ಗದಗ | ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಸ್‌ಎಫ್‌ಐ ಆಗ್ರಹ

Date:

ಗಜೇಂದ್ರಗಡ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಬರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ) ತಾಲೂಕು ಸಮಿತಿಯಿಂದ ಶಾಖಾ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ನಗರದ ಕೆಎಸ್‌ಆರ್‌ಟಿಸಿ ಡಿಪೋ ಎದುರು ಪ್ರತಿಭಟನೆ ನಡೆಸಿದ ಎಸ್‌ಎಫ್‌ಐ ಕಾರ್ಯಕರ್ತರು, “ನಗರದ ಹೊರಭಾಗದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯಕ್ಕೆ ಸುತ್ತಮುತ್ತ ಹಳ್ಳಿಗಳಿಂದ ನೂರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಬರುತ್ತಾರೆ. ಆದರೆ ಇಲ್ಲಿ ಬಸ್ ವ್ಯವಸ್ಥೆ ಇಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ ಉಂಟಾಗುತ್ತಿದ್ದು, ಕೂಡಲೇ ಬಸ್‌ ವ್ಯವಸ್ಥೆ ಕಲ್ಪಿಸಬೇಕು” ಎಂದು ಆಗ್ರಹಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
ಬಸ್‌ ವ್ಯವಸ್ಥೆಗೆ ಆಗ್ರಹ

ಎಸ್‌ಎಫ್‌ಐ ಜಿಲ್ಲಾ ಉಪಾಧ್ಯಕ್ಷ ಚಂದ್ರು ರಾಠೋಡ ಮಾತನಾಡಿ, “ಗಜೇಂದ್ರಗಡ ಶಿಕ್ಷಣ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಬೆಳೆಯುತ್ತಿರುವ ನಗರವಾಗಿದ್ದು, ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ನೂರಾರು ಗ್ರಾಮಿಣ ಭಾಗದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಬರುತ್ತಾರೆ. ಆದರೆ ಅವರಿಗೆ ಕಾಲೇಜಿಗೆ ಹೋಗಲು ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲ. ಜತೆಗೆ ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಸೇರಿದಂತೆ ಬಹುತೇಕ ಸಮಸ್ಯೆಗಳಿವೆ. ಇವುಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ಸರಿಪಡಿಸಲು ಮುಂದಾಗಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಹೃದಯಾಘಾತ: ಸಾಮಾಜಿಕ ಕಾರ್ಯಕರ್ತ ನಿಧನ

ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರು, ಸಂಘಟನೆ ಮುಖಂಡರಾದ ಪ್ರದೀಪ್ ಮಾದರ, ಅನಿಲ ರಾಠೋಡ, ವಿಕಾಸ್ ರಮಣಿ, ಮಹಮ್ಮದ್ ರಫಿ, ಕೊಲ್ಕಾರ್ ಫಾರುಕ್ ನೀಲೋಗಲ್, ಮಹೇಶ್, ನವೀನ ತಳವಾರ, ಸಚ್ಚಿದಾನಂದ, ವಿಶ್ವನಾಥ್ ಶಿರಹಟ್ಟಿ, ವಿನಾಯಕ ಚಕ್ರಸಾಲಿ, ಶ್ರಿಶಾಂಕ್ ಉಪ್ಪಾರ, ಶ್ರಿಕಾಂತ, ಸಿದ್ದಯ್ಯ, ಪವನ್ ಶಶಿಧರ, ಮುತ್ತಪ್ಪ, ಮಲ್ಲಿಕಾರ್ಜುನ, ಉಮೇಶ್ ಮಂಜುನಾಥ ಹಾಗೂ ವಿದ್ಯಾರ್ಥಿ ಮುಖಂಡರು ಇದ್ದರು

ವರದಿ : ಎಸ್‌ಎಫ್‌ಐ ಜಿಲ್ಲಾ ಉಪಾಧ್ಯಕ್ಷ ಚಂದ್ರು ರಾಠೋಡ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...