ಗದಗ | ತೋಂಟದಾರ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದೂ ಸಮ್ಮೇಳನ ನಡೆಸದಂತೆ ಎಸ್ಎಫ್ಐ ಆಗ್ರಹ

Date:

ಶೈಕ್ಷಣಿಕ ಸಂಸ್ಥೆಗಳಲ್ಲಿ ಮತ ಧರ್ಮದ ಧಾರ್ಮಿಕತೆ ಬಿತ್ತರಿಸುವ ಯಾವುದೇ ಚಟುವಟಿಕೆಯನ್ನು ನಡೆಸಬಾರದು. ಆದರೆ ತೋಂಟದಾರ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದೂ ಸಮ್ಮೇಳನ ನಡೆಸುತ್ತಿರುವುದನ್ನ ಎಸ್ ಎಫ್ ಐ ಖಂಡಿಸಿದೆ.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಶ್ರೀ ಜಗದ್ಗುರು ತೋಂಟದಾರ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಾಳೆ ಫೆ 14ರಂದು ಹಿಂದೂ ಸಮ್ಮೇಳನ ಹಮ್ಮಿಕೊಂಡಿದ್ದು, ಇದು ಶಿಕ್ಷಣ ಸಂಸ್ಥೆಗಳ ಸಂವಿಧಾನ ಉಲ್ಲಂಘನೆ ಕಾರ್ಯಕ್ರಮವಾಗಿದ್ದು, ಕ್ರಮಕ್ಕೆ ಎಸ್ಎಫ್ಐ ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

 ಈ ಸಂದರ್ಭದಲ್ಲಿ ಎಸ್ ಎಫ್ ಐ  ಜಿಲ್ಲಾಧ್ಯಕ್ಷ ಚಂದ್ರು ರಾಠೋಡ್ ಮಾತನಾಡಿ, “ಭಾರತ ಸಂವಿಧಾನವು ವಿಧಿ 28ರಲ್ಲಿ ತಿಳಿಸಿರುವಂತೆ ವಿದ್ಯಾರ್ಥಿಗಳಿಗೆ ಜಾತ್ಯಾತೀತ ಶಿಕ್ಷಣ ನೀಡುವಂತೆ ನಿರ್ದೇಶಿಸುತ್ತದೆ. ಆದರೆ ನಗರದ ತೋಂಟದಾರ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದೂ ಸಮ್ಮೇಳನ ಹಮ್ಮಿಕೊಂಡಿದ್ದು, ಇದರಲ್ಲಿ ವಿದ್ಯಾರ್ಥಿಗಳಿಗೆ ಕೋಮುದ್ವೇಷ ವಿಷಬೀಜ ಬಿತ್ತುವ ಸಂದೇಶವನ್ನು ನೀಡುತ್ತದೆ. ಆದರಿಂದ ವಿದ್ಯಾರ್ಥಿಗಳ ಮಧ್ಯೆ ಜಾತ್ಯತೀತ ಸೌಹಾರ್ದ ಭಾವನೆಯನ್ನು ಚಿದ್ರಗೊಳಿಸುವ ಹುನ್ನಾರವಾಗಿದೆ” ಎಂದು ಕಿಡಿಕಾರಿದರು.

 ನಂತರ ಎಸ್ ಎಫ್ ರಾಜ್ಯ ಉಪಾಧ್ಯಕ್ಷರಾದ ಗಣೇಶ್ ರಾಥೋಡ್ ಮಾತನಾಡಿ, “ಕ್ರೀಡಾಂಗಣದಲ್ಲಿ ನಾಳೆ ಪ್ರಥಮ ಪಿಯುಸಿ ಅಂತಿಮ ಪರೀಕ್ಷೆ ಹಾಗೂ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯುತ್ತಿದ್ದರೂ ಕೂಡ ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಗಳು ಇಂತಹ ಕೋಮು ಪ್ರಚೋದನೆಗೆ ಒಳಗಾಗುವ ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸಿದೆ.  ಇದು ಸಂವಿಧಾನ, ಶಿಕ್ಷಣ ನೀತಿ ವಿರೋಧಿ ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸಿದೆ. ಪರೀಕ್ಷೆ ಇದ್ದರೂ ಕೂಡ ಇತಂಹ ಸಂವಿಧಾನ ವಿರೋಧಿ ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಎಸ್ಎಫ್ಐ ತಾಲೂಕ ಅಧ್ಯಕ್ಷ ಅನಿಲ್ ಆರ್ ಮಾತನಾಡಿ, “ಶಾಲೆಗಳು ವಿದ್ಯಾರ್ಥಿಗಳಿಗೆ ವಿದ್ಯೆ ಕಲಿಸುವ ಕೇಂದ್ರಗಳೇ ವಿನಃ ಧರ್ಮ ಬೋಧನೆಯ ಪಾಠ ಶಾಲೆಗಳಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗಣೇಶ ರಾಥೋಡ್, ಚಂದ್ರು, ಅನಿಲ್, ಶರಣು, ರಾಹುಲ್, ಗುರು, ಈಶ್ವರ್ ಗುಡ್ಡದೇವಲಾಪುರ, ವೀರೇಶ್, ತುಕಾರಾಂ, ಆನಂದ್ ಹಾಗೂ ಇತರರು ಹಾಜರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...