಗೆ ಚಾಲನೆ ನೀಡಿದರು.

ಶರಣತತ್ವ ಚಿಂತಕ ಅಶೋಕ ಬರಗುಂಡಿ ಉಪನ್ಯಾಸ ನೀಡಿದ ಅವರು, ಕಾಯಕವನ್ನು ಕೇವಲ ದುಡಿಮೆಯ ಮಟ್ಟಕ್ಕೆ ಸೀಮಿತಗೊಳಿಸಬಾರದು, ಅದು ಆಧ್ಯಾತ್ಮಿಕ ಸಾಧನೆಯ ದಾರಿ. ೧೨ನೇ ಶತಮಾನದಲ್ಲೇ ಶರಣರು ವೃತ್ತಿಗೆ ಗೌರವ ನೀಡುವ ಮೂಲಕ ಶ್ರೇಣಿಕೃತ ವ್ಯವಸ್ಥೆಗೆ ಸವಾಲು ಹಾಕಿದರು. ದುಡಿಯುವವನೇ ದೇವರು ಎಂಬ ತತ್ವವನ್ನು ಅವರು ಜೀವನದ ಮೂಲಕ ಸಾರಿದರು” ಎಂದು ವಿವರಿಸಿದರು.

“ಶರಣರು ಜಾತಿ, ಧರ್ಮಗಳ ಗಡಿಗಳನ್ನು ಮೀರಿ ಚೈತನ್ಯವೇ ಮೂಲಸ್ವರೂಪ ಎಂದು ಸಾರಿದ್ದು, ಅವರ ತತ್ವ ಇಂದಿಗೂ ಸಮಾಜಕ್ಕೆ ದಿಕ್ಕು ತೋರುತ್ತದೆ” ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಕೆ.ಆರ್. ದುರಗೇಶ್, ಸಹಾಯಕ ಆಯುಕ್ತ ಗಂಗಪ್ಪ, ಡಿವೈಎಸ್‌ಪಿ ಮುರ್ತುಜಾ ಖಾದ್ರಿ, ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ, ಜನಪದ ಅಕಾಡೆಮಿ ಸದಸ್ಯ ಶಂಕ್ರಣ್ಣ ಸಂಕಣ್ಣನವರ, ಎಸ್.ಎನ್. ಬಳ್ಳಾರಿ, ಶರೀಫ್ ಬಿಳಿಯಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಲಾಯಿತು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...