ಗದಗ | ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಎಸ್ಎಫ್ಐ ಒತ್ತಾಯ

Date:

“ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಡಾ. ಬಿ. ಆರ್. ಅಂಬೇಡ್ಕರ್ ಬಾಲಕರ ಮೆಟ್ರೀಕ್ ನಂತರದ ವಸತಿ ನಿಲಯದಲ್ಲಿ ಸುಮಾರು 120 ವಿದ್ಯಾರ್ಥಿಗಳ ಇದ್ದಾರೆ. ನಿಲಯದಲ್ಲಿ ಮೂಲಭೂತ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ದೊರೆಯುತ್ತಿಲ್ಲ” ಎಂದು ಗದಗ ಜಿಲ್ಲೆಯ ರೋಣ ಪಟ್ಟಣದ ವಸತಿ ನಿಲಯದ ಮುಂದೆ ಎಸ್ ಎಫ್ ಐ ವತಿಯಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನೆಯಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ ಮಾತನಾಡಿ, “ಈ ವಸತಿ ನಿಲಯದಲ್ಲಿ ದಿನನಿತ್ಯ ಸುಮಾರು ನೂರು ಜನ ವಿದ್ಯಾರ್ಥಿಗಳು ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳಿಗೆ ಸರಿಯಾದ ಮೂಲಭೂತ ಸೌಕರ್ಯಗಳು ಇಲ್ಲ. ಸೋಪ್ ಕೀಟ್, ಹಾಸಿಗೆ ಹೋದಿಕೆ, ಆಟದ ಸಾಮಗ್ರಿಗಳು ಇಲ್ಲ. ಶೌಚಾಲಯ ಸ್ವಚ್ಛತೆ ಇಲ್ಲ, ಗ್ರಂಥಾಲಯ ಇಲ್ಲ, ಬಿಲ್ಡಿಂಗ್ ಸೋರಿಕೆಯಾಗುತ್ತದೆ. ಇಷ್ಟೆಲ್ಲ ಸಮಸ್ಯೆಗಳು ಇದ್ದರೂ ಅಧಿಕಾರಿಗಳು ಕಣ್ತೆರೆದು ನೋಡುತ್ತಿಲ್ಲ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“ಈ ಶೈಕ್ಷಣಿಕ ವರ್ಷ ಆರಂಭವಾಗಿ ಸುಮಾರು ಆರು ತಿಂಗಳು ಗತಿಸಿದರೂ ಕೂಡ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳು ಸಿಗದೇ ಇರುವುದು ಖೇದಕರ. ರೋಣ ಶಾಸಕರು ಜಿ. ಎಸ್. ಪಾಟೀಲ ಅವರು ಸ್ಥಳೀಯರಾಗಿದ್ದು, ಗ್ರಾಮೀಣ ಭಾಗದಿಂದ ಬಂದ ಹಾಸ್ಟೆಲ್ ವಿದ್ಯಾರ್ಥಿಗಳ ಸಮಸ್ಯೆಗಳ ಕೂಗು ಕೇಳಲಿಲ್ಲ ಅನಿಸುತ್ತದೆ. ಆದರೆ ಎಸ್ಎಫ್ಐ ಸಂಘಟನೆ ಅವುಗಳನ್ನು ಖಂಡಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ವಿದ್ಯಾರ್ಥಿಗಳ ಪರವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ” ಎಂದರು.

ಇಂದು ವಸತಿ ನಿಲಯದಲ್ಲಿ ವಿದ್ಯಾರ್ಥಿಗಳು ಸಮಸ್ಯೆಗಳನ್ನು ಸರಿಪಡಿಸಲು ಎಸ್ ಎಫ್ ಐ ನೇತೃತ್ವದಲ್ಲಿ ಹೋರಾಟ ಮಾಡಿದ್ದಾರೆ. ಸಂಬಂಧಪಟ್ಟ ಇಲಾಖೆಯ ಜಿಲ್ಲಾಧಿಕಾರಿಗಳು ಹಾಗೂ ತಾಲೂಕಾ ಅಧಿಕಾರಿಗಳು ಬಾಲಕರ ಮೆಟ್ರಿಕ್ ನಂತರದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕೊಡಬೇಕು ” ಎಂದು ಆಗ್ರಹಿಸಿದರು.

ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ತಾಲೂಕ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗೀತಾ ಆಲೂರ ಅವರು, “ಎಲ್ಲ ಸೌಲಭ್ಯಗಳನ್ನು ಒದಗಿಸಲು ಸಮಯಬೇಕು” ಎಂದಾಗ ವಿದ್ಯಾರ್ಥಿಗಳು ತಿರಸ್ಕರಿಸಿದರು. 

“ತಕ್ಷಣಕ್ಕೆ ಕೆಲವು ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಿದ್ದು, ಸೋಪ್ ಕೀಟ್, ಹಾಸಿಗೆ ಹೋದಿಕೆ, ನೀರು, ಶೌಚಾಲಯ ಸ್ವಚ್ಛತೆ, ಆಟದ ಸಾಮಗ್ರಿಗಳು, ಸ್ನಾನಕ್ಕೆ ಬಕೆಟ್ ಇವುಗಳನ್ನು ಕಲ್ಪಿಸಿದರು. ಇನ್ನೂ ಕೆಲವು ಬೇಡಿಕೆಗಳು ಕಟ್ಟಡ ಸೋರಿಕೆ, ಕೀಟಕಿ ರೀಪೇರಿ, ಸೋಳ್ಳೇ ಪರದೆ, ಕಂಪ್ಯೂಟರ್ ಲ್ಯಾಬ್ ಇವುಗಳನ್ನು ಒಂದು ತಿಂಗಳ ಅವಧಿಯಲ್ಲಿ ಸರಿಪಡಿಸುತ್ತೇವೆಂದು ಲಿಖಿತ ರೂಪದಲ್ಲಿ ಭರವಸೆ” ನೀಡಿದರು.

ಪ್ರತಿಭಟನೆಯಲ್ಲಿ ಮೇಲ್ವಿಚಾರಕರು ಅಲಿ ನದಾಫ, ಗಜೇಂದ್ರಗಡ ಎಸ್ ಎಫ್ ಐ ತಾಲೂಕ ಅಧ್ಯಕ್ಷರು ಅನಿಲ್ ಆರ್, ಹಾಸ್ಟೆಲ್ ಉಪ ಸಮಿತಿಯ ಸಹ ಸಂಚಾಲಕರು ಶರಣು ಮಾಟರಂಗಿ ಹಾಗೂ ದುರಗಪ್ಪ ಮಾದರ, ಸುನೀಲ್ ರಾಠೋಡ, ಪರಶುರಾಮ ಲಮಾಣಿ ಮಹಾಂತೇಶ, ಹನುಮಂತಪ್ಪ ನೆಲ್ಲೂರ, ಸಂಗಪ್ಪ ಮಾದರ, ಮಾಂತೇಶ್ ದ್ಯಾಮಣ್ಣವರ, ರಾಜೇಶ ಮಾದರ ದರ್ಶನ್ ಚಲವಾದಿ, ಗಂಗಾಧರ್ ಲಮಾಣಿ ಹಾಗೂ ವಸತಿ ನಿಲಯದ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...