ಗದಗ | ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ

Date:

ಅಹಿಂದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನ ಯೋಜನೆಯಲ್ಲಿ ಕತ್ತರಿ ಪ್ರಯೋಗ ಮಾಡಿರುವ ರಾಜ್ಯ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ಖಂಡಿಸಿ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿತು. ಆ ಬಳಿಕ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

- Advertisement -

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ರಾಜ್ಯ ಪದಾಧಿಕಾರಿ ಗಣೇಶ ರಾಠೋಡ ಮಾತನಾಡಿ, “ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ವಿದ್ಯಾರ್ಥಿಗಳಿಗೆ ಎಸೆಸೆಲ್ಸಿಯಲ್ಲಿ ಶೇಕಡಾ 60 ರಿಂದ 74.99 ಫಲಿತಾಂಶದೊಂದಿಗೆ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ 7000 ಪ್ರೋತ್ಸಾಹ ಧನವನ್ನು ಈ ಶೈಕ್ಷಣಿಕ ವರ್ಷದಲ್ಲಿ ರದ್ದು ಮಾಡಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಎಸ್‌ಸಿಪಿ-ಟಿಎಸ್‌ಪಿ ಯೋಜನೆಗಾಗಿ ಸಾವಿರಾರು ಕೋಟಿ ರೂಪಾಯಿ ಹಣ ಖರ್ಚು ಮಾಡುತ್ತಿದ್ದೇವೆ ಎಂದು ಹೇಳುತ್ತಿರುವ ಮುಖ್ಯಮಂತ್ರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರು, ಶೋಷಿತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಉತ್ತೇಜಿಸಲು ಯೋಜನೆಗಳನ್ನು ರೂಪಿಸಬೇಕೆ ವಿನಃ ಆ ಯೋಜನೆಗಳಿಗೆ ಕತ್ತರಿ ಪ್ರಯೋಗ ಮಾಡುವುದಲ್ಲ. ಪರಿಷ್ಕೃತ ಆದೇಶದಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಏನು ಹೇಳಲು ಬಯಸುತ್ತೀರಿ” ಎಂದು ಪ್ರಶ್ನಿಸಿದರು.

ನಂತರ ಮಾತನಾಡಿದ ಎಸ್‌ಎಫ್‌ಐನ ಜಿಲ್ಲಾ ಮುಖಂಡ ಚಂದ್ರು ರಾಠೋಡ್ , “ಸರಕಾರವು ಈ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಮರುಪಾವತಿ ವಿಷಯಕ್ಕೆ ಪರಿಷ್ಕೃತ ಆದೇಶವನ್ನು ಹೊರಡಿಸಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಮಾತ್ರ ಶುಲ್ಕ ಮರುಪಾವತಿಗೆ ಅರ್ಹತೆ ಹೊಂದಿದ್ದಾರೆ ಎಂದಿದೆ. ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಗೆ ಅರ್ಹತೆ ಹೊಂದಿಲ್ಲ, ಅವರಿಗೆ ಶುಲ್ಕ ಮರುಪಾವತಿ ಕೊಡವುದಿಲ್ಲ ಎಂದು ಹೇಳುತ್ತಿದ್ದಾರೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು, ಹಿಂದುಳಿದ ವರ್ಗಗಳ ಸಮುದಾಯದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಯಾವಾಗ ಸರಿಪಡಿಸುತ್ತೀರಿ? ಎಂದು ಸರ್ಕಾರವನ್ನು ಪ್ರಶ್ನಿಸಿದರು.

ಎಸ್‌ಎಫ್‌ಐನ ತಾಲೂಕು ಮುಖಂಡರಾದ ಅನಿಲ ರಾಠೋಡ್ ಮಾತನಾಡಿ, “ಅಲ್ಪಸಂಖ್ಯಾತ ಸಮುದಾಯದ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಇದ್ದ ಪ್ರೋತ್ಸಾಹ ಧನವನ್ನು 25 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿ ಮಾಡಿ ಈ ಹಿಂದಿನ ಬಿಜೆಪಿ ಸರಕಾರ ಕಡಿತ ಮಾಡಿತ್ತು. ಅದನ್ನು ಸರಿಪಡಿಸಿ ಎಂದು ಒಂದು ವರ್ಷದಿಂದ ಸಚಿವರಿಗೆ ಮನವಿ ಪತ್ರ ಕೊಡುತ್ತಾ ಬಂದಿದ್ದರೂ, ಯಾಕೆ ಸರಿಪಡಿಸುತ್ತಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ತಿರುಪತಿ, ಅಂದಪ್ಪ ಕುರಿ, ಮೈಬು ಹವಾಲ್ದಾರ್, ಬಸು, ಕನಕಪ್ಪ ಮತ್ತು ಇತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...