ಗದಗ | ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ

Date:

Advertisements

ಶಿರಹಟ್ಟಿ ಮತಕ್ಷೇತ್ರದ ಶಾಸಕ ಡಾ.ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ಸುನೀಲ್ ಚವ್ಹಾಣ್ (25) ಆತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿ.

ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡದ ಕಾಲೋನಿಯಲ್ಲಿರುವ ಶಾಸಕ ಚಂದ್ರು ಲಮಾಣಿ ಅವರಿಗೆ ಸೇರಿದ ಅತಿಥಿಗಳಿಗೆಂದು ಮೀಸಲಿಟ್ಟಿದ್ದ ಮನೆಯಲ್ಲಿ  ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Advertisements

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಮನೆ ಕಟ್ಟುವ ವಿಷಯದಲ್ಲಿ ಸಹೋದರರ ನಡುವೆ ಕಲಹ ಏರ್ಪಟ್ಟಿತ್ತು. ಹೀಗಾಗಿ ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಶಾಸಕರ ಹತ್ತಿರದ ಸಂಬಂಧಿಯೂ‌ ಆಗಿರುವ ಸುನೀಲ್, ಕಳೆದ ಮೂರು ವರ್ಷಗಳಿಂದ ಶಾಸಕರಿಗೆ ಚಾಲಕನಾಗಿ ಕೆಲಸ‌ ಮಾಡುತ್ತಿದ್ದನು.

ಸ್ಥಳಕ್ಕೆ ಪೊಲೀಸರು ಭೇಟಿ‌ ನೀಡಿ,‌ ಪರಿಶೀಲನೆ ನಡೆಸಿದ್ದು, ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X