ಗದಗ | ಶಕ್ತಿ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರ ಕನಸುಗಳನ್ನು ನನಸಾಗಿಸಿ, ಅವರ ಬದುಕಿಗೆ ಶಕ್ತಿ ತುಂಬಿದೆ: ಅಶೋಕ ಮಂದಾಲಿ

Date:

“ಪ್ರಪಂಚಾದ್ಯಂತ ಹಾಗೂ ದೇಶದಾದ್ಯಂತ ಒಂದು ಸರ್ಕಾರ ಹೆಣ್ಣುಮಕ್ಕಳಿಗೆ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಕಲ್ಪಿಸಿರುವ ಏಕೈಕ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಎಂಬ ಹೆಮ್ಮೆ, ಸಾರ್ಥಕತೆ ನಮಗಿದೆ. ಶಕ್ತಿ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರ ಕನಸುಗಳನ್ನು ನನಸಾಗಿಸಿ, ಅವರ ಬದುಕಿಗೆ ಶಕ್ತಿ ತುಂಬಿದೆ” ಎಂದು ತಾಲೂಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಹೇಳಿದರು.

- Advertisement -

ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೋಂದಾದ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ  ಸಂಭ್ರಮದ ಹಿನ್ನೆಲೆಯಲ್ಲಿ‌ ಗದಗ ಪಟ್ಟಣದ ಗಾನಯೋಗಿ ಪಂಡಿತ್ ಪುಟ್ಟರಾಜ ಗವಾಯಿಗಳ ಬಸ್ ನಿಲ್ದಾಣದಲ್ಲಿ ಸೋಮವಾರ ಬಸ್ ಗೆ ಪೂಜೆ ಮಾಡಿ, ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ಮಹಿಳಾ ಸಬಲೀಕರಣದ ಮಹತ್ವಾಕಾಂಕ್ಷೆಯೊಂದಿಗೆ ಪ್ರಾರಂಭಿಸಲಾದ ‘ಶಕ್ತಿ’ ಯೋಜನೆಯ ಫಲಾನುಭವಿಗಳ ಸಂಖ್ಯೆ ಇಂದಿಗೆ 500 ಕೋಟಿ ಗಡಿಯನ್ನು ದಾಟಿ ದಾಖಲೆ ಬರೆದಿದೆ‌ ಇದೊಂದು ಹೊಸ‌ ಮೈಲುಗಲ್ಲಾಗಿದೆ” ಎಂದರು.

“ನಾಡಿನ ಹೆಣ್ಣುಮಕ್ಕಳು ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗೆ ಕುಟುಂಬದ ಯಜಮಾನನ ಮೇಲೆ ಅವಲಂಬಿತರಾಗದೆ ಸ್ವತಂತ್ರ ನಿರ್ಣಯ ಕೈಗೊಂಡು ಸ್ವಾವಲಂಬಿ ಬದುಕಿನೆಡೆಗೆ ಪಯಣಿಸಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿ ಮಾಡಲಾಗಿದ್ದು, ಇದು ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬಗ್ಗೆ ಹೆಮ್ಮೆಯಿದೆ” ಎಂದರು.

“ಗದಗ ತಾಲೂಕು ಸಾರಿಗೆ ಘಟಕದಲ್ಲಿ 8,31,378 ಮಹಿಳಾ ಪ್ರಯಾಣಿಕರು ಪ್ರಯಾಣ ಬೆಳೆಸುವ ಮೂಲಕ ದಾಖಲೆಯ 253.28 ಲಕ್ಷ ಟಿಕೆಟ್ ಮೊತ್ತದ ಪ್ರಯಾಣ ಮಾಡಿದ್ದಾರೆ. ಅದರಂತೆ ಗದಗ ಜಿಲ್ಲೆಯಲ್ಲಿ 10.98 ಲಕ್ಷ ಮಹಿಳೆಯರು ಪ್ರಯಾಣಿಸುವ ಮೂಲಕ 358.89 ಕೋಟಿ ಆದಾಯವಾಗಿದೆ” ಎಂದರು.

“ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ, ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್ ಕೆ ಪಾಟೀಲ ಅವರ ಇಚ್ಚಾಶಕ್ತಿ ಕಾರ್ಯವೈಖರಿಯಿಂದ ಮತ್ತು ಸಹಕಾರದಿಂದ ಪಂಚ ಗ್ಯಾರಂಟಿ ಯೋಜನೆಗಳು ಯಶ್ವಸಿಯಾಗಿವೆ” ಎಂದು ಅಶೋಕ ಮಂದಾಲಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಮಾನವ-ಮೊಸಳೆ ಸಂಘರ್ಷಕ್ಕೆ ಅರಣ್ಯ ಇಲಾಖೆಯಿಂದ ಬೇಲಿ ತಂತ್ರ

“ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸದಸ್ಯ ಕೃಷ್ಣಗೌಡ ಹೆಚ್ ಪಾಟೀಲ ಮಾತನಾಡಿ, “ಐದು ಗ್ಯಾರಂಟಿ ಯೋಜನೆಗಳ ಪೈಕಿ ರಾಜ್ಯ ಸರ್ಕಾರ ಮೊದಲು ಜಾರಿಗೊಳಿಸಿದ ‘ಶಕ್ತಿ’ ಯೋಜನೆ ರಾಜ್ಯದ ಎಲ್ಲಾ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಒದಗಿಸಿ ರಾಜ್ಯದ‌ ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಕಾರಣವಾಗಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮಿತಿ ಸದಸ್ಯರುಗಳಾದ ಶಂಭು ಎಸ್ ಕಾಳೆ, ಮೀನಾಕ್ಷಿ ಬೆನಕಣ್ಣನವರ, ಸಾವಿತ್ರಿ ಹೂಗಾರ, ದಯಾನಂದ್ ಪವಾರ, ಸಂಗು ಕರೆಕಲಮಟ್ಟಿ, ಎನ್ ಬಿ ದೇಸಾಯಿ, ಸಂಗಮೇಶ್ ಹಾದಿಮನಿ, ರಮೇಶ್ ಹೊನ್ನಿ ಕಾಯ್ಕರ, ದೇವರಡ್ಡಿ ತಿರ್ಲಾಪುರ್, ಮಲ್ಲಪ್ಪ ಚಿಂಚಲಿ, ಗಣೇಶ್ ಸಿಂಗ್ ಮಿಟಾಡೆ, ಮಲ್ಲಪ್ಪ ಬಾರಕೇರ, ಭಾಷಾ ಮಲ್ಲಸಮುದ್ರ ಹಾಗೂ ಗಣರಾದ ಬಸವರಾಜ ಕಡೆಮನಿ, ಜಾನಕಿ ಮಲ್ಲಾಪುರ,ಶರೀಪ್‌ ಬಿಳಿಯಲಿ,  ವಾಯು ಕರ್ನಾಟಕ ರಸ್ತೆ ಸಾರಿಗೆ ನಿಗಮದ ಗದಗ ವಿಭಾಗೀಯ ನಿಯಂತ್ರಣಾಧಿಕಾರಿ ಡಿ ದೇವರಾಜ, ವಿಭಾಗೀಯ ಸಂಚಲನಾಧಿಕಾರಿ ಪಿ ವೈ ಮೇತ್ರಿ, ಡಿಪೋ ಮ್ಯಾನೇಜರ ಬಿ ಎಲ್ ಗೆಣ್ಣೂರ, ಕಂಟ್ರೋಲರಳಾದ ವೆಂಕಟೇಶ್ ಜಾದವ, ಶಿವಾನಂದ ಸಂಗಣ್ಣನವರ, ಎಂಬಿ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...